ಇಸ್ಲಾಮಾಬಾದ್: ಪಿಟಿಐ (PTI) ಅಧ್ಯಕ್ಷ, ಪಾಕಿಸ್ತಾನದ (Pakistan) ಮಾಜಿ ಪ್ರಧಾನಿ ಇಮ್ರಾನ್ ಖಾನ್ (Imran Khan) ವಿರುದ್ಧ ಇಸ್ಲಾಮಾಬಾದ್‌ನಲ್ಲಿ (Islamabad) ಕೊಲೆ ಯತ್ನ ಪ್ರಕರಣ ದಾಖಲಾಗಿದೆ.
ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ (PML-N) ನಾಯಕ ಹಾಗೂ ರಾಷ್ಟ್ರೀಯ ಅಸೆಂಬ್ಲಿಯ ಸದಸ್ಯ ಮೊಹ್ಸಿನ್ ಶಾನವಾಜ್ ರಂಝಾ ಅವರು ಶನಿವಾರ ಇಸ್ಲಾಮಾಬಾದ್‌ನ ಸೆಕ್ರೆಟರಿಯೇಟ್ ಪೊಲೀಸ್ ಠಾಣೆಯಲ್ಲಿ ಇಮ್ರಾನ್ ಖಾನ್ ವಿರುದ್ಧ ಕೊಲೆ ಯತ್ನ ಆರೋಪವನ್ನು ಮಾಡಿದ್ದಾರೆ.
Advertisement
Advertisement
ಇಮ್ರಾನ್ ಖಾನ್ ಅವರು ಸರ್ಕಾರಿ ಉಡುಗೊರೆಗಳನ್ನು ದುಬಾರಿ ಬೆಲೆಗೆ ಮಾರಾಟ ಮಾಡಿರುವ ಆರೋಪದ ಮೇಲೆ ಪಾಕಿಸ್ತಾನದ ಚುನಾವನಾ ಆಯೋಗದಿಂದ (ECP) ಅವರನ್ನು ಅನರ್ಹಗೊಳಿಸಲಾಗಿತ್ತು. ಈ ಹಿನ್ನೆಲೆ ಆಕ್ರೋಶಗೊಂಡಿದ್ದ ಇಮ್ರಾನ್ ಖಾನ್ ಬೆಂಬಲಿಗರು ರಂಝಾ ಅವರ ಮೇಲೆ ಹಲ್ಲೆ ನಡೆಸಿರುವುದಾಗಿ ವರದಿಯಾಗಿದೆ. ಇದನ್ನೂ ಓದಿ: ಕಮ್ಯುನಿಸ್ಟ್ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಚೀನಾದ ಅಧ್ಯಕ್ಷ ಜಿನ್‌ಪಿಂಗ್ 3ನೇ ಅವಧಿಗೆ ಮರು ಆಯ್ಕೆ
Advertisement
ಇಮ್ರಾನ್ ಖಾನ್ ವಿರುದ್ಧದ ತೋಷಾಖಾನಾ ಪ್ರಕರಣಕ್ಕೆ ಸಂಬಂಧಿಸಿದಂತೆ ಆಯೋಗದ ಮುಂದೆ ಫಿರ್ಯಾದಿಯಾಗಿ ಹಾಜರಾಗಿದ್ದ ರಾಂಝಾ ತಮ್ಮ ಮೇಲೆ ದಾಳಿ ನಡೆಸಲಾಗಿದೆ ಎಂದು ದೂರು ನೀಡಿದ್ದಾರೆ. ತಮ್ಮ ಕಾರಿನ ಗಾಜನ್ನೂ ಒಡೆಯಲಾಗಿದ್ದು, ಕೊಲೆಯ ಯತ್ನ ಮಾಡಲಾಗಿದೆ ಎಂದು ರಂಝಾ ಹೇಳಿದ್ದಾರೆ.
Advertisement
ವರದಿಗಳ ಪ್ರಕಾರ ಇಮ್ರಾನ್ ಖಾನ್ ಅವರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಅಧಿಕೃತ ಭೇಟಿಗಳ ವೇಳೆ ಅರಬ್ ಆಡಳಿತಗಾರರಿಂದ ದುಬಾರಿ ಉಡುಗೊರೆಗಳನ್ನು ಪಡೆದಿದ್ದರು. ಅವುಗಳನ್ನು ತೋಷಾಖಾನಾದಲ್ಲಿ ಠೇವಣಿ ಇಡಲಾಗುತ್ತಿದ್ದು, ನಂತರ ಅದನ್ನು ಸಂಬಂಧಿತ ಕಾನೂನುಗಳ ಪ್ರಕಾರ ರಿಯಾಯಿತಿ ದರದಲ್ಲಿ ಖರೀದಿಸಿದ್ದರು. ಮಾತ್ರವಲ್ಲದೇ ದುಬಾರಿ ಬೆಲೆಗೆ ಅವುಗಳನ್ನು ಮಾರಾಟ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ದೀಪಾವಳಿ ಆಚರಿಸಿದ ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್
ಈ ಪ್ರಕರಣದ ವಿಚಾರಣೆ ನಡೆಸಿದ ಬಳಿಕ ಇಸಿಪಿ ಶುಕ್ರವಾರ ಇಮ್ರಾನ್ ಖಾನ್ ಇನ್ನು ಮುಂದೆ ರಾಷ್ಟ್ರೀಯ ಅಸೆಂಬ್ಲಿಯ ಸದಸ್ಯರಲ್ಲ ಎಂದಿದೆ. ಈ ಬಗ್ಗೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಆಯೋಗ ನಿರ್ಧರಿಸಿದೆ.