ಬೆಂಗಳೂರು: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (Manmohan Singh) ಅವರು ನಿಧನರಾದ ಹಿನ್ನೆಲೆಯಲ್ಲಿ ಶುಕ್ರವಾರ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ.
ಮನಮೋಹನಸಿಂಗ್ ಅವರ ನಿಧನದ ಗೌರವಾರ್ಥ ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ. ಇದನ್ನೂ ಓದಿ: ಶ್ರೇಷ್ಠ ನಾಯಕನನ್ನ ಭಾರತ ಕಳೆದುಕೊಂಡಿದೆ: ಪ್ರಧಾನಿ ಮೋದಿ ಸಂತಾಪ
ಮಾಜಿ ಪ್ರಧಾನಿ ಹಾಗೂ ಖ್ಯಾತ ಅರ್ಥಶಾಸ್ತ್ರಜ್ಞ ಮನಮೋಹನ್ ಸಿಂಗ್ (92) ಅವರು ಇಂದು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾದರು. ಆರೋಗ್ಯ ಹದಗೆಟ್ಟಿದ್ದ ಹಿನ್ನೆಲೆಯಲ್ಲಿ ಗುರುವಾರ ಸಂಜೆ ಸಿಂಗ್ ಅವರನ್ನು ತುರ್ತು ಚಿಕಿತ್ಸಾ ಘಟಕಕ್ಕೆ ಕರೆತರಲಾಗಿತ್ತು. ಆದರೆ, ರಾತ್ರಿ ಹೊತ್ತಿಗೆ ಅವರು ಕೊನೆಯುಸಿರೆಳೆದಿದ್ದಾರೆ.
ಮನಮೋಹನ್ ಸಿಂಗ್ ಅವರು 1991-96ರ ಅವಧಿಯಲ್ಲಿ ಪಿವಿ ನರಸಿಂಹರಾವ್ ನೇತೃತ್ವದ ಸರ್ಕಾರದಲ್ಲಿ ದೇಶದ ಹಣಕಾಸು ಸಚಿವರಾಗಿ ಪ್ರಾಮುಖ್ಯತೆಯನ್ನು ಗಳಿಸಿದರು. ಆರ್ಥಿಕತೆಯನ್ನು ಪರಿವರ್ತಿಸುವ ವ್ಯಾಪಕ ಸುಧಾರಣೆಗಳನ್ನು ತಂದರು. ಇದನ್ನೂ ಓದಿ: ಮಾಜಿ ಪ್ರಧಾನಿ, ಖ್ಯಾತ ಅರ್ಥಶಾಸ್ತ್ರಜ್ಞ ಮನಮೋಹನ್ ಸಿಂಗ್ ಇನ್ನಿಲ್ಲ
ಮಾಜಿ ಪ್ರಧಾನಿಗಳ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ಶ್ರೇಷ್ಠ ನಾಯಕನನ್ನು ಭಾರತ ಇಂದು ಕಳೆದುಕೊಂಡಿದೆ ಎಂದು ಎಕ್ಸ್‌ನಲ್ಲಿ ಪೋಸ್ಟ್ ಹಾಕಿ ಮೋದಿ ವಿಷಾದ ವ್ಯಕ್ತಪಡಿಸಿದ್ದಾರೆ.