ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಆಸ್ಪತ್ರೆಗೆ ದಾಖಲು

Public TV
1 Min Read
manmohan singh

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ (AIIMS) ದಾಖಲಿಸಲಾಗಿದೆ.

92 ವರ್ಷದ ಮಾಜಿ ಪ್ರಧಾನಿ ಅವರನ್ನು ಆಸ್ಪತ್ರೆಯ ತುರ್ತು ವಿಭಾಗಕ್ಕೆ ಕರೆತರಲಾಗಿದೆ ಎಂದು ಮೂಲಗಳು ತಿಳಿಸಿವೆ.

ಮನಮೋಹನ್ ಸಿಂಗ್ ಅವರು 1991-96ರ ಅವಧಿಯಲ್ಲಿ ಪಿವಿ ನರಸಿಂಹರಾವ್ ನೇತೃತ್ವದ ಸರ್ಕಾರದಲ್ಲಿ ದೇಶದ ಹಣಕಾಸು ಸಚಿವರಾಗಿ ಪ್ರಾಮುಖ್ಯತೆಯನ್ನು ಗಳಿಸಿದರು. ಆರ್ಥಿಕತೆಯನ್ನು ಪರಿವರ್ತಿಸುವ ವ್ಯಾಪಕ ಸುಧಾರಣೆಗಳನ್ನು ತಂದರು.

ಯುಪಿಎಯ ಎರಡು ಅವಧಿಯ ಪ್ರಧಾನಿಯಾಗಿ ಅವರು (2004 ಮತ್ತು 2014) ಸೇವೆ ಸಲ್ಲಿಸಿದರು. ಈ ವರ್ಷದ (2024) ಆರಂಭದ ವರೆಗೆ ರಾಜ್ಯಸಭೆಯ ಸದಸ್ಯರಾಗಿ ಸೇವೆ ಸಲ್ಲಿಸಿದರು. ಏಪ್ರಿಲ್‌ನಲ್ಲಿ ರಾಜ್ಯಸಭೆಯಿಂದ ನಿವೃತ್ತರಾದರು.

Share This Article