– ತೇಜಸ್ವಿ ಸೂರ್ಯರ ನಮೋ ವಿದ್ಯಾನಿಧಿಯ 1ಂ ಸಾವಿರ ರೂ. ವಿದ್ಯಾರ್ಥಿವೇತನ ವಿತರಣೆ ಮಾಡಿದ ಹೆಚ್‍ಡಿಡಿ
ಬೆಂಗಳೂರು: ಸಂಸದ ತೇಜಸ್ವಿ ಸೂರ್ಯ (Tejasvi Surya) ಅವರ ನಮೋ ವಿದ್ಯಾನಿಧಿ (Namo Vidyanidhi Scholarship) ಕಾರ್ಯಕ್ರಮದ ಅಡಿಯಲ್ಲಿ ಮಕ್ಕಳಿಗೆ ತಲಾ 10 ಸಾವಿರ ರೂ. ಶಿಷ್ಯವೇತನವನ್ನು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ (H.D Deve Gowda) ಬುಧವಾರ ವಿತರಿಸಿದರು.
Advertisement
ನಗರದ ಆಟೋ ರಿಕ್ಷಾ ಚಾಲಕರ ಮಕ್ಕಳು ಸೇರಿದಂತೆ ಸುಮಾರು 10 ಮಕ್ಕಳಿಗೆ ವಿದ್ಯಾರ್ಥಿ ವೇತನದ ಚೆಕ್‍ನ್ನು ದೇವೇಗೌಡರು ಹಸ್ತಾಂತರಿಸಿದರು. ಆರ್ಥಿಕವಾಗಿ ಹಿಂದುಳಿದ ವರ್ಗದ ಸುಮಾರು 10,000 ಪ್ರತಿಭಾವಂತ ಮಕ್ಕಳಿಗೆ ತಲಾ 10,000 ರೂ.ಗಳ ವಿದ್ಯಾರ್ಥಿವೇತನವನ್ನು ನೀಡಲು ಸಂಸದ ಗುರಿಯನ್ನು ಹೊಂದಿದ್ದರು. ನೇರವಾಗಿ ಮಕ್ಕಳು ವ್ಯಾಸಂಗ ಮಾಡುತ್ತಿರುವ ಆಯಾ ಶಾಲೆಗಳಿಗೆ ಪಾವತಿಸಲಾಗಿದೆ. ಪ್ರಸ್ತುತ ಬೆಂಗಳೂರು ದಕ್ಷಿಣದಲ್ಲಿ 1,000 ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ಕಾರ್ಯಕ್ರಮದಿಂದ ಪ್ರಯೋಜನ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಅಧಿಕಾರಿಗಳ ಸಭೆಯಲ್ಲಿ ಸುರ್ಜೇವಾಲ ಭಾಗಿ ವಿವಾದ : ಕಾಂಗ್ರೆಸ್ ವಿರುದ್ಧ ಫೀಲ್ಡಿಗಿಳಿದ ವಿಪಕ್ಷಗಳು
Advertisement
Advertisement
ದೇವೇಗೌಡರಂತಹ ಮೇರು ವ್ಯಕ್ತಿಯಿಂದ ಅನೇಕ ಹಿಂದುಳಿದ ವಿದ್ಯಾರ್ಥಿಗಳಿಗೆ ಚೆಕ್‍ಗಳನ್ನು ಸ್ವೀಕರಿಸುವುದು ಆಹ್ಲಾದಕರ ಅನುಭವವಾಗಿದೆ. ದೇವೇಗೌಡರು ತಮ್ಮ ರಾಜಕೀಯದಲ್ಲಿ ಯಾವಾಗಲೂ ರಾಷ್ಟ್ರೀಯ ಹಿತಾಸಕ್ತಿಗಳನ್ನು ಪ್ರಮುಖವಾಗಿ ಇರಿಸಿದ್ದಾರೆ. ಅವರು ಮಕ್ಕಳಿಗೆ ಚೆಕ್‍ಗಳನ್ನು ನೀಡಲು ಒಪ್ಪಿಕೊಂಡಿದ್ದಕ್ಕಾಗಿ ನಾನು ಅವರಿಗೆ ಕೃತಜ್ಞನಾಗಿದ್ದೇನೆ. ವಿದ್ಯಾರ್ಥಿಗಳು ಚೆನ್ನಾಗಿ ಅಧ್ಯಯನ ಮಾಡಲು ಮತ್ತು ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ತೊಡಗಬೇಕು ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ.
Advertisement
ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ 9 ವರ್ಷಗಳ ಸೇವಾ ಅವಧಿಯಲ್ಲಿ ಮಾಡಿದ ಕಾರ್ಯಗಳು ಮತ್ತು 2019 ರಿಂದ ಬೆಂಗಳೂರು ದಕ್ಷಿಣದಲ್ಲಿ ಮಾಡಿದ ಸಾಧನೆಗಳ ವರದಿಯನ್ನು ಸಂಸದ ಸೂರ್ಯ ಮಂಡಿಸಿದರು. ಬಿಜೆಪಿಯ ಮಹಾ ಜನ ಸಂಪರ್ಕ ಅಭಿಯಾನದ ಭಾಗವಾಗಿ ಈ ಭೇಟಿಯಾಗಿದೆ. ಇದರಲ್ಲಿ ಬಿಜೆಪಿಯ ಪ್ರತಿಯೊಬ್ಬ ಸಂಸದರು ಅವರ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಗಣ್ಯ ವ್ಯಕ್ತಿಗಳನ್ನು ಭೇಟಿ ಮಾಡಿ ಕಳೆದ 9 ವರ್ಷಗಳಲ್ಲಿ ನರೇಂದ್ರ ಮೋದಿ ಕೇಂದ್ರ ಸರ್ಕಾರದ ಸಾಧನೆಗಳ ಬಗ್ಗೆ ಚರ್ಚಿಸಲಾಗುತ್ತದೆ ಎಂದು ಅವರು ತಿಳಿಸಿದರು.
ಅಲ್ಲದೇ ಎನ್‍ಆರ್ ಕಾಲೋನಿಯಲ್ಲಿರುವ ಶ್ರೀ ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್‍ನ ಠೇವಣಿದಾರರ ಹಿತಾಸಕ್ತಿ ಕಾಪಾಡಲು ಕೇಂದ್ರ ತಂದಿರುವ ಸುಧಾರಣೆಗಳ ಬಗ್ಗೆ ವಿವರಿಸಿದರು. ಸ್ಥಗಿತಗೊಂಡಿರುವ ರಿಯಲ್ ಎಸ್ಟೇಟ್ ಯೋಜನೆಗಳನ್ನು ಪೂರ್ಣಗೊಳಿಸಲು, ವಿಶೇಷವಾಗಿ ಕನಕಪುರ ರಸ್ತೆಯಲ್ಲಿರುವ ಮಂತ್ರಿ ಸೆರಿನಿಟಿ ಯೋಜನೆಯನ್ನು ಪೂರ್ಣಗೊಳಿಸಲು ಕೇಂದ್ರ ಸ್ವಾ