– ಸುಮಲತಾ ಪೋಸ್ಟ್‌ನಲ್ಲಿದ್ಯಾ ದರ್ಶನ್‌ಗೆ ತಿರುಗೇಟು?
ಸ್ಯಾಂಡಲ್‌ವುಡ್ ನಟ ದರ್ಶನ್ (Darshan) ತನ್ನ ಇನ್ಸ್ಟಾಗ್ರಾಂ ಖಾತೆಯಲ್ಲಿ ಆಪ್ತರನ್ನು ಅನ್‌ಫಾಲೋ ಮಾಡಿದ ಬೆನ್ನಲ್ಲೇ ತಾಯಿ ಸಮಾನರಾದ ಸುಮಲತಾ ಅಂಬರೀಶ್ (Sumalatha Ambareesh) ಅವರು ಪೋಸ್ಟ್‌ವೊಂದನ್ನು ಹಾಕಿರುವುದು ಮತ್ತಷ್ಟು ಚರ್ಚೆಗೆ ಗ್ರಾಸವಾಗಿದೆ.
ಸುಮಲತಾ ಪೋಸ್ಟ್‌ನಲ್ಲಿ ಏನಿದೆ?
ಬೆಸ್ಟ್ ಆಕ್ಟಿಂಗ್ ಆಸ್ಕರ್ ಅವಾರ್ಡ್ ಯಾರಿಗೆ ಹೋಗುತ್ತೆ ಅಂದ್ರೆ.. ಯಾರು ಸತ್ಯವನ್ನ ತಿರುಚುತ್ತಾರೋ, ತಮ್ಮದೇ ತಪ್ಪು ಇಟ್ಕೊಂಡು ಬೇರೆಯವರ ಮೇಲೆ ಹಾಕಿ ನೋವು ಮಾಡೋದು, ತಮ್ಮ ಮೇಲಿನ ನಿಂದನೆಯನ್ನ ಬೇರೆಯವರ ಮೇಲೆ ಹಾಕೋದು, ಗೂಬೆ ಕೂರಿಸೋದು ಮಾಡಿ ತಮ್ಮನ್ನ ತಾವು ಹೀರೋ ಎಂಬಂತೆ ಬಿಂಬಿಸಿಕೊಳ್ಳೋದು ಎಂದು ಸುಮಲತಾ ಅವರು ಪೋಸ್ಟ್ ಮಾಡಿದ್ದಾರೆ.
ತಾಯಿ ಸಮಾನರಾದ ಸುಮಲತಾ, ತಮ್ಮನ ಸಮಾನರಾದ ಅಭಿಷೇಕ್ ಅಂಬರೀಶ್ ಹಾಗೂ ಅವಿವಾ ಬಿದ್ದಪ್ಪ ಅವರು ಸೇರಿದಂತೆ ಆರು ಮಂದಿ ಆಪ್ತರನ್ನು ನಟ ದರ್ಶನ್ ಇನ್ಸ್ಟಾದಲ್ಲಿ ಅನ್‌ಫಾಲೋ ಮಾಡಿದ್ದಾರೆ. ದರ್ಶನ್ ಈ ನಡೆ ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದೆ.
ಆರು ಮಂದಿಯನ್ನು ದರ್ಶನ್ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಫಾಲೋ ಮಾಡುತ್ತಿದ್ದರು. ಆದರೆ, ಈಗ ಅವರ ಇನ್‌ಸ್ಟಾ ಖಾತೆಯಲ್ಲಿ ‘೦’ ಫಾಲೋ ಇದೆ. ಈ ಬೆಳವಣಿಗೆ ಫ್ಯಾನ್ಸ್ ವಲಯದಲ್ಲಿ ಹಲವು ಪ್ರಶ್ನೆಗಳನ್ನು ಮೂಡಿಸಿದೆ.