ಬೆಂಗಳೂರು: ಇಂದು ಕರ್ನಾಟಕ ಲೋಕಸಭಾ ಮತ್ತು ವಿಧಾನಸಭಾ ಉಪಚುನಾವಣೆಯ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಮಾಜಿ ಪ್ರಧಾನ ಮಂತ್ರಿ ದೇವೇಗೌಡ ಅವರು ಟ್ವೀಟ್ ಮೂಲಕ ರಾಜ್ಯದ ಜನತೆಗೆ ಅಭಿನಂದನೆಯನ್ನು ತಿಳಿಸಿದ್ದಾರೆ.
ಉಪಚುನಾವಣೆಯಲ್ಲಿ ಮೈತ್ರಿ ಸರ್ಕಾರ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಎಚ್‍ಡಿ ದೇವೇಗೌಡ ಅವರು “ಅಭಿವೃದ್ಧಿ ಕೇಂದ್ರಿತ ಆಡಳಿತವನ್ನು ಬೆಂಬಲಿಸುತ್ತಿರುವ ರಾಜ್ಯದ ಜನತೆಗೆ ನನ್ನ ಅಭಿನಂದನೆಗಳು. ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸಲು ಮುಂದಾಗುವವರಿಗೆ ಜನರೇ ಉತ್ತರ ನೀಡಿದ್ದಾರೆ” ಎಂದು ಟ್ವೀಟ್ ಮಾಡಿದ್ದಾರೆ.
Advertisement
ಅಭಿವೃದ್ಧಿ ಕೇಂದ್ರಿತ ಆಡಳಿತವನ್ನು ಬೆಂಬಲಿಸುತ್ತಿರುವ ರಾಜ್ಯದ ಜನತೆಗೆ ನನ್ನ ಅಭಿನಂದನೆಗಳು.
ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸಲು ಮುಂದಾಗುವವರಿಗೆ ಜನರೇ ಉತ್ತರ ನೀಡಿದ್ದಾರೆ.#ThankYouKarnataka
— H D Devegowda (@H_D_Devegowda) November 6, 2018
Advertisement
ಕೋಮುವಾದಿ ಪಕ್ಷವನ್ನು ಅಧಿಕಾರದಿಂದ ದೂರ ಇಡಲು ನಾವು ಒಂದಾಗಿದ್ದೇವೆ ಎಂದು ವಿಧಾನಸಭಾ ಚುನಾವಣೆಯ ಫಲಿತಾಂಶದ ವೇಳೆ ಹೇಳಿದ್ದ ಎಚ್‍ಡಿಡಿ ಈ ಚುನಾವಣೆಯ ಸಮಯದಲ್ಲಿ ಮೋದಿಯನ್ನು ಸೋಲಿಸಲು ಒಂದಾಗಿದ್ದೇವೆ. ಲೋಕಸಭಾ ಚುನಾವಣೆಗೆ ಇಲ್ಲಿಂದಲೇ ಸ್ಪಷ್ಟ ಸಂದೇಶ ರವಾನಿಸುತ್ತೇವೆ ಎಂದು ಪ್ರಚಾರದ ವೇಳೆ ಭಾಷಣ ಮಾಡಿದ್ದರು.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv