– ಬಿ.ಎಲ್.ಸಂತೋಷ್ ಯಾವುದೇ ಅಧಿಕಾರಕ್ಕೆ ಆಸೆಪಟ್ಟವರಲ್ಲ: ಹೊಗಳಿದ ಮಾಜಿ ಪ್ರಧಾನಿ
– ಅಟಲ್ ಪುರಸ್ಕಾರ ಸ್ವೀಕರಿಸಿದ ದೇವೇಗೌಡರು
ಬೆಂಗಳೂರು: ಅಧಿವೇಶನದಲ್ಲಿ ನಾನು ಅಮಿತ್ ಶಾ ಅವರ ಭಾಷಣ ಕೇಳಿದ್ದೇನೆ. ಕೇಂದ್ರ ಗೃಹ ಸಚಿವರ ಭಾಷಣ ತಿರುಚಿ ಅಪಪ್ರಚಾರ ಮಾಡುತ್ತಿದ್ದಾರೆಂದು ಕಾಂಗ್ರೆಸ್ ವಿರುದ್ಧ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ವಾಗ್ದಾಳಿ ನಡೆಸಿದರು.
Advertisement
ನಾಡಪ್ರಭು ಕೆಂಪೇಗೌಡ ಜನಪರ ವೇದಿಕೆ ವತಿಯಿಂದ ಅಟಲ್ ಬಿಹಾರಿ ವಾಜಪೇಯಿ ಜನ್ಮ ಶತಮಾನೋತ್ಸವ ಹಿನ್ನೆಲೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹೆಚ್‌ಡಿಡಿ ಪಾಲ್ಗೊಂಡಿದ್ದರು. ಅಟಲ್ ಪುರಸ್ಕಾರ ಸ್ವೀಕರಿಸಿ ನಂತರ ಮಾತನಾಡಿದರು.
Advertisement
Advertisement
ಪ್ರಜಾಪ್ರಭುತ್ವದ ಹೆಸರಲ್ಲಿ ಕಾಂಗ್ರೆಸ್ ಹೇಗೆ ನಡೆದುಕೊಳ್ತಿದ್ದಾರೆ ಅಂದರೆ ದೇಶದ ಜನರು ತಲೆ ತಗ್ಗಿಸಬೇಕು ಹಾಗೆ ಮಾಡ್ತಾರೆ. ಅಧಿವೇಶನದಲ್ಲಿ ನಾನು ಅಮಿತ್ ಶಾ ಭಾಷಣ ಕೇಳಿದ್ದೇನೆ. ಗೃಹ ಸಚಿವ ಅಮಿತ್ ಶಾ ಭಾಷಣ ತಿರುಚಿ ಅಪಪ್ರಚಾರ ಮಾಡ್ತಿದ್ದಾರೆ ಎಂದು ಗರಂ ಆದರು.
Advertisement
ಅಟಲ್ ಜೀ ವಿರೋಧ ಪಕ್ಷದಲ್ಲಿ ಇದ್ದಾಗ ನಾನು ಅವರ ಭಾಷಣ ಕಾರಿನಲ್ಲಿ ಹೋಗುವಾಗ ಕೇಳ್ತಿದ್ದೆ. ಅಟಲ್ ಜೀ ಭಾಷಣ ಕೇಳಿ, ನಾನು ವಿರೋಧ ಪಕ್ಷ ನಾಯಕನಾದಾಗ ಹೇಗೆ ಮಾತನಾಡಬೇಕು ಎಂದು ತಿಳಿದುಕೊಳ್ಳುತ್ತಿದ್ದೆ. 186 ಪಕ್ಷದ ಶಕ್ತಿ ಪಡೆದ ನಾಯಕ ಅಟಲ್ ಜೀ. ನಾನು ವಿರೋಧ ಪಕ್ಷದಲ್ಲಿ ಇದ್ದಾಗ ಅವರು ತುಂಬಾ ಗೌರವದಿಂದ ಕಾಣ್ತಿದ್ರು. ನಿಮ್ಮ ಹಿಂದಿ ದೇಶದ ಸಮಸ್ಯೆ ಬಗೆ ಹರಿಸಲ್ಲ ಅಂತ ಅಟಲ್ ಜೀಗೆ ನಾನು ಹೇಳಿದ್ದೆ. ತಮಾಷೆಗೆ ಹೇಳಿದ್ದೆ ನಾನು ಎಂದು ನೆನಪಿಸಿಕೊಂಡರು.
