ಐಸಿಸಿಯ ಮಾಜಿ ಎಲೈಟ್ ಪ್ಯಾನೆಲ್ ಅಂಪೈರ್ ಅಸಾದ್ ರೌಫ್ ಇನ್ನಿಲ್ಲ

Advertisements

ಇಸ್ಲಾಮಾಬಾದ್: ಐಸಿಸಿಯ (ICC) ಎಲೈಟ್ ಪ್ಯಾನೆಲ್ ಅಂಪೈರ್ (Umpire) ಆಗಿ ನೂರಕ್ಕೂ ಹೆಚ್ಚು ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಕಾರ್ಯನಿರ್ವಹಿಸಿದ್ದ ಪಾಕಿಸ್ತಾನದ (Pakistan) ಅಸಾದ್ ರೌಫ್ (66) (Asad Rauf) ಹೃದಯ ಸ್ತಂಭನದಿಂದ (Cardiac Arrest) ಮೃತಪಟ್ಟಿದ್ದಾರೆ.

Advertisements

ಪಾಕಿಸ್ತಾನದ ಲಾಹೋರ್‌ನಲ್ಲಿ ಅಸಾದ್ ರೌಫ್ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಪಾಕಿಸ್ತಾನ ಕ್ರಿಕೆಟ್ ಬೋರ್ಡ್‍ನ (PCB) ಅಧ್ಯಕ್ಷ ರಮೀಜ್ ರಾಜಾ (Ramiz Raja) ಸಹಿತ ಹಲವು ಹಿರಿಯ ಅಟಗಾರರು ಟ್ವೀಟ್ ಮೂಲಕ ಕಂಬನಿ ಮಿಡಿದಿದ್ದಾರೆ. ಇದನ್ನೂ ಓದಿ: ಐಪಿಎಲ್‍ನಿಂದ ಔಟ್ ಆಗಿದ್ದ ಅಂಪೈರ್ ಅಸಾದ್ ರೌಫ್ ಇದೀಗ ಪಾಕ್‍ನಲ್ಲಿ ಚಪ್ಪಲಿ ವ್ಯಾಪಾರಿ

Advertisements

ಅಸಾದ್ ರೌಫ್ ಅಂತಾರಾಷ್ಟ್ರೀಯ ಪಂದ್ಯಗಳ ಅಂಪೈರ್ ಅಲ್ಲದೇ ಐಪಿಎಲ್‍ನಲ್ಲೂ (IPL) ಕೂಡ ಅಂಪೈರ್ ಆಗಿ ಕೆಲಸ ನಿರ್ವಹಿಸಿದ್ದರು. ಆ ಬಳಿಕ ರೌಫ್ 2013ರ ಐಪಿಎಲ್‍ನಲ್ಲಿ ಬುಕ್ಕಿಗಳೊಂದಿಗೆ ಸಂಪರ್ಕಿಸಿ ದುಬಾರಿ ಉಡುಗೊರೆ ಪಡೆದಿದ್ದರು ಎಂಬ ಆರೋಪ ಕೇಳಿಬಂದಿತ್ತು. ಬಳಿಕ ವಿಚಾರಣೆ ನಡೆಸಿದ ಐಸಿಸಿಯ (ICC) ಶಿಸ್ತು ಸಮಿತಿ ಆರೋಪ ಸಾಭೀತಾದ ಬಳಿಕ ರೌಪ್‍ರನ್ನು 2016ರ ನಂತರ ಐದು ವರ್ಷಗಳ ಕಾಲ ಅಂತಾರಾಷ್ಟ್ರೀಯ ಪಂದ್ಯಗಳ ಅಂಪೈರಿಂಗ್‍ಗೆ ನಿಷೇಧ ಹೇರಿತ್ತು. ಈ ಮೂಲಕ ಅಸಾದ್ ರೌಫ್ ಅಂಪೈರ್ ವೃತ್ತಿ ಅಂತ್ಯ ಕಂಡಿತು.

Advertisements

ಅಸಾದ್ ರೌಫ್ 2000 ರಿಂದ 2013 ರವರೆಗೆ 49 ಟೆಸ್ಟ್, 98 ಏಕದಿನ ಪಂದ್ಯ ಮತ್ತು 23 ಟಿ20 ಪಂದ್ಯಗಳು ಸೇರಿ ಒಟ್ಟು 170 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಅಂಪೈರ್ ಆಗಿ ಕಾರ್ಯನಿರ್ವಹಿಸಿದ್ದರು. ಇದನ್ನೂ ಓದಿ: ದೇಶೀಯ, ಅಂತಾರಾಷ್ಟ್ರೀಯ ಕ್ರಿಕೆಟಿಗೆ ಕನ್ನಡಿಗ ರಾಬಿನ್‌ ಉತ್ತಪ್ಪ ಗುಡ್‌ಬೈ

ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮ್ಯಾನ್‌ ಆಗಿದ್ದ ರೌಫ್, 71 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದು, 3423 ರನ್ ಗಳಿಸಿದ್ದಾರೆ. ಜೊತೆಗೆ 40 ಲಿಸ್ಟ್ ಎ ಪಂದ್ಯಗಳನ್ನು ಆಡಿ 611 ರನ್ ಹೊಡೆದಿದ್ದರು. ಇದನ್ನೂ ಓದಿ: ಗಂಗೂಲಿ, ಜಯ್‌ ಶಾಗೆ ಸುಪ್ರೀಂನಿಂದ ಬಿಗ್‌ ರಿಲೀಫ್‌ – ಐಸಿಸಿಯ ಬಾಸ್‌ ಆಗ್ತಾರಾ ದಾದಾ?

Live Tv

Advertisements
Exit mobile version