ಜಮೀರ್ ಮಗ, ರಿಜ್ವಾನ್ ಮಗ, ಸಿಎಂ ಮೊಮ್ಮಗನಿಗಾಗಿ ವಿಧಾನಸೌಧದಲ್ಲಿ ಕಾರ್ಯಕ್ರಮ ಮಾಡಿದ್ರಾ: ಸರ್ಕಾರದ ವಿರುದ್ಧ ಪ್ರತಾಪ್‌ ಸಿಂಹ ಕಿಡಿ

Public TV
2 Min Read
Pratap Simha

– ಕೊಹ್ಲಿ ಫೋನ್ ಮಾಡಿ ಇವತ್ತೇ ಬರ್ತೀನಿ ಕಾರ್ಯಕ್ರಮ ಮಾಡಿ ಅಂದಿದ್ರಾ ಎಂದು ವಾಗ್ದಾಳಿ

ಮೈಸೂರು: ವಿರಾಟ್ ಕೊಹ್ಲಿ (Virat Kohli) ಫೋನ್ ಮಾಡಿ ಇವತ್ತೇ ಬಂದು ಬಿಡ್ತೀನಿ ಕಾರ್ಯಕ್ರಮ ಮಾಡಿ ಅಂದಿದ್ರಾ ಎಂದು ಕಾಲ್ತುಳಿತ ದುರಂತ ವಿಚಾರವಾಗಿ ಸರ್ಕಾರದ ವಿರುದ್ಧ ಮಾಜಿ ಸಂಸದ ಪ್ರತಾಪ್ ಸಿಂಹ (Pratap Simha) ಕಿಡಿಕಾರಿದರು.

ಸರ್ಕಾರದ ಬೇಜವಾಬ್ದಾರಿತನದಿಂದ ಸಂಭ್ರಮಾಚರಣೆ ಶೋಕಾಚರಣೆಯಾಗಿ ಬದಲಾಯಿತು. ಸಿದ್ದರಾಮಯ್ಯ ಬರೀ ಒರಟು ವ್ಯಕ್ತಿ ಅಂದುಕೊಂಡಿದ್ದೆ. ನೀವು ಸಂವೇದನೆ ಇಲ್ಲದ ನಿರ್ಭಾವುಕ ಮನುಷ್ಯ ಎಂಬುದು ನಿನ್ನೆ ಗೊತ್ತಾಯಿತು. ಸಿದ್ದರಾಮಯ್ಯ ನಿರ್ಭಾವುಕ ನಿರ್ಲಜ್ಜ ವ್ಯಕ್ತಿ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಮಗಳಿಗೆ ಮದುವೆ ಮಾಡಲು ಯೋಜಿಸಿದ್ದೆವು, ನಮ್ಮ ಕಷ್ಟ ಯಾವ ತಂದೆ-ತಾಯಿಗೂ ಬೇಡ: ಮೃತ ಟೆಕ್ಕಿ ತಂದೆ ಕಣ್ಣೀರು

vidhana soudha RCB Siddaramaiah DK Shivakumar

ಸಿಎಂ ಮೊಮ್ಮಗ, ಸಚಿವರು ಮತ್ತು ಅಧಿಕಾರಿಗಳ ಮಕ್ಕಳ ಫೋಟೋಗ್ರಾಫ್ ಆಟೋಗ್ರಾಫ್‌ಗಾಗಿ ವಿಧಾನಸೌಧದ ಮುಂದೆ ಕಾರ್ಯಕ್ರಮ ನಡೆಯಿತು. ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ಗೆ ಭದ್ರತೆಯ ಪಾಠ ಮಾಡಿದ್ದ ಸಂತೋಷ್ ಲಾಡ್, ಪ್ರಿಯಾಂಕ್ ಖರ್ಗೆ ಈಗ ಎಲ್ಲಿ ಹೋದ್ರು? ಯುಪಿ ಸಿಎಂ 60 ಕೋಟಿ ಜನರನ್ನು ಸಂಭಾಳಿಸಿದ್ದಾರೆ. ನೀವು 60 ಸಾವಿರ ಜನರನ್ನು ಸಂಭಾಳಿಸಲು ಆಗಲಿಲ್ಲ. ಕಾಂಗ್ರೆಸ್‌ಗೆ ದರಿದ್ರ ಬಂದಿದೆ. ಆರ್‌ಸಿಬಿ ಗೆಲುವಲ್ಲಿ ಪ್ರಚಾರ ಪಡೆಯಲು ಜನರನ್ನು ಬಲಿ ಕೊಟ್ಟಿತು ಎಂದು ಬೇಸರ ವ್ಯಕ್ತಪಡಿಸಿದರು.

