– ನಿಖಿಲ್ ಅಲ್ಲ ಕುಮಾರಸ್ವಾಮಿ ನಿಂತರೂ ಏನು ಮಾಡಕಾಗಲ್ಲ
– ಯೋಗೇಶ್ವರ್ ಆಚೆ ಕಳುಹಿಸಲು ವಿಜಯೇಂದ್ರ, ಯಡಿಯೂರಪ್ಪ ಕಾರಣ ಎಂದ ಮಾಜಿ ಸಂಸದ
ಮಂಡ್ಯ: ತಮ್ಮ ಕುಟುಂಬದವರನ್ನು ಅಧಿಕಾರಕ್ಕೆ ತರಲು ದೇವೇಗೌಡರ ಕುಟುಂಬ ಒಂದೊಂದು ನರಬಲಿ ಪಡೆಯುತ್ತದೆ ಎಂದು ಮಾಜಿ ಸಂಸದ ಶಿವರಾಮೇಗೌಡ (Shivarame Gowda) ವಾಗ್ದಾಳಿ ನಡೆಸಿದರು.
ಮಂಡ್ಯದ (Mandya) ನಾಗಮಂಗಲದಲ್ಲಿ ಮಾತನಾಡಿದ ಅವರು, ಡಾ.ಮಂಜುನಾಥ್ ಅಭ್ಯರ್ಥಿ ಮಾಡಲು ಯೋಗೇಶ್ವರ್ ಶ್ರಮವಹಿಸಿದರು. ಆದರೆ, ಚನ್ನಪಟ್ಟಣದಲ್ಲಿ ಯೋಗೇಶ್ವರ್‌ರನ್ನೇ ಬಲಿ ಪಡೆದಿದ್ದಾರೆ. ತಮ್ಮ ಕುಟುಂಬದವರನ್ನ ಅಧಿಕಾರಕ್ಕೆ ತರಲು ದೇವೇಗೌಡರ ಕುಟುಂಬ ಒಂದೊಂದು ನರಬಲಿ ಪಡೆಯುತ್ತಾರೆ. ಚನ್ನಪಟ್ಟಣ ಜನ ದಡ್ಡರಲ್ಲ, ಯೋಗೇಶ್ವರ್ ಗೆಲುವು ನಿಶ್ಚಿತ ಎಂದು ಭವಿಷ್ಯ ನುಡಿದರು. ಇದನ್ನೂ ಓದಿ: ಮುಡಾ ಕೇಸ್‌ನಲ್ಲಿ ಸಿಎಂ ಪತ್ನಿ ವಿಚಾರಣೆ; ಈಗ ಎ1 ಸಿದ್ದರಾಮಯ್ಯ ಸರದಿ – ಸದ್ಯದಲ್ಲೇ ಸಿಎಂಗೂ ನೋಟಿಸ್ ಸಾಧ್ಯತೆ
ನಿಖಿಲ್ ಅಲ್ಲ ಕುಮಾರಸ್ವಾಮಿ ನಿಂತರೂ ಏನು ಮಾಡಲಾಗಲ್ಲ. ಯೋಗೇಶ್ವರ್ ಆಚೆ ಕಳುಹಿಸಲು ವಿಜಯೇಂದ್ರ, ಯಡಿಯೂರಪ್ಪ ಕಾರಣ. ಬಿಜೆಪಿ ಪಕ್ಷದ ಗುಂಪುಗಾರಿಕೆಯಿಂದ ಯೋಗೇಶ್ವರ್ ಆಚೆ ಹೋದರು. ಪಾಪ ಈಗ ನಿಖಿಲ್‌ನನ್ನ ಚುನಾವಣಾ ಆಹುತಿ ಮಾಡ್ತಿದ್ದಾರೆ ಎಂದು ವ್ಯಂಗ್ಯವಾಡಿದರು.
ಕುಮಾರಸ್ವಾಮಿ 2 ಬಾರಿ ಲಾಟರಿಯಲ್ಲಿ ಸಿಎಂ ಆದವರು. ಕಳೆದ ಚುನಾವಣೆಯಲ್ಲಿ ಹೆಚ್‌ಡಿಕೆ ಗಾಡಿ ನಿಂತು ಹೋಗಿತ್ತು. ಪಾಪ ಮುಳುಗುವ ಹಡಗು ಎಂದು ಮಂಡ್ಯ ಜನರ ಕೈ ಹಿಡಿದರು. ಉನ್ನತ ಹುದ್ದೆಯಲ್ಲಿದ್ದು ಕುಮಾರಸ್ವಾಮಿ ಏನ್ ಮಾಡ್ತಿದ್ದಾರೆ. ಮಂಡ್ಯದಲ್ಲಿ 4 ದಿನ ಬೆಂಗಳೂರಲ್ಲಿ 4 ದಿನ ಇರ್ತಾರೆ. ದೇಶ-ವಿದೇಶ ಸುತ್ತಿ ಬೃಹತ್ ಕೈಗಾರಿಕಾಗಳ ಸ್ಥಾಪನೆ ಮಾಡಬೇಕಿತ್ತು. ಆದರೆ ರಾಜ್ಯಕ್ಕೆ ಬಂದಾಗಲೆಲ್ಲಾ ಮುಡಾ ಕೇಸು, ಡಿಕೆಶಿ ಮುಖ ಕೆರೆಯುವ ಕೆಲಸ ಮಾಡ್ತಿದ್ದಾರೆ. ದೊಡ್ಡ ದೊಡ್ಡ ಕೈಗಾರಿಕಾ ತಂದು ಮಂಡ್ಯ ಜನರ ಋಣ ತೀರಿಸುವ ಕೆಲಸ ಕುಮಾರಸ್ವಾಮಿ ಮಾಡಬೇಕು ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಹಾಸನಾಂಬೆ ದೇವಿ ದರ್ಶನ – ಎರಡನೇ ದಿನವೂ ಭಕ್ತರ ದಂಡು