ಬೆಂಗಳೂರು: ಹೆಚ್ಚುವರಿ ಡಿಸಿಎಂ ಹುದ್ದೆ ಬೇಡಿಕೆ ಇದ್ದರೆ ಮೂರಲ್ಲ ಐದು ಡಿಸಿಎಂ ಹುದ್ದೆ ಸೃಷ್ಟಿ ಮಾಡಲಿ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ (D.K Suresh) ಹೇಳಿದ್ದಾರೆ.
ಬೆಂಗಳೂರಿನಲ್ಲಿ (Bengaluru) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್ಚುವರಿ ಡಿಸಿಎಂ ಬಗ್ಗೆ ನನಗೆ ಮಾಹಿತಿ ಇಲ್ಲ. ಪಕ್ಷ ಚರ್ಚೆ ಮಾಡಿ ಐದು ಡಿಸಿಎಂ ಬೇಕಾದರೂ ಮಾಡಲಿ. ಮಾಡಿದರೆ ಒಳ್ಳೆಯದೇ, ಸಾಮಾಜಿಕ ನ್ಯಾಯ ಮತ್ತು ಪಕ್ಷ ಬಲವರ್ಧನೆ ಆಗಲಿ. ಎಲ್ಲಾ ಸಮುದಾಯದವರಿಗೂ ನ್ಯಾಯ ಸಿಗಬೇಕು ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ವಿದ್ಯಾರ್ಥಿನಿ ಪ್ರಬುದ್ಧಾ ಕೊಲೆ ಕೇಸ್ ಸಿಐಡಿ ಹೆಗಲಿಗೆ – ಸಿದ್ದರಾಮಯ್ಯ ಸೂಚನೆ
Advertisement
Advertisement
ನಮ್ಮ ಪಕ್ಷದಲ್ಲಿ 8 ಬಾರಿ ಗೆದ್ದ ರಾಮಲಿಂಗಾ ರೆಡ್ಡಿ, 8 ವರ್ಷ ಅಧ್ಯಕ್ಷರಾಗಿದ್ದ ಪರಮೇಶ್ವರ್ ಇದ್ದಾರೆ. ಪ್ರಚಾರ ಸಮಿತಿ ಅಧ್ಯಕ್ಷರಾಗಿದ್ದ ಎಂ.ಬಿ ಪಾಟೀಲ್, ಕಾರ್ಯಾಧ್ಯಕ್ಷರಾಗಿದ್ದ ಸತೀಶ್ ಜಾರಕಿಹೊಳಿ, ಅಲ್ಪ ಸಂಖ್ಯಾತ ನಾಯಕರಾದ ಜಮೀರ್, ಒಕ್ಕಲಿಗ ನಾಯಕರಾದ ಕೃಷ್ಣ ಭೈರೇಗೌಡ, ಚೆಲುವರಾಯಸ್ವಾಮಿ ಇದ್ದಾರೆ. ಯಾರು ಬೇಕಾದರೂ ಡಿಸಿಎಂಗಳಾಗಬಹುದು. ಎಲ್ಲಾ ಸಮುದಾಯಕ್ಕೆ ನ್ಯಾಯ ಸಿಗುತ್ತದೆ. ಪಕ್ಷ ಬಲವರ್ಧನೆ ಆಗುತ್ತದೆ ಅರ್ಹರು ಎಲ್ಲರನ್ನೂ ಮಾಡಲಿ ಎಂದು ವ್ಯಂಗ್ಯವಾಗಿ ಹೇಳಿದ್ದಾರೆ. ಇದನ್ನೂ ಓದಿ: ನಮ್ಮನ್ನು ನೆನಪಿಸಿಕೊಳ್ಳದಿದ್ದರೆ ಹೆಚ್‌ಡಿಕೆಯ ರಾಜಕಾರಣ, ದಿನಚರಿ ನಡೆಯಲ್ಲ: ಡಿ.ಕೆ.ಸುರೇಶ್
Advertisement