Connect with us

Dharwad

ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿಲ್ಲ- ಮಾಜಿ ಶಾಸಕ ಎಂ.ಎಸ್.ಅಕ್ಕಿ ಸ್ಪಷ್ಟನೆ

Published

on

ಹುಬ್ಬಳ್ಳಿ: ನಾನು ಮಾಜಿ ಸಚಿವ ಸಂತೋಷ್ ಲಾಡ್‍ರನ್ನು ಭೇಟಿಯಾಗಲು ಹೋಗಿದ್ದೆ. ಅದನ್ನೇ ನಾನು ಕಾಂಗ್ರೆಸ್ಸಿಗೆ ಸೇರಿದ್ದೇನೆ ಎಂದು ಹಾಕಿದ್ದಾರೆ. ಆದರೆ ನಾನೂ ಕಾಂಗ್ರೆಸ್‍ಗೆ ಸೇರ್ಪಡೆಯಾಗಿಲ್ಲ ಎಂದು ಕುಂದಗೋಳದ ಮಾಜಿ ಶಾಸಕ ಎಂ.ಎಸ್.ಅಕ್ಕಿ ಹೇಳಿದ್ದಾರೆ.

ಎರಡು ದಿನಗಳ ಹಿಂದೆ ಮಾಜಿ ಸಚಿವ ಹಾಗೂ ಕಲಘಟಗಿ ಕ್ಷೇತ್ರದ ಮಾಜಿ ಶಾಸಕ ಸಂತೋಷ್ ಲಾಡ್ ಎರಡು ವರ್ಷಗಳ ನಂತರ ಕ್ಷೇತ್ರಕ್ಕೆ ಭೇಟಿ ನೀಡಿದ್ದರು. ಅದೇ ಸಮಯದಲ್ಲಿ ಕೆಲವರೊಂದಿಗೆ ಬಂದು ಭೇಟಿಯಾಗಿ ಉಭಯ ಕುಶಲೋಪರಿ ನಡೆಸಿದ್ದೆ. ಬದಲಾಗಿ ನಾನು ಕಾಂಗ್ರೆಸ್ ಸೇರ್ಪಡೆಯಾಗಲು ಲಾಡ್ ಬಳಿ ತೆರಳಿರಲಿಲ್ಲವೆಂದು ಮಾಜಿ ಶಾಸಕ ಎಂ ಎಸ್ ಅಕ್ಕಿ ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ಸೋತು ಎರಡು ವರ್ಷದ ಬಳಿಕ ಕ್ಷೇತ್ರಕ್ಕೆ ಕಾಲಿಟ್ಟ ಸಂತೋಷ್ ಲಾಡ್

ಮಾಜಿ ಸಚಿವ ಸಂತೋಷ್ ಲಾಡ್‍ರನ್ನು ಮಾಜಿ ಶಾಸಕ ಎಂ.ಎಸ್.ಅಕ್ಕಿ ಭೇಟಿಯಾದ ಮರುದಿನವೇ ಕಾಂಗ್ರೆಸ್ ವಲಯದ ವಾಟ್ಸಾಫ್ ಗ್ರೂಪ್ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಎಂ.ಎಸ್.ಅಕ್ಕಿ ಕಾಂಗ್ರೆಸ್ ಪಕ್ಷಕ್ಕೆ ಸಂತೋಷ್ ಲಾಡ್ ಬರಮಾಡಿಕೊಂಡರು ಎಂದು ಪ್ರಚಾರ ಮಾಡಿದ್ದರು. ಈ ಬಗ್ಗೆ ಸ್ವತಃ ಸ್ಪಷ್ಟನೆ ನೀಡಿ ನಾನು ಕಾಂಗ್ರೆಸ್‍ಗೆ ಸೇರ್ಪಡೆಯಾಗಿಲ್ಲ. ಸುಮ್ಮನೆ ಪ್ರಚಾರ ಮಾಡಲಾಗಿದೆ. ಈಗ ಅಂತಹದೇನು ನಡೆದಿಲ್ಲ ಎಂದು ಮಾಜಿ ಶಾಸಕರು ಹೇಳಿದ್ದಾರೆ.

Click to comment

Leave a Reply

Your email address will not be published. Required fields are marked *