ಎಲ್ಲ ರಾಜ್ಯಗಳಲ್ಲಿ ಸುಶಾಸನ ದಿನಾಚರಣೆ ನಡೀತಾ ಇದೆ. ಅನಾರೋಗ್ಯ ಕಾರಣ ಕಾರ್ಯಕ್ರಮಕ್ಕೆ ಬರಲು ಆಗಲ್ಲ ಎಂದಿದ್ದೆ. ಆದ್ರೆ ತುಂಬ ಒತ್ತಾಯ ಮಾಡಿದ ಕಾರಣ ಬಂದೆ. ಅಟಲ್ ಅವರ ಹೆಸರಲ್ಲಿ ನಡೆಯುವ ಕಾರ್ಯಕ್ರಮ ತಪ್ಪಿಸಿಕೊಳ್ಳಬಾರದು ಎಂದು ಬಂದೆ. ಒಂದು ಗಂಟೆಗೂ ಹೆಚ್ಚುಕಾಲ ಸಂತೋಷ್ ಅವರು ಮಾತಾಡಿದ್ದಾರೆ. ಪ್ರಜಾಪ್ರಭುತ್ವ, ಅಂಬೇಡ್ಕರ್ ಹಾಗೂ ಕಾಂಗ್ರೆಸ್ ಬಗ್ಗೆ ಮಾತಾಡಿದ್ದಾರೆ. ಅನಾವಶ್ಯಕ ಬಿಜೆಪಿ ಬಗ್ಗೆ ಟೀಕೆ ಮಾಡ್ತಾರೆ, ಆ ಎಲ್ಲ ವಿಷಯದ ಬಗ್ಗೆ ಮಾತಾಡಿದ್ದಾರೆ. ವಾಜಪೇಯಿ ಅವರ ಕೊಡುಗೆ ಬಗ್ಗೆ ಎಳೆಎಳೆಯಾಗಿ ಹೇಳಿದ್ದಾರೆ. ನಾನು ಆಳುವ ಪಕ್ಷದಲ್ಲಿದ್ದೆ, ವಾಜಪೇಯಿ ವಿಪಕ್ಷ ನಾಯಕ ಎಂದು ಮೆಲುಕು ಹಾಕಿದರು.
ಕರ್ನಾಟಕ ವಿಧಾನ ಸಭೆಯಲ್ಲಿ ವಿಪಕ್ಷ ನಾಯಕನಾಗಿ ನಾನು ಹೇಗೆ ನಡೆದುಕೊಳ್ಳಬೇಕು ಎಂದು ತಿಳಿದುಕೊಳ್ಳಲು ವಾಜಪೇಯಿ ಅವರ ಭಾಷಣ ಕೇಳ್ತಿದ್ದೆ. ವಾಜಪೇಯಿ ವಿಪಕ್ಷ ನಾಯಕನಾಗಿ ಹೇಗೆ ನಡೆದುಕೊಂಡ್ರು ಅನ್ನೋದನ್ನ ಎಲ್ಲರು ಓದಬೇಕು. ನಿಮ್ಮ ಹಿಂದಿ ಈ ದೇಶದ ಸಮಸ್ಯೆ ಬಗೆಹರಿಸಲ್ಲ ಎಂದು ನಾನು ಅವರಲ್ಲಿ ತಮಾಷೆ ಮಾಡ್ತಿದ್ದೆ, ಗ್ರೇಟ್ ಮ್ಯಾನ್. ಒಂದು ವೋಟ್‌ನಲ್ಲಿ 13 ತಿಂಗಳ ಸರ್ಕಾರ ಬಿತ್ತು. ಕಾಂಗ್ರೆಸ್‌ನವರು ಮಂತ್ರಿಯಾಗಿದ್ದವರನ್ನ ತಂದು ವೋಟ್ ಮಾಡಿಸಿದ್ದರು ಎಂದು ನೆನಪಿಸಿಕೊಂಡರು.
ಬಿ.ಎಲ್.ಸಂತೋಷ್ ಯಾವುದೇ ಅಧಿಕಾರಕ್ಕೆ ಆಸೆ ಪಟ್ಟವರಲ್ಲ. ಕೇಂದ್ರ, ರಾಜ್ಯದಲ್ಲಿ ಮಂತ್ರಿ ಆಗಬೇಕು ಎಂದು ಆಸೆ ಪಟ್ಟವರಲ್ಲ. ನಿಸ್ವಾರ್ಥದಿಂದ ಪಕ್ಷ ಕಟ್ಟುತ್ತಿದ್ದಾರೆ ಎಂದು ಹಾಡಿ ಹೊಗಳಿದರು. ಅಶ್ವತ್ಥನಾರಾಯಣ್ ನೀನು ಹಠಮಾರಿಯಪ್ಪ. ನಿನ್ ಮಾತಿಗೆ ಬೆಲೆ ಕೊಟ್ಟು ಬಂದಿದ್ದೀನಿ. ಆರೋಗ್ಯ ಸರಿ ಇಲ್ಲ ಆದರೂ ಬಂದಿದ್ದೀನಿ ಎಂದರು. ಇದೇ ವೇಳೆ, ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ, ನಿವೃತ್ತ ಐಎಎಸ್ ಅಧಿಕಾರಿ ಮದನ್ ಗೋಪಾಲ್, ವಿಶ್ರಾಂತ ಕುಲಪತಿ ಪ್ರೊ. ಬಿ. ತಿಮ್ಮೇಗೌಡ ಅವರಿಗೆ ಅಟಲ್ ಪುರಸ್ಕಾರ ಪ್ರದಾನ ಮಾಡಲಾಯಿತು.