Connect with us

Latest

ಕಾಂಗ್ರೆಸ್ ಮುಕ್ತ ಭಾರತ ಅಲ್ಲ, ಅಹಂ ಮುಕ್ತ ಮಾಡಿದ ಮತದಾರ: ಎಚ್‍ಡಿಡಿ

Published

on

ನವದೆಹಲಿ: ಬಿಜೆಪಿಯ ಕಾಂಗ್ರೆಸ್ ಮುಕ್ತ ಹೇಳಿಕೆಗೆ ಮತದಾರರು ಅವರ ಅಹಂ ಅನ್ನು ಮುಕ್ತ ಮಾಡಿದ್ದಾರೆಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ದೇವೇಗೌಡ ಹೇಳಿದ್ದಾರೆ.

ಪಂಚರಾಜ್ಯ ಚುನಾವಣೆ ಫಲಿತಾಂಶಗಳು ಹೊರ ಬೀಳುತ್ತಿದ್ದಂತೆ, ಕೇಂದ್ರದ ಆಡಳಿತರೂಢ ಬಿಜೆಪಿಗೆ ಭಾರೀ ಹಿನ್ನಡೆಯಾಗಿದೆ. ಈ ಕುರಿತು ದೇವೇಗೌಡ ಅವರು ಟ್ವಿಟ್ಟರ್ ನಲ್ಲಿ ಬಿಜೆಪಿಗೆ ತಿರುಗೇಟು ನೀಡಿದ್ದಾರೆ.

“ಇದು ಪ್ರಜಾಪ್ರಭುತ್ವ ರಾಷ್ಟ್ರ. ಪ್ರಜೆಗಳು ಹೇಳಿದಂತೆ ನಾವು ಕೇಳಬೇಕಷ್ಟೇ. ನಾವು ಹೇಳಿದ್ದೆಲ್ಲ ಇಲ್ಲಿ ನಡೆಯುವುದಿಲ್ಲ. ಕಾಂಗ್ರೆಸ್ ಮುಕ್ತ ಭಾರತ, ಪ್ರತಿಪಕ್ಷ ಮುಕ್ತ ಭಾರತ ಮಾಡುತ್ತೇವೆ ಎಂಬುದು ಕೇವಲ ಅಹಮಿಕೆ. ಜನ ಇಂದು ಅಹಂ ಮುಕ್ತ ಭಾರತ ಮಾಡಿದ್ದಾರೆ. ಸಮಸ್ಯೆ ಮುಕ್ತ ಭಾರತ ಮಾಡುವುದರತ್ತ ಅಧಿಕಾರರೂಢ ಬಿಜೆಪಿ ಮನಸ್ಸು ಮಾಡಲಿ” ಎಂದು ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.

ಭಾರತ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಇಲ್ಲಿ ಪ್ರಜೆಗಳು ಹೇಳಿದಂತೆ ನಾವು ಕೇಳಬೇಕೇ ಹೊರತು, ನಾವು ಹೇಳಿದ್ದು ಇಲ್ಲಿ ನಡೆಯುವುದಿಲ್ಲ. ಕಾಂಗ್ರೆಸ್ ಮುಕ್ತ ಭಾರತ ಮಾಡುತ್ತೇವೆ ಎನ್ನುತ್ತಿರುವ ಬಿಜೆಪಿಯವರಿಗೆ, ಮತದಾರರ ಅವರ ಅಹಂ ಮುಕ್ತ ಭಾರತವನ್ನಾಗಿ ಮಾಡಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಗೆ ಪಂಚ ಫಲಿತಾಂಶಗಳೇ ಮುನ್ಸೂಚನೆಯಾಗಿದೆ ಎಂದು ಹೇಳಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

Click to comment

Leave a Reply

Your email address will not be published. Required fields are marked *