Connect with us

Chamarajanagar

ಕೊರೊನಾಗೆ ಮಾಜಿ ಶಾಸಕ ಸಿ.ಗುರುಸ್ವಾಮಿ ಬಲಿ

Published

on

ಚಾಮರಾಜನಗರ: ಕೊರೊನಾಗೆ ಮಾಜಿ ಶಾಸಕ ಪಿ.ಗುರುಸ್ವಾಮಿ ಬಲಿಯಾಗಿದ್ದಾರೆ.

ಮಾಜಿ ಶಾಸಕ ಪಿ.ಗುರುಸ್ವಾಮಿ ಅವರಿಗೆ ಕೆಲ ದಿನಗಳ ಹಿಂದೆ ಕೊರೊನಾ ಸೋಂಕು ದೃಢಪಟ್ಟಿತ್ತು. ಸೋಂಕು ತಗುಲಿರೋದು ಖಚಿತವಾಗ್ತಿದ್ದಂತೆ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಮಾಜಿ ಶಾಸಕರು ನಿಧನ ಹೊಂದಿದ್ದಾರೆ.

ಚಾಮರಾಜನಗರ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾದ ಏಕೈಕ ಬಿಜೆಪಿ ಶಾಸಕರಾಗಿದ್ದರು. 1999ರಲ್ಲಿ ನಡೆದ ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಗುರುಸ್ವಾಮಿ ಕಣಕ್ಕಿಳಿದಿದ್ದರು. ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಕ್ಷೇತ್ರದಲ್ಲಿ ಮೊದಲ ಬಾರಿಗೆ ಕಮಲದ ಬಾವುಟ ಹಾರಿಸಿದ್ದರು.

Click to comment

Leave a Reply

Your email address will not be published. Required fields are marked *