Connect with us

Districts

ಪೊಲೀಸ್ ಠಾಣೆ ಎದುರು ರಾಜಾ ವೆಂಕಟಪ್ಪ ನಾಯಕ ಪ್ರತಿಭಟನೆ

Published

on

ಯಾದಗಿರಿ: ಕೊಡೆಕಲ್ ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ವಿನಾಕಾರಣ ತೊಂದರೆ ನೀಡುತ್ತಿದ್ದಾರೆಂದು ಆರೋಪಿಸಿ ಸುರಪುರ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ, ಠಾಣೆಯ ಎದುರು ದಿಢೀರ್ ಧರಣಿ ಕುಳಿತ್ತಿದ್ದಾರೆ.

ಹುಣಸಗಿ ತಾಲೂಕಿನ ಕೊಡೆಕಲ್ ಪೊಲೀಸ್ ಠಾಣಾ ವ್ಯಾಪ್ತಿಯ, ಗೆದ್ದಮರಿ ಗ್ರಾಮ ಪಂಚಾಯತಿ ಚುನಾವಣೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ವಿಚಾರವಾಗಿ ಸದಸ್ಯರೊಬ್ಬರನ್ನು ಕಾಂಗ್ರೆಸ್ ಮುಖಂಡರು ಅಪಹರಣ ಮಾಡಿದ್ದಾರೆಂದು ಪ್ರಕರಣ ದಾಖಲಾಗಿದೆ. ಹೀಗಾಗಿ ಪಿಎಸ್‍ಐ ಬಾಷುಮಿಯಾ ಪ್ರಕರಣದ ತನಿಖೆಯನ್ನು ಆರಂಭಿಸಿದ್ದಾರೆ. ಆದರೆ ಈ ಆರೋಪವನ್ನು ಮಾಜಿ ಶಾಸಕ ರಾಜಾವೆಂಕಟಪ್ಪ ನಾಯಕ ಮತ್ತು ಕಾಂಗ್ರೆಸ್ ಕಾರ್ಯಕರ್ತರು ತಳ್ಳಿಹಾಕಿದ್ದಾರೆ.

ಗೆದ್ದಮರಿ ಗ್ರಾಮ ಪಂಚಾಯತಿ ಚುನಾವಣೆ ವಿಚಾರವಾಗಿ ಕಾಂಗ್ರೆಸ್ ಯಾವುದೇ ತಪ್ಪು ಮಾಡಿಲ್ಲ. ಆದರೆ ಕೊಡೆಕಲ್ ಠಾಣೆ ಸಿಬ್ಬಂದಿ ಕೆಲವರ ಮಾತು ಕೇಳಿ ನಮ್ಮ ಮೇಲೆ ಸುಳ್ಳು ಕೇಸ್ ದಾಖಲು ಮಾಡಿದ್ದಾರೆ. ಅಲ್ಲದೆ ನಮ್ಮ ಕಾರ್ಯಕರ್ತರನ್ನು ಠಾಣೆಗೆ ಕರೆಯಿಸಿ ವಿನಾಕಾರಣ ತೊಂದರೆ ನೀಡುತ್ತಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಮರು ಆರೋಪ ಮಾಡುತ್ತಿದ್ದಾರೆ. ಈ ಪ್ರಕರಣದ ತನಿಖೆ ಇಲ್ಲಿಗೆ ಕೈ ಬಿಡಬೇಕೆಂದು ಠಾಣೆಯ ಎದುರು ದಿಢೀರ್ ಧರಣಿ ನಡೆಸುತ್ತಿದ್ದಾರೆ.

Click to comment

Leave a Reply

Your email address will not be published. Required fields are marked *