ವಾಷಿಂಗ್ಟನ್: ಪಾಕಿಸ್ತಾನ ಕ್ರಿಕೆಟ್ ತಂಡದಲ್ಲಿ ನನ್ನನ್ನು ಮತಾಂತರ ಆಗುವಂತೆ ಶಾಹೀದ್ ಅಫ್ರಿದಿ ಒತ್ತಡ ಹೇರುತ್ತಿದ್ದರು ಎಂದು ಪಾಕಿಸ್ತಾನ ಮಾಜಿ ಕ್ರಿಕೆಟಿಗ ದನೇಶ್ ಕನೇರಿಯಾ (Danish Kaneria) ಆರೋಪಿಸಿದ್ದಾರೆ.
ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ಸ್ಪಿನ್ನರ್ ಆಗಿರುವ ದನೇಶ್ ಕನೇರಿಯಾ ಅಮೆರಿಕಾದಲ್ಲಿ ನೀಡಿದ ಸಂದರ್ಶನವೊಂದರಲ್ಲಿ ನಾನು ಹಿಂದೂ ಎಂಬ ಕಾರಣಕ್ಕೆ ನನ್ನ ಕ್ರಿಕೆಟ್ ಕೆರಿಯರ್ ಅನ್ನೇ ಹಾಳು ಮಾಡಿದರು ಎಂದು ಅಳಲು ತೋಡಿಕೊಂಡಿದ್ದಾರೆ. ಇದನ್ನೂ ಓದಿ: ಐಪಿಎಸ್ ಸೂಚನೆಯಂತೆ ರನ್ಯಾಗೆ ಗ್ರೀನ್‌ಚಾನಲ್ – ಡಿಆರ್‌ಐ ಮುಂದೆ ಶಿಷ್ಟಾಚಾರ ಅಧಿಕಾರಿ ಹೇಳಿಕೆ
ನನಗೆ ಮತಾಂತರ ಆಗುವಂತೆ ಶಾಹೀದ್ ಅಫ್ರಿದಿ ಯಾವಾಗಲೂ ಒತ್ತಡ ಹೇರುತ್ತಿದ್ದರು. ಶೋಯೆಬ್ ಅಖ್ತರ್ ಸೇರಿ ಹಲವರು ತೊಂದರೆ ನೀಡಿದ್ದರು. ಆದರೆ ಇಂಜಮಾಮ್ ನಾಯಕತ್ವದಲ್ಲಿ ನನಗೆ ಈ ಅನುಭವ ಆಗಲಿಲ್ಲ. ಇಂಜಮಾಮ್ ಮಾತ್ರ ನನ್ನ ಬೆಂಬಲಕ್ಕೆ ನಿಂತಿದ್ದರು ಎಂದು ಹೇಳಿದ್ದಾರೆ. ಇದನ್ನೂ ಓದಿ: ಕಾಲಿಗೆ ಬ್ಯಾಂಡೇಜ್ ಕಟ್ಟಿಕೊಂಡೇ ಕೋಚಿಂಗ್‌ಗೆ ಬಂದ ರಾಹುಲ್ ದ್ರಾವಿಡ್
ಪಾಕಿಸ್ತಾನದಲ್ಲಿ ನಡೆಯುತ್ತಿರುವ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ತಡೆಯಲು ಅಮೆರಿಕ ಮಧ್ಯಪ್ರವೇಶಿಸಬೇಕು ಎಂದು ದನೇಶ್ ಕನೇರಿಯಾ ಆಗ್ರಹಿಸಿದ್ದಾರೆ. ಇದನ್ನೂ ಓದಿ: 6 ಅಡಿ ಎತ್ತರದ ವ್ಯಕ್ತಿಯೊಬ್ಬ ಚಿನ್ನವಿದ್ದ ಎರಡು ಬಾಕ್ಸ್ ನೀಡಿದ್ದ: ರನ್ಯಾ ತಪ್ಪೊಪ್ಪಿಗೆ