ನವದೆಹಲಿ: ಮಾಜಿ ಸಂಸದೆ ಹಾಗೂ ಚಿತ್ರನಟಿ ರಮ್ಯಾರವರ ಎಐಸಿಸಿ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥೆ ಸ್ಥಾನಕ್ಕೆ ಕತ್ತರಿ ಬಿದ್ದಿದೆ ಎಂದು ಮಾಧ್ಯಮವೊಂದು ವರದಿ ಪ್ರಕಟಿಸಿದೆ.
ಸಂಸದೆ ರಮ್ಯಾರವರು ಅಧಿಕೃತವಾಗಿ ಪಕ್ಷದ ಸಾಮಾಜಿಕ ಜಾಲತಾಣದ ಮುಖ್ಯಸ್ಥೆಯಾಗಿದ್ದರೂ ಅನಗತ್ಯವಾಗಿ ಟ್ವೀಟ್ ಮಾಡುವುದಕ್ಕೆ ನಿರ್ಬಂಧ ಹೇರಲಾಗಿದೆ. ಅಲ್ಲದೇ ರಾಹುಲ್ ಗಾಂಧಿಯವರ ಟ್ವೀಟ್ ಹಾಗೂ ಸಾರ್ವಜನಿಕ ಭಾಷಣಗಳ ಉಸ್ತುವಾರಿಗಳಿಂದಲೂ ಕೋಕ್ ನೀಡಲಾಗಿದೆ. ಅವರ ಜಾಗಕ್ಕೆ ಕೇಂದ್ರದ ಮಾಜಿ ಸಚಿವೆ ಮಾರ್ಗರೇಟ್ ಆಳ್ವಾ ಪುತ್ರ ನಿಖಿಲ್ ಆಳ್ವಾಗೆ ಜವಾಬ್ದಾರಿಯನ್ನು ನೀಡಲಾಗಿದೆ ಎಂದು ವರದಿಯಾಗಿದೆ.
Advertisement
ಸದ್ಯ ರಮ್ಯಾರವರು ರಾಹುಲ್ ಗಾಂಧಿಯವರ ಟ್ವೀಟ್‍ಗಳನ್ನು ರೀ ಟ್ವೀಟ್ ಮಾಡುವ ಮೂಲಕ ಸೋಷಿಯಲ್ ಮೀಡಿಯಾ ಘಟಕವನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದಾರೆ ಎಂದು ಹೇಳಲಾಗಿದೆ.
Advertisement
Advertisement
ಕತ್ತರಿಗೆ ಕಾರಣಗಳೇನು?
ರಮ್ಯಾರವರು ಪ್ರಧಾನಿ ಮೋದಿ ವಿರುದ್ಧ ಟ್ವೀಟ್ ಮಾಡುವ ಭರದಲ್ಲಿ ಪಕ್ಷಕ್ಕೆ ಭಾರೀ ಮುಜುಗರಕ್ಕೀಡು ಮಾಡುವಂತೆ ಮಾಡಿದ್ದರು. ಅಲ್ಲದೇ ಯುವ ಕಾಂಗ್ರೆಸ್ ಕಾರ್ಯಕರ್ತರಿಗೆ ತರಬೇತಿ ನೀಡುವ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆ ತೆರೆಯುವಂತೆ ಸಲಹೆ ನೀಡಿದ್ದು, ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು.
Advertisement
ಈ ಹಿನ್ನೆಲೆಯಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಹೆಸರಿದ್ದರೂ ಕೂಡ ರಮ್ಯಾರವನ್ನು ದೂರ ಇಡಲಾಗಿತ್ತು. ಒಂದು ವೇಳೆ ಅವರನ್ನು ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡರೇ ಪಕ್ಷಕ್ಕೆ ನಷ್ಟ ಹೆಚ್ಚಾಗುವ ಸಾಧ್ಯತೆಯಿದೆ ಎಂದು ರಾಜ್ಯ ನಾಯಕರು ಪ್ರಚಾರದಿಂದ ದೂರ ಇಟ್ಟಿದ್ದರು ಎನ್ನಲಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv