ಮೈಸೂರು: ವರುಣಾ (Varuna) ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಸಿದ್ದರಾಮಯ್ಯ (Siddaramaiah) ಅವರು ಮತದಾರರಿಗೆ ಕುಕ್ಕರ್, ಐರನ್ ಬಾಕ್ಸ್ ಹಂಚಿದ್ದರಾ? ಇದೇ ಅಂಶವೇ ಅವರ ಗೆಲುವಿಗೆ ಕಾರಣವಾಯ್ತಾ ಎಂಬ ಪ್ರಶ್ನೆಗೆ ಖುದ್ದ ಸಿಎಂ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಹೌದು ಎನ್ನುವ ಉತ್ತರವನ್ನು ಕೊಟ್ಟು, ಬಾಯಿತಪ್ಪಿ ಚುನಾವಣಾ ಸತ್ಯ ಬಹಿರಂಗಪಡಿಸಿದ್ದಾರೆ.
ವರುಣಾ ಕ್ಷೇತ್ರದ ಚುನಾವಣೆ ವೇಳೆ ಕೊಟ್ಟ ಗಿಫ್ಟ್ ಬಗ್ಗೆ ಬಹಿರಂಗ ಸಭೆಯಲ್ಲಿ ಡಾ. ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಹೇಳಿಕೆ ನೀಡಿದ್ದಾರೆ. ಚುನಾವಣೆ ವೇಳೆ ವರುಣಾ ಕ್ಷೇತ್ರದ ಮಡಿವಾಳ ಸಮುದಾಯ ಸಾವಿರಾರು ಜನರಿಗೆ ಕುಕ್ಕರ್, ಐರನ್ ಬಾಕ್ಸ್ ವಿತರಣೆ ಮಾಡಲಾಗಿತ್ತು ಎಂಬ ಸತ್ಯವನ್ನು ಅವರೇ ಒಪ್ಪಿಕೊಂಡಿದ್ದಾರೆ. ಇದನ್ನೂ ಓದಿ: ಮತ್ತೆ ತಮಿಳುನಾಡಿಗೆ ಹರಿದ ಕಾವೇರಿ – KRS, ಕಬಿನಿಯಿಂದ 3,000 ಕ್ಯೂಸೆಕ್‌ಗೂ ಅಧಿಕ ನೀರು ಬಿಡುಗಡೆ
ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕು ಮಡಿವಾಳ ಸಮುದಾಯ ಭವನದ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಡಾ. ಯತೀಂದ್ರ ಸಿದ್ದರಾಮಯ್ಯ, ಭಾಷಣದ ವೇಳೆ ಚುನಾವಣಾ ಸತ್ಯ ಬಹಿರಂಗಪಡಿಸಿದ್ದು ಚುನಾವಣಾ ಸಮಯದಲ್ಲಿ ವರುಣಾ ಕ್ಷೇತ್ರದ ಮಡಿವಾಳ ಸಮುದಾಯ ಮತದಾರರಿಗೆ ಸಮುದಾಯದ ರಾಜ್ಯಾಧ್ಯಕ್ಷ ನಂಜಪ್ಪ ಕುಕ್ಕರ್, ಐರನ್ ಬಾಕ್ಸ್ ವಿತರಿಸಲು ಸಿದ್ದ ಮಾಡಿಕೊಂಡಿದ್ದರು. ಕಾರಣಾಂತರಗಳಿಂದ ಎರಡು ಮೂರು ಬಾರಿ ಮುಂದೂಡಲಾಗಿತ್ತು. ನಂತರ ತಂದೆಯವರಿಂದ ದಿನಾಂಕ ಪಡೆದು, ಅವರ ಕೈಯಲ್ಲೇ ಕುಕ್ಕರ್ ಹಾಗೂ ಐರನ್ ಬಾಕ್ಸ್ ಕೊಡಿಸಿದರು ಎಂದಿದ್ದಾರೆ.
ಆ ಕಾರ್ಯಕ್ರಮ ಬಹಳ ಯಶಸ್ವಿಯಾಯಿತು. ಮಡಿವಾಳ ಸಮುದಾಯದ ಹೆಚ್ಚು ಮತ ಬೀಳಲು ಕಾರಣವಾಯಿತು. ಮಡಿವಾಳ ಸಮುದಾಯ ಹೆಚ್ಚಿನ ಬೆಂಬಲ ಕೊಟ್ಟಿದ್ದಕ್ಕೆ ನಿಮಗೆ ಧನ್ಯವಾದ ಎಂದು ಯತೀಂದ್ರ ಹೇಳಿದ್ದಾರೆ. ಇದನ್ನೂ ಓದಿ: ತಲೆಮರೆಸಿಕೊಂಡಿದ್ದ ಹಾಲಶ್ರೀ ಒಡಿಸ್ಸಾದಲ್ಲಿ ಅರೆಸ್ಟ್
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]