ಲಂಡನ್: ಪಾಕಿಸ್ತಾನದ ಆಡಳಿತಾರೂಢ ತೆಹ್ರಿಕ್-ಇ- ಇನ್ಸಾಫ್ ಪಕ್ಷದ ಕಾರ್ಯಕರ್ತರು ಪಾಕಿಸ್ತಾನದ ಮಾಜಿ ಪ್ರಧಾನ ಮಂತ್ರಿ ನವಾಜ್ ಶರೀಫ್ ಮೇಲೆ ಹಲ್ಲೆ ನಡೆಸಿದ್ದಾರೆ.
ದಾಳಿ ವೇಳೆ ನವಾಜ್ ಶರೀಫ್ ಅವರ ಅಂಗರಕ್ಷಕ ಗಾಯಗೊಂಡಿರುವುದಾಗಿ ವರದಿಯಾಗಿದೆ. ಪ್ರಧಾನಿ ಇಮ್ರಾನ್ ಖಾನ್ ವಿರುದ್ಧದ ಅವಿಶ್ವಾಸ ನಿರ್ಣಯದ ಮೇಲೆ ಇಂದು ಮತದಾನ ನಡೆಯುತ್ತಿರುವಂತೆಯೇ, ನವಾಜ್ ಶರೀಫ್ ಮೇಲೆ ಈ ದಾಳಿಯಾಗಿದೆ. ಇದನ್ನೂ ಓದಿ: ಆರ್ಥಿಕ ಬಿಕ್ಕಟ್ಟಿನಿಂದ ರೊಚ್ಚಿಗೆದ್ದ ಶ್ರೀಲಂಕಾ ಜನತೆ- ಪ್ರತಿಭಟನೆಗೆ ಪ್ರಮುಖ ಕಾರಣಗಳೇನು?
Advertisement
Pakistan’s former Prime Minister Nawaz Sharif has been attacked in London by a PTI activist. Action must be taken in Pakistan against the PTI as now the party has crossed all limits. Physical violence can never be condoned. PTI must be made an example now.
— Ahmad Noorani (@Ahmad_Noorani) April 2, 2022
ಒಂದು ವೇಳೆ ಅವಿಶ್ವಾಸ ನಿರ್ಣಯದ ಮೇಲೆ ಮತದಾನ ನಡೆದು ಯಶಸ್ವಿಯಾದರೆ, ಪಾಕಿಸ್ತಾನ ಮುಸ್ಲಿಂ ಲೀಗ್ ಪಕ್ಷದ ನವಾಜ್ ಶರೀಫ್ ಅವರ ಸಹೋದರ ಶೆಹಬಾಜ್ ಷರೀಫ್ ಪ್ರಧಾನಿ ಸ್ಥಾನಕ್ಕೆ ಪ್ರಬಲ ಸ್ಪರ್ಧಿಯಾಗಲಿದ್ದಾರೆ.
Advertisement
ಘಟನೆ ಕುರಿತು ಪ್ರತಿಕ್ರಿಯಿಸಿರುವ ನವಾಜ್ ಷರೀಫ್ ಪುತ್ರಿ ಮರ್ಯಮ್, ಹಿಂಸಾಚಾರ ನಡೆಸುತ್ತಿರುವ ಆಡಳಿತ ಪಕ್ಷದವರನ್ನು ಜೈಲಿಗೆ ಹಾಕಬೇಕು. ದೇಶದ್ರೋಹಕ್ಕಾಗಿ ಇಮ್ರಾನ್ ಖಾನ್ ಅವರ ಮೇಲೆ ಪ್ರಕರಣ ದಾಖಲಿಸಬೇಕು ಎಂದು ಹೇಳಿದ್ದಾರೆ.