ಮಾಜಿ ಶಾಸಕ ಡಾ. ಹೆಚ್‌ಡಿ ಚೌಡಯ್ಯ ನಿಧನ

Public TV
1 Min Read
HD Chaudayya

ಮಂಡ್ಯ: ಮಾಜಿ ಶಾಸಕ ಡಾ. ಹೆಚ್‌ಡಿ ಚೌಡಯ್ಯ ನಿಧನರಾಗಿದ್ದಾರೆ.

ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಶಾಸಕ ಬುಧವಾರ 2:15 ನಸುಕಿನ ವೇಳೆ ಮಂಡ್ಯದ ಹೊಳಲು ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

ಚೌಡಯ್ಯ 4 ಬಾರಿ ಮಂಡ್ಯದ ಕೆರೆಗೋಡು ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. 2 ಬಾರಿ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಕಾವೇರಿ ಹೋರಾಟದಲ್ಲಿ ಮಾದೇಗೌಡರೊಂದಿಗೆ ಪಾಲ್ಗೊಂಡಿದ್ದು, ಪಿಇಟಿ ಶಿಕ್ಷಣ ಸಂಸ್ಥೆ ಬೆಳೆಸುವ ನಿಟ್ಟಿನಲ್ಲಿಯೂ ಶ್ರಮವಹಿಸಿದ್ದರು. ಇದನ್ನೂ ಓದಿ: ಹಿರಿಯ ಗಾಯಕ ಬಪ್ಪಿ ಲಹರಿ ಇನ್ನಿಲ್ಲ

ಹೆಚ್‌ಡಿ ಚೌಡಯ್ಯ ನಿಧನಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ. ಮಾಜಿ ಶಾಸಕರು, ಶಿಕ್ಷಣ ತಜ್ಞರು, ಶಿಸ್ತು, ದಕ್ಷ ಆಡಳಿಗಾರರೂ ಆಗಿದ್ದ ಹೆಚ್‌ಡಿ ಚೌಡಯ್ಯ ಅವರ ನಿಧನ ನನಗೆ ಬಹಳ ನೋವನ್ನುಂಟು ಮಾಡಿದೆ. ನಾಲ್ಕು ಅವಧಿಗೆ ಶಾಸಕರು, ಎರಡು ಅವಧಿಗೆ ವಿಧಾನ ಪರಿಷತ್ ಸದಸ್ಯರೂ ಆಗಿದ್ದ ಅವರು ಆದರ್ಶ ಜನಪ್ರತಿನಿಧಿ ಆಗಿದ್ದರು. ವಿವಿಧ ಕ್ಷೇತ್ರಗಳಲ್ಲಿ ಸಮಾಜಕ್ಕೆ ಎಣೆ ಇಲ್ಲದಷ್ಟು ಸೇವೆ ಸಲ್ಲಿಸಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ: ಹಿಜಬ್-ಕೇಸರಿ ವಿವಾದ – ಉಡುಪಿ, ಶಿವಮೊಗ್ಗದ ಕೆಲ ಕಾಲೇಜ್‍ಗಳಿಗೆ ರಜೆ ಘೋಷಣೆ

ಹೆಚ್‌ಡಿ ಚೌಡಯ್ಯ ಅವರ ಅಗಲಿಕೆಯೊಂದಿಗೆ ಪ್ರಾಮಾಣಿಕ, ಸೇವಾತತ್ಪರ, ನಿಸ್ವಾರ್ಥ ರಾಜಕಾರಣದ ಕೊಂಡಿಯೊಂದು ಕಳಚಿದಂತಾಗಿದೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಈ ದುಃಖವನ್ನು ಭರಿಸುವ ಶಕ್ತಿಯನ್ನು ಕುಟುಂಬದವರು ಹಾಗೂ ಅಭಿಮಾನಿಗಳಿಗೆ ಭಗವಂತ ಕರುಣಿಸಲಿ ಎಂದು ಪ್ರಾರ್ಥನೆ ಮಾಡುತ್ತೇನೆ ಎಂದು ಕಂಬನಿ ಮಿಡಿದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *