ಚಿತ್ರದುರ್ಗ: ಪತ್ನಿಯ ಅಕಾಲಿಕ ಸಾವಿನಿಂದ ಮನನೊಂದ ಪತಿ ನೇಣಿಗೆ ಶರಣಾಗಿರೋ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ ಹೌಸಿಂಗ್ ಬೋರ್ಡ್ ನಲ್ಲಿ ನಡೆದಿದೆ.
ಕೆವಿ ಸ್ವಾಮಿ ಆತ್ಮಹತ್ಯೆ ಮಾಡಿಕೊಂಡ ಹೊಸದುರ್ಗ ಪುರಸಭೆ ಮಾಜಿ ಅಧ್ಯಕ್ಷ. ಇವರ ಪತ್ನಿ ಹೇಮಾ ಇತ್ತೀಚೆಗೆ ಸಾವನ್ನಪ್ಪಿದ್ದರು. ಆ ಬಳಿಕ ಸ್ವಾಮಿ ಮಾನಸಿಕವಾಗಿ ನೊಂದಿದ್ದರು ಎನ್ನಲಾಗಿದೆ.
ರಿಯಲ್ ಎಸ್ಟೇಟ್ ವ್ಯವಹಾರದಲ್ಲಾದ ತೀವ್ರ ನಷ್ಟದಿಂದಲೂ ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ಸ್ವಾಮಿ ಅವರು ಬುಧವಾರ ತೋಟದ ಮನೆಯ ಪಾಳು ಬಾವಿಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಸದ್ಯ ಸ್ವಾಮಿ ಸಾವಿನ ಬಗ್ಗೆ ಹಲವು ಅನುಮಾನಗಳು ಮೂಡಿದೆ. ಈ ಸಂಬಂಧ ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv