ಮಾಜಿ ಪ್ರಧಾನಿ ವಾಜಪೇಯಿ ಆರೋಗ್ಯದಲ್ಲಿ ಚೇತರಿಕೆ

Public TV
1 Min Read
Vajpayee

ನವದೆಹಲಿ: ಅನಾರೋಗ್ಯದ ಹಿನ್ನೆಲೆಯಲ್ಲಿ ಸೋಮವಾರ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ.

ಏಮ್ಸ್ ನಿರ್ದೇಶಕರಾದ ಡಾಕ್ಟರ್ ರಂದೀಪ್ ಗುಲೆರಿಯಾ ಮಾರ್ಗದರ್ಶನದಲ್ಲಿ ನುರಿತ ವೈದ್ಯರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ.

ಏಮ್ಸ್ ಆಸ್ಪತ್ರೆ ಮಂಗಳವಾರ ಬಿಡುಗಡೆ ಮಾಡಿದ ಮೆಡಿಕಲ್ ಬುಲೆಟಿನ್ ನಲ್ಲಿ, ವಾಜಪೇಯಿಯವರು ಮೂತ್ರನಾಳದ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದು, ಸದ್ಯ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಚಿಕಿತ್ಸೆಗೆ ಸ್ಪಂದಿಸುತ್ತಿದ್ದು ಶೀಘ್ರವೇ ಗುಣಮುಖರಾಗಲಿದ್ದಾರೆ. ಸೋಂಕು ಗುಣಮುಕ್ತವಾಗುವವರೆಗೂ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಮುಂದುವರಿಯಲಿದೆ ಎಂದು ತಿಳಿಸಿದೆ.

ಸೋಮವಾರದಿಂದಲೂ ಹಲವು ಹಿರಿಯ ಮುಖಂಡರು ಆಸ್ಪತ್ರೆಗೆ ಬಂದು ವಾಜಪೇಯಿಯವರ ಆರೋಗ್ಯ ವಿಚಾರಿಸುತ್ತಿದ್ದಾರೆ. ವಿಷಯ ತಿಳಿದ ಪ್ರಧಾನಿ ನರೇಂದ್ರ ಮೋದಿಯವರು ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬದ ಜೊತೆ ಮಾತುಕತೆ ನಡೆಸಿದ್ದಾರೆ.

ಆಸ್ಪತ್ರೆಗೆ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಕಾಂಗ್ರೆಸ್‍ನ ರಾಹುಲ್ ಗಾಂಧಿ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಅಲ್ಲದೇ ಆರೋಗ್ಯ ಸಚಿವರಾದ ಜೆಪಿ ನಡ್ಡಾ ಅವರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

ಆಸ್ಪತ್ರೆಗೆ ಭೇಟಿ ನೀಡಿದ ನರೇಂದ್ರ ಮೋದಿಯವರು ಸುಮಾರು 50 ನಿಮಿಷಗಳ ಕಾಲ ವಾಜಪೇಯಿಯವರ ಕುಟುಂಬದ ಜೊತೆ ಮಾತುಕತೆ ನಡೆಸಿದ್ದಾರೆ. ವೈದ್ಯರ ಬಳಿ ಚಿಕಿತ್ಸೆಯ ಕುರಿತು ಮಾತುಕತೆ ನಡೆಸಿದ್ದಾರೆ ಎಂದು ಪ್ರಧಾನಿ ಸಚಿವಾಲಯದ ಸಿಬ್ಬಂದಿ ಟ್ವೀಟ್ ಮಾಡಿದ್ದಾರೆ.

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿವರು 1998 ಮತ್ತು 2004ರಲ್ಲಿ ಭಾರತದ ಪ್ರಧಾನಿಯಾಗಿ ಕಾರ್ಯನಿರ್ವಹಿಸಿದ್ದರು. ತಮ್ಮ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಸಾರ್ವಜನಿಕ ಜೀವನದಿಂದ ಹಿಂದೆ ಸರಿದು ಕೆಲ ವಷಗಳಿಂದ ತಮ್ಮ ಮನೆಯಲ್ಲಿ ಜೀವನ ಕಳೆಯುತ್ತಿದ್ದಾರೆ. ಕಳೆದ ಡಿಸೆಂಬರ್ 25ರಂದು ವಾಜಪೇಯಿ 93ನೇ ಹುಟ್ಟುಹಬ್ಬವನ್ನು ಆಚರಿಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *