ಮಾಜಿ ಎಂಎಲ್‌ಎ ರಾಜಕೀಯವಾಗಿ ಭಾಗಿಯಾಗೋದು ಅಪರಾಧವಲ್ಲ: ಯತೀಂದ್ರ ಪರ ಚಲುವರಾಯಸ್ವಾಮಿ ಬ್ಯಾಟಿಂಗ್

Public TV
1 Min Read
Yathindra Siddaramaiah Chaluvaraya Swamy

ಮಂಡ್ಯ: ಒಬ್ಬ ಮಾಜಿ ಎಂಎಲ್‌ಎ ರಾಜಕೀಯವಾಗಿ ಭಾಗಿಯಾಗೋದು ಹಾಗೂ ಸಾರ್ವಜನಿಕ ಸೇವೆಯಲ್ಲಿ ಇರೋದು ಅಪರಾಧವಲ್ಲ ಎನ್ನುವ ಮೂಲಕ ಸಚಿವ ಚಲುವರಾಯಸ್ವಾಮಿ (Chaluvaraya Swamy) ಯತೀಂದ್ರ (Yathindra Siddaramaiah) ಪರ ಬ್ಯಾಟಿಂಗ್ ಮಾಡಿದ್ದಾರೆ.

ಮಂಡ್ಯದಲ್ಲಿ ಮಾತನಾಡಿದ ಚಲುವರಾಯಸ್ವಾಮಿ, ಬೇರೆ ಅವರ ಕುಟುಂಬದಲ್ಲಿ ರಾಜಕೀಯ ಮಾಡುವಾಗ ಓಡಾಡುತ್ತಾ ಇರಲಿಲ್ವಾ? ಯತೀಂದ್ರ ಒಬ್ಬರು ಮಾಜಿ ಎಂಎಲ್‌ಎ, ಖಾಲಿ ಮನುಷ್ಯ ಅಲ್ಲ. ಸಿದ್ದರಾಮಯ್ಯ ಅವರು ವರುಣಾದಲ್ಲಿ ನಿಂತ ಕಾರಣ ಅವರು ನಿಲ್ಲಲು ಆಗಲಿಲ್ಲ. ಮೈಸೂರು ಜಿಲ್ಲೆಯಲ್ಲಿ, ಪಕ್ಷದಲ್ಲಿ ಯತೀಂದ್ರ ಪ್ರಮುಖವಾದ ಲೀಡರ್. ಮಾಜಿ ಎಂಎಲ್‌ಎಗಳು ಕೆಲಸ ಮಾಡೋದನ್ನು ತಪ್ಪು ಎನ್ನೋದಕ್ಕೆ ಆಗುತ್ತಾ? ಇಂತವರು ಲಿಸ್ಟ್ ಆಗಬೇಕು ಎನ್ನುವ ನೇಚರ್ ಯತೀಂದ್ರ ಅವರದಲ್ಲ ಎಂದರು.

ವೀಡಿಯೋದಲ್ಲಿ ಯಾವ ವಿಚಾರ ಹೇಳಿದ್ರೋ ಏನೋ ಗೊತ್ತಿಲ್ಲ. ಯಾರು ಆ ವೀಡಿಯೋ ಕಟ್ ಆಂಡ್ ಪೇಸ್ಟ್ ಮಾಡಿದ್ರೋ ಗೊತ್ತಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಕೆಲವರು ಕಟ್ ಆಂಡ್ ಪೇಸ್ಟ್ ಮಾಡುತ್ತಾರೆ. ಮಾತಾಡಿದ ರೀತಿ ಬೇರೆ ಇರುತ್ತೆ, ತೋರಿಸೋದು ಬೇರೆ ಇರುತ್ತೆ. ಯತೀಂದ್ರ ಒಬ್ಬರು ಒಳ್ಳೆಯ ವ್ಯಕ್ತಿ ಎಂದು ಹೇಳಿದರು. ಇದನ್ನೂ ಓದಿ: ಅಪ್ಪ-ಮಗ ಸೇರಿ ಸಿಎಂ ಸಚಿವಾಲಯವನ್ನು ಸುಲಿಗೆ ಅಡ್ಡಾ ಮಾಡಿಕೊಂಡಿದ್ದಾರೆ: ಹೆಚ್‌ಡಿಕೆ

ತಂದೆಯ ಬಳಿ ಯತೀಂದ್ರ ಆ ರೀತಿ ಮಾತಾಡೋದು ಎಲ್ಲಿಯೂ ನಾನು ನೋಡಿಲ್ಲ. ರಾಜಕೀಯವಾಗಿ ಭಾಗಿಯಾಗೋದು, ಸಾರ್ವಜನಿಕ ಸೇವೆಯಲ್ಲಿ ಇರೋದು ಅಪರಾಧವಲ್ಲ. ವರುಣಾ ಅಲ್ಲ ಇಡೀ ರಾಜ್ಯದಲ್ಲಿ ಕೆಲಸ ಮಾಡಲಿ ಬಿಡಿ, ಅದ್ರಲ್ಲಿ ತಪ್ಪೇನಿದೆ? ನಮ್ಮ ಕಾಂಗ್ರೆಸ್ ಮುಖಂಡರು ಕೆಲ ಸಮಸ್ಯೆ ಗಮನಕ್ಕೆ ತಂದರೆ ತಪ್ಪೇನಿದೆ? ನಮ್ಮಲ್ಲೂ ಕೆಲ ಕಡೆ ಪಿಡಿಒ ಸರಿ ಇಲ್ಲ, ಬೇರೆ ಹಾಕಿ ಎನ್ನುತ್ತಾರೆ. ಅದನ್ನು ನಾವು ತಪ್ಪು ಎನ್ನೋದಕ್ಕೆ ಆಗುತ್ತಾ? ಸಲಹೆ ಕೊಡುವುದರಲ್ಲಿ ತಪ್ಪೇನಿಲ್ಲ ಎನ್ನುವ ಮೂಲಕ ಯತೀಂದ್ರ ಸಿದ್ದರಾಮಯ್ಯರನ್ನು ಸಚಿವ ಚಲುವರಾಯಸ್ವಾಮಿ ಸಮರ್ಥನೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಸಿಎಂ ಪುತ್ರನ ಎಡವಟ್ಟು – ಯತೀಂದ್ರ ಹೇಳಿದ ಮಹದೇವ್ ಯಾರು?

Share This Article