ಡಿಸಿಎಂ ಶಾಲು, ಗ್ಲಾಸ್ ಹಾಕಿಕೊಂಡು ಪೋಸ್ ಕೊಟ್ಟಿದ್ದೆ ಕೊಟ್ಟಿದ್ದು. ಅದನ್ನು ಬಿಟ್ಟು ಯಾವ ತಯಾರಿಯೂ ನಡೆದಿರಲಿಲ್ಲ. ವಿರಾಟ್ ಕೊಹ್ಲಿ ಫೋನ್ ಮಾಡಿ ಇವತ್ತೆ ಬಂದು ಬಿಡ್ತೀನಿ ಪ್ರೋಗ್ರಾಂ ಮಾಡಿ ಅಂದಿದ್ರಾ? ನಿಮಗೆ ಮರುದಿನವೇ ಕಾರ್ಯಕ್ರಮ ಮಾಡುವ ಒತ್ತಡ ಏನಿತ್ತು ಹೇಳಿ? ರೋಡ್ ಶೋ ಮಾಡಿದ್ದರೆ ಲಕ್ಷಾಂತರ ಜನ ನೋಡುತ್ತಿದ್ದರು. ಸರ್ಕಾರಕ್ಕೆ ಮಿನಿಮಮ್ ಕಾಮನ್‌ಸೆನ್ಸ್ ಇದ್ದಿದ್ದರೆ ಈ ಘಟನೆ ನಡೆಯುತ್ತಿರಲಿಲ್ಲ ಎಂದು ತರಾಟೆ ತೆಗೆದುಕೊಂಡರು. ಇದನ್ನೂ ಓದಿ: ಕಾಲ್ತುಳಿತ ಪ್ರಕರಣದ ಹೊಣೆಯನ್ನು ಸರ್ಕಾರ ವಹಿಸಿಕೊಳ್ಳುತ್ತೆ: ಪ್ರಿಯಾಂಕ್ ಖರ್ಗೆ

ಜಮೀರ್ ಮಗ, ರಿಜ್ವಾನ್ ಮಗ, ಮುಖ್ಯ ಕಾರ್ಯದರ್ಶಿ ಮಗಳು, ಸಿಎಂ ನಿಮ್ಮ ಮೊಮ್ಮಗನಿಗಾಗಿ ವಿಧಾನಸೌಧದ ಮುಂದೆ ಕಾರ್ಯಕ್ರಮ ಮಾಡಿದ್ರಾ? ಆಂಧ್ರದಲ್ಲಿ ನಟ ಅಲ್ಲು ಅರ್ಜುನ್‌ನನ್ನು ಕಾಲ್ತುಳಿತ ಪ್ರಕರಣದಲ್ಲೇ ಅರೆಸ್ಟ್ ಮಾಡಿದ್ರು. ಈಗ ಇಲ್ಲಿ ಸಿಎಂ ಅರೆಸ್ಟ್ ಆಗುತ್ತಾರಾ? ಡಿಸಿಎಂ ಅರೆಸ್ಟ್ ಆಗುತ್ತಾರಾ? ಗೃಹಮಂತ್ರಿ ತಲೆದಂಡ ಆಗುತ್ತಾ? ಯಾರು ಇದಕ್ಕೆ ಹೊಣೆ ಹೇಳಿ. ತಿಪ್ಪೆ ಸಾರಿಸಲು ತನಿಖೆಗೆ ಆದೇಶ ಮಾಡಲಾಗಿದೆ. ಇದರಿಂದ ಯಾವ ಪ್ರಯೋಜನ ಇಲ್ಲ. ಕರ್ನಾಟಕ ಪೊಲೀಸ್ ಇಲಾಖೆಗೆ ಕಳಂಕ ತರುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡಿದೆ ಎಂದು ಟೀಕಿಸಿದರು.

Share This Article