ಬೆಂಗಳೂರು: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ದೇವೇಗೌಡ ಅವರು ಕಾಂಗ್ರೆಸ್ ಗೆ ಖಡಕ್ ಸೂಚನೆ ನೀಡಿದ್ದಾರೆ.
ಶಾಸಕ ಜಮೀರ್ ಅಹಮದ್ ಯಾವುದೇ ಕಾರಣಕ್ಕೂ ಸಂಪುಟದಲ್ಲಿ ಇರಬಾರದು. ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಅವರಿಗೆ ಜಾಗ ಇರಕೂಡದು ಎಂದು ಮಾಜಿ ಪ್ರಧಾನಿ ತಿಳಿಸಿದ್ದಾರೆ ಅಂತ ಪಕ್ಷದ ಮೂಲಗಳಿಂದ ತಿಳಿದುಬಂದಿದೆ.
Advertisement
ಕ್ಯಾಬಿನೆಟ್‍ಗೆ ಮುಸ್ಲಿಂ ಕೋಟಾದಡಿ ಖಾದರ್, ತನ್ವೀರ್ ಸೇಠ್, ರೋಷನ್‍ಬೇಗ್, ಜಮೀರ್ ಅಹಮದ್ ಪರ ಮಾಜಿ ಸಿಎಂ ಸಿದ್ದರಾಮಯ್ಯ ನಿಂತಿದ್ದಾರೆ. ಬಂಡಾಯಗಾರರಿಗೆ ತೊಂದರೆಯಾಗಬಾರದು ಅಂತ ಹೇಳಿದ್ದರು. ಆದ್ರೆ ಇದೀಗ ದೇವೇಗೌಡರ ಸೂಚನೆಯಿಂದ ಕಾಂಗ್ರೆಸ್ ವರಿಷ್ಠರಿಗೆ ತಲೆನೋವಾಗಿ ಪರಿಣಮಿಸಿದೆ.
Advertisement
Advertisement
ಬಂಡಾಯಗಾರರ ವಿರುದ್ಧ ಮುಂದುವರಿದ ದೇವೇಗೌಡರ ಸಮರದಿಂದಾಗಿ ಜಮೀರ್ ಅಹಮದ್ ಆಂಡ್ ಗ್ಯಾಂಗ್ ಏನ್ ಮಾಡ್ತಾರೆ ಅನ್ನೋದೇ ಸದ್ಯದ ಕುತೂಹಲವಾಗಿದೆ. ಈ ಹಿಂದೆ 2013ರ ಚುನಾವಣೆಯಲ್ಲಿ ಜೆಡಿಎಸ್ ನಿಂದ ಗೆಲುವು ಸಾಧಿಸಿದ್ದ ಜಮೀರ್ ಅಹಮದ್ ಪಕ್ಷದ ವಿರುದ್ಧ ತೊಡೆ ತಟ್ಟಿದ್ರು. ಚುನಾವಣೆ ಸಮಯದಲ್ಲಿ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿದ್ರು. 2018ರ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಜಮೀರ್ ಜೆಡಿಎಸ್ ಅಭ್ಯರ್ಥಿಯ ವಿರುದ್ಧ ಗೆಲುವನ್ನು ಕಂಡಿದ್ರು.