ನವದೆಹಲಿ: ಹಲವಾರು ಅಚ್ಚರಿ ನಿರ್ಧಾರ ಕೈಗೊಂಡಿರುವ ಕೇಂದ್ರ ಸರ್ಕಾರ ಈಗ ʼಒಂದು ದೇಶ, ಒಂದು ಚುನಾವಣೆʼ ನಡೆಸಲು ಮುಂದಾಗಿದ್ಯಾ ಎಂಬ ಪ್ರಶ್ನೆ ಎದ್ದಿದೆ.
ಒಂದು ರಾಷ್ಟ್ರ, ಒಂದು ಚುನಾವಣೆ (One Nation, One Election) ಪರಿಕಲ್ಪನೆಯ ಸಾಧಕ, ಬಾಧಕ ಅಧ್ಯಯನ ಮಾಡಿ ವರದಿಯನ್ನು ಸಲ್ಲಿಸಲು ಕೇಂದ್ರ ಸರ್ಕಾರ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ (Ram Nath Kovind.) ನೇತೃತ್ವದಲ್ಲಿ ವಿಶೇಷ ಸಮಿತಿಯನ್ನು ರಚಿಸಿದ್ದರಿಂದ ಈಗ ಈ ಪ್ರಶ್ನೆ ಎದ್ದಿದೆ.
Advertisement
ಸಮಿತಿಯ ಸದಸ್ಯರ ಬಗ್ಗೆ ಶೀಘ್ರವೇ ಅಧಿಸೂಚನೆ ಹೊರಡಿಸಲಾಗುತ್ತದೆ. ಈ ಚುನಾವಣೆ ಕಲ್ಪನೆಯ ಬಗ್ಗೆ ಜನರ ಅಭಿಪ್ರಾಯ ಏನು? ಪಕ್ಷಗಳ ನಿಲುವು ಏನು? ಕೇಂದ್ರಾಡಳಿತ ಪ್ರದೇಶಗಳಲ್ಲಿ ಹೇಗೆ ಕಾರ್ಯನಿರ್ವಹಿಸುತ್ತದೆ? ಒವುಗಳ ಬಗ್ಗೆ ಸಮಿತಿ ಅಧ್ಯಯನ ನಡೆಸಲಿದೆ. ಇದನ್ನೂ ಓದಿ: ಜಿಡಿಪಿ ಬೆಳವಣಿಗೆಯಲ್ಲಿ ಮೊದಲ ಸ್ಥಾನದಲ್ಲೇ ಮುಂದುವರಿದ ಭಾರತ – ಯಾವ ದೇಶದ್ದು ಎಷ್ಟು?
Advertisement
Advertisement
ಸೆಪ್ಟೆಂಬರ್ 18 ರಿಂದ 22 ರವರೆಗೆ ಸಂಸತ್ತಿನ ವಿಶೇಷ ಅಧಿವೇಶನ (Special Session of the Parliament) ನಡೆಸಲಾಗುತ್ತದೆ ಎಂದು ಘೋಷಣೆ ಮಾಡಿದ ಮರು ದಿನ ಕೇಂದ್ರದಿಂದ ಈ ಅಚ್ಚರಿಯ ನಿರ್ಧಾರ ಪ್ರಕಟವಾಗಿದೆ. ಅಧಿವೇಶನದಲ್ಲಿ ʼಒಂದು ರಾಷ್ಟ್ರ, ಒಂದು ಚುನಾವಣೆ’ ಕುರಿತು ಮಸೂದೆಯನ್ನು ಮಂಡಿಸಲು ಸರ್ಕಾರ ಮುಂದಾಗಿದೆ ಎಂಬ ಮಾತು ಕೇಳಿ ಬಂದಿದೆ. ಆದರೆ ಇಲ್ಲಿಯವರೆಗೆ ಸರ್ಕಾರದಿಂದ ಯಾರೂ ಇದನ್ನು ಖಚಿತಪಡಿಸಿಲ್ಲ.
Advertisement
ಲೋಕಸಭೆ ಮತ್ತು ರಾಜ್ಯ ವಿಧಾನಸಭೆ ಚುನಾವಣೆಗಳನ್ನು (Election) ದೇಶಾದ್ಯಂತ ಏಕಕಾಲದಲ್ಲಿ ನಡೆಸುವುದಕ್ಕೆ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಎಂದು ಕರೆಯಲಾಗುತ್ತದೆ. ಬಿಜೆಪಿ (BJP) ಮತ್ತು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಹಲವಾರು ಸಂದರ್ಭಗಳಲ್ಲಿ ಈ ವಿಷಯದ ಬಗ್ಗೆ ಮಾತನಾಡಿದ್ದಾರೆ. ಇದು 2014ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪ್ರಣಾಳಿಕೆಯ ಭಾಗವಾಗಿರುವ ಹಿನ್ನೆಲೆಯಲ್ಲಿ ಈ ವಿಶೇಷ ಅಧಿವೇಶನದ ಬಗ್ಗೆ ನಿರೀಕ್ಷೆ ಈಗ ಹೆಚ್ಚಾಗಿದೆ.
1967 ರವರೆಗೆ ಭಾರತದಲ್ಲಿ ಏಕಕಾಲದಲ್ಲಿ ಮತದಾನ ನಡೆಯುತ್ತಿತ್ತು. ನಾಲ್ಕು ಚುನಾವಣೆಗಳು ಈ ರೀತಿ ನಡೆದಿದ್ದವು. 1968-69ರಲ್ಲಿ ಕೆಲವು ರಾಜ್ಯಗಳ ವಿಧಾನಸಭೆ ಅಕಾಲಿಕವಾಗಿ ವಿಸರ್ಜಿಸಲ್ಪಟ್ಟ ನಂತರ ಈ ಪದ್ಧತಿ ಸ್ಥಗಿತವಾಗಿದೆ. ಲೋಕಸಭೆಯು ಮೊದಲ ಬಾರಿಗೆ 1970 ರಲ್ಲಿ ನಿಗದಿತ ಅವಧಿಗಿಂತ ಒಂದು ವರ್ಷ ಮುಂಚಿತವಾಗಿ ವಿಸರ್ಜನೆಯಾಗಿತ್ತು ಮತ್ತು 1971 ರಲ್ಲಿ ಮಧ್ಯಂತರ ಚುನಾವಣೆಗಳು ನಡೆದಿತ್ತು.
2016ರಲ್ಲಿ ಏಕಕಾಲಕ್ಕೆ ಚುನಾವಣೆ ನಡೆಸುವ ಕುರಿತು ಮಾತನಾಡಿದ್ದ ಪ್ರಧಾನಿ ಮೋದಿ, 2019ರ ಲೋಕಸಭೆ ಚುನಾವಣೆ ಬಳಿಕ ಈ ವಿಷಯದ ಕುರಿತು ಚರ್ಚಿಸಲು ಸರ್ವಪಕ್ಷ ಸಭೆ ಕರೆದಿದ್ದರು. ಸಭೆಯನ್ನು ಹಲವು ವಿರೋಧ ಪಕ್ಷಗಳು ವಿರೋಧಿಸಿದ್ದವು. ಇದನ್ನೂ ಓದಿ: ಗೃಹಬಳಕೆಯ ಬೆನ್ನಲ್ಲೇ ವಾಣಿಜ್ಯ ಬಳಕೆಯ LPG ಬೆಲೆ 158 ರೂ. ಇಳಿಕೆ
ಒಂದು ರಾಷ್ಟ್ರ, ಒಂದು ಚುನಾವಣೆ’ ಪ್ರಸ್ತಾವನೆಯನ್ನು ಸಾಕಾರಗೊಳಿಸಲು ಸಾಂವಿಧಾನಿಕ ತಿದ್ದುಪಡಿ ಮತ್ತು ಲೋಕಸಭೆ ಮತ್ತು ರಾಜ್ಯಸಭೆ ಎರಡರಲ್ಲೂ ಮೂರನೇ ಎರಡರಷ್ಟು ಸದಸ್ಯರ ಬೆಂಬಲದ ಅಗತ್ಯವಿದೆ ಎಂದು ತಜ್ಞರು ಹೇಳಿದ್ದಾರೆ. ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ, ತೆಲಂಗಾಣ ಮತ್ತು ಮಿಜೋರಾಂನಲ್ಲಿ ನವೆಂಬರ್-ಡಿಸೆಂಬರ್‌ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಮುಂದಿನ ವರ್ಷ ಮೇ ಆಸುಪಾಸಿನಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ.
ಪ್ರಧಾನಿ ಮೋದಿ ಈ ಹಿಂದೆ ಹಲವು ಬಾರಿ ವಿವಿಧ ಕಾರ್ಯಕ್ರಮಗಳಲ್ಲಿ ʼಒಂದು ದೇಶ, ಒಂದು ಚುನಾವಣೆʼಯ ಪರ ಬ್ಯಾಟಿಂಗ್ ಮಾಡಿದ್ದರು. ಈ ಚುನಾವಣೆ ಪರಿಕಲ್ಪನೆ ಕೇವಲ ಚರ್ಚೆಯ ವಿಷಯವಲ್ಲ. ಅದು ದೇಶದ ಪರಿಕಲ್ಪನೆಯಾಗಿದೆ. ಪ್ರತಿ ಕೆಲ ತಿಂಗಳುಗಳಿಗೊಮ್ಮೆ ವಿವಿಧ ಸ್ಥಳಗಳಲ್ಲಿ ಚುನಾವಣೆಗಳು ನಡೆಯುತ್ತಿರುತ್ತವೆ. ಇದರಿಂದ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗುತ್ತವೆ. ಇದು ನಿಮಗೆ ತಿಳಿದಿರುವ ವಿಚಾರವೇ ಆಗಿದೆ. ಆದ್ದರಿಂದ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಕುರಿತು ಆಳವಾದ ಅಧ್ಯಯನ ಹಾಗೂ ಚರ್ಚೆ ನಡೆಸುವ ಅಗತ್ಯವಿದೆ ಎಂದಿದ್ದರು.
ಒಂದೇ ಮತದಾರರ ಪಟ್ಟಿಯನ್ನು ಲೋಕಸಭಾ, ವಿಧಾನಸಭಾ ಹಾಗೂ ಇತರ ಚುನಾವಣೆ ಬಳಸಿಕೊಳ್ಳಬೇಕು. ಸರ್ಕಾರದ ದುಡ್ಡು ಅಂದರೆ ಅದು ಜನರದ್ದೇ ದುಡ್ಡು. ಎರಡು ಬಾರಿ ಚುನಾವಣೆ ಮಾಡಿ ಸಮಯ ಹಾಗೂ ಹಣವನ್ನು ಯಾಕೆ ವ್ಯರ್ಥ ಮಾಡಬೇಕು? ಎಲ್ಲ ಚುನಾವಣೆಗಳಿಗೂ ಒಂದೇ ಮತದಾರರ ಪಟ್ಟಿ ಇರಬೇಕು. ಆಗಾಗ ನಡೆಯುವ ಮತದಾನದಿಂದಾಗಿ ತಿಂಗಳಿಗೊಮ್ಮೆ ಅಭಿವೃದ್ಧಿ ಕಾರ್ಯಗಳ ಮೇಲೆ ಹೇರುವ ಚುನಾವಣಾ ನೀತಿ ಸಂಹಿತೆಯ ಅಡ್ಡಿಯನ್ನು ತಡೆಯಬೇಕು ಎಂದು ಪ್ರತಿಪಾದಿಸಿದ್ದರು.
Web Stories