ಇಸ್ಲಾಮಾಬಾದ್: ಅರವಿಂದ್ ಕೇಜ್ರಿವಾಲ್ (Arvind Kejriwal) ಅವರು ಜೈಲಿನಿಂದ ಬಿಡುಗಡೆಯಾದ ಬಗ್ಗೆ ಪಾಕಿಸ್ತಾನದ ಮಾಜಿ ಸಚಿವ ಫವಾದ್ ಚೌಧರಿ (Fawad Chaudhry) ಸಂತಸ ವ್ಯಕ್ತಪಡಿಸಿದ್ದಾರೆ. ಮೋದಿ ಅವರು ಮತ್ತೊಂದು ಯುದ್ಧದಲ್ಲಿ ಸೋತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.
ಕೇಜ್ರಿವಾಲ್ ಬಿಡುಗಡೆ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಚೌದರಿ, ಮೋದಿ (Narendra Modi) ಜಿ ಅವರಿಗೆ ಮತ್ತೊಂದು ಯುದ್ಧದಲ್ಲಿ ಸೋಲಾಗಿದೆ. ಕೇಜ್ರಿವಾಲ್ ಬಿಡುಗಡೆಯು ಭಾರತದ ಜನತೆಗೆ ಒಳ್ಳೆಯ ಸಂದೇಶ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ದೇಶವನ್ನು ಸರ್ವಾಧಿಕಾರದಿಂದ ರಕ್ಷಿಸಬೇಕಿದೆ: 50 ದಿನಗಳ ಬಳಿಕ ಜೈಲಿನಿಂದ ಹೊರಬಂದ ಕೇಜ್ರಿವಾಲ್ ಪ್ರತಿಕ್ರಿಯೆ
Advertisement
Advertisement
ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ 2024 ರ ಮಾರ್ಚ್ 21 ರಂದು ಜಾರಿ ನಿರ್ದೇಶನಾಲಯವು ಕೇಜ್ರಿವಾಲ್ ಅವರನ್ನು ಬಂಧಿಸಿತ್ತು. 50 ದಿನಗಳ ನಂತರ ಕೇಜ್ರಿವಾಲ್ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
Advertisement
ಹಲವು ಷರತ್ತುಗಳನ್ನು ವಿಧಿಸಿ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ಜೂ.2 ರಂದು ಮತ್ತೆ ಪೊಲೀಸರ ಮುಂದೆ ಶರಣಾಗುವಂತೆ ದೆಹಲಿ ಸಿಎಂಗೆ ಸುಪ್ರೀಂ ಸೂಚನೆ ನೀಡಿದೆ. ಇದನ್ನೂ ಓದಿ: ದೇವರ ಆಶೀರ್ವಾದ ನನ್ನ ಜೊತೆಗಿದೆ- ಜೈಲಿನಿಂದ ಹೊರ ಬಂದ ಕೇಜ್ರಿವಾಲ್ ಫಸ್ಟ್ ರಿಯಾಕ್ಷನ್
Advertisement
ಇದಕ್ಕೂ ಮುನ್ನ, ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಂಪತ್ತಿನ ಮರುಹಂಚಿಕೆ ಸಮೀಕ್ಷೆಯನ್ನು ನಡೆಸುವುದಾಗಿ ಪಕ್ಷದ ಪ್ರಣಾಳಿಕೆಯಲ್ಲಿ ಘೋಷಿಸಿದ್ದನ್ನು ಚೌಧರಿ ಶ್ಲಾಘಿಸಿದ್ದರು. ರಾಹುಲ್ ಗಾಂಧಿಯನ್ನು ಮುತ್ತಜ್ಜ ಮತ್ತು ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರೊಂದಿಗೆ ಹೋಲಿಸಿ, ‘ಇಬ್ಬರೂ ಸಮಾಜವಾದಿಗಳು’ ಎಂದು ಚೌಧರಿ ಬಣ್ಣಿಸಿದ್ದರು.