LatestMain PostNational

ರಾಹುಲ್ ಗಾಂಧಿ ಸಮ್ಮುಖದಲ್ಲಿ ಕಾಂಗ್ರೆಸ್‍ಗೆ ಸೇರ್ಪಡೆಗೊಂಡ ಕೊತ್ತೂರು ಮಂಜುನಾಥ್, ಎಂ.ಸಿ. ಸುಧಾಕರ್

Advertisements

ನವದೆಹಲಿ: ಮಾಜಿ ಶಾಸಕರಾದ ಕೋಲಾರ ಜಿಲ್ಲೆಯ ಮುಳಬಾಗಿಲಿನ ಕೊತ್ತೂರು ಮಂಜುನಾಥ್ ಹಾಗೂ ಚಿಂತಾಮಣಿಯ ಡಾ.ಎಂ.ಸಿ. ಸುಧಾಕರ್ ಇಂದು ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

ಇಂದು ದೆಹಲಿಯಲ್ಲಿ ರಾಹುಲ್ ಗಾಂಧಿಯನ್ನು ಕೋಲಾರ – ಚಿಕ್ಕಬಳ್ಳಾಪುರ ಅವಳಿ ಜಿಲ್ಲೆಯ ಹಾಲಿ ಹಾಗೂ ಮಾಜಿ ಶಾಸಕರ ನಿಯೋಗ ಭೇಟಿಯಾಗಿ ಸಾಕಷ್ಟು ಕುತೂಹಲ ಮೂಡಿಸಿದೆ. ಈ ವೇಳೆ ಕೊತ್ತೂರು ಮಂಜುನಾಥ್ ಮತ್ತು ಡಾ.ಎಂ.ಸಿ. ಸುಧಾಕರ್ ಅಧಿಕೃತವಾಗಿ ಪಕ್ಷ ಸೇರ್ಪಡೆಯಾಗಿದ್ದಾರೆ. ಇದನ್ನೂ ಓದಿ: ಕೊರೊನಾ ಸ್ಫೋಟ – ಬೆಂಗ್ಳೂರು, ಮೈಸೂರು, ದ.ಕ ಜಿಲ್ಲೆಗಳಲ್ಲಿ ಭಾರೀ ಏರಿಕೆ

ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ದೆಹಲಿಗೆ ತೆರಳಿರುವ ನಿಯೋಗದ ಜೊತೆಗೆ ಇತ್ತೀಚೆಗೆ ಜೆಡಿಎಸ್ ತೊರೆದ ಶಾಸಕ ಶ್ರೀನಿವಾಸಗೌಡ ಇದ್ದರು.

ಈ ಮೂಲಕ ಅವಳಿ ಜಿಲ್ಲೆಗೆ ಸಂಬಂಧಿಸಿದಂತೆ ಕಾಂಗ್ರೆಸ್‍ನ ರಣತಂತ್ರ ದೆಹಲಿಯಲ್ಲಿ ನಡಿತಿದ್ಯಾ ಅನ್ನೋ ಅನುಮಾನಗಳು ಮೂಡಿದೆ. ಈ ಮಧ್ಯೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕೋಲಾರ ಕ್ಷೇತ್ರ ಆಯ್ಕೆ ಕೂಡ ಚರ್ಚೆ ನಡೆದಿದೆ ಎಂದು ಮೂಲಗಳಿಂದ ವರದಿಯಾಗಿದೆ. ಇದನ್ನೂ ಓದಿ: ಶಿಂಧೆ ಬಣದ ಹೊಡೆತಕ್ಕೆ ಅಘಾಡಿ ಸರ್ಕಾರ ಪತನ – ಉದ್ಧವ್‌ ಠಾಕ್ರೆ ರಾಜೀನಾಮೆ


ಕೋಲಾರ – ಚಿಕ್ಕಬಳ್ಳಾಪುರ ಅವಳಿ ಜಿಲ್ಲೆಯ ಹಾಲಿ ಹಾಗೂ ಮಾಜಿ ಶಾಸಕರ ನಿಯೋಗ ಮಾಜಿ ಸಂಸದ ಕೆ.ಎಚ್ ಮುನಿಯಪ್ಪ ವಿರೋಧಿ ಬಣದ ಗುಂಪಾಗಿ ಗುರುತಿಸಿ ಕೊಂಡಿರುವುದ ವಿಶೇಷ. ಕಳೆದ ಲೋಕಸಭಾ ಚುನಾವಣೆಯಲ್ಲಿ ಮುನಿಯಪ್ಪ ಸೋಲಿಗೆ ಈ ಗುಂಪು ಕಾರಣ ಎಂಬ ಮಾತು ಕೇಳಿಬಂದಿತ್ತು. ಆ ಬಳಿಕ ಈ ನಾಯಕರು ಕಾಂಗ್ರೆಸ್ ಸೇರ್ಪಡೆಗೆ ಮುನಿಯಪ್ಪ ವಿರೋಧ ವ್ಯಕ್ತಪಡಿಸಿದ್ದರು.

Live Tv

Leave a Reply

Your email address will not be published.

Back to top button