ಹಾಸನ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ (HD Devegowda) ಅವರಿಂದು ಬೆಟ್ಟದ ರಂಗನಾಥಸ್ವಾಮಿ ದೇವಾಲಯಕ್ಕೆ (Ranganath Swamy) ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಶ್ರಾವಣ ಮಾಸದ ಮೂರನೇ ಶನಿವಾರದ ಹಿನ್ನೆಲೆ ಹಾಸನ (Hassan) ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಮಾವಿನಕೆರೆಯಲ್ಲಿರುವ ಬೆಟ್ಟದ ರಂಗನಾಥಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಇದನ್ನೂ ಓದಿ: ಮಂತ್ರಾಲಯದಲ್ಲಿ ಪೂರ್ವಾರಾಧನೆ ಸಂಭ್ರಮ: ಸಂಜೆ ಗುರು ಅನುಗ್ರಹ ಪ್ರಶಸ್ತಿ ಪ್ರದಾನ

ಈ ವೇಳೆ ಬೆಟ್ಟದ ರಂಗನಾಥಸ್ವಾಮಿಗೆ ನಡೆದ ಪಂಚಾಮೃತ ಅಭಿಷೇಕ ಹಾಗೂ ಪೂಜೆ ಕೈಂಕರ್ಯದಲ್ಲಿ ಭಾಗಿಯಾಗಿದರು. ದೇವೇಗೌಡರಿಗೆ ಪುತ್ರ ಹೆಚ್.ಡಿ.ರೇವಣ್ಣ ಹಾಗೂ ಮೊಮ್ಮಗ ಎಂಎಲ್‌ಸಿ ಡಾ.ಸೂರಜ್ ರೇವಣ್ಣ ಸಾಥ್ ನೀಡಿದ್ದಾರೆ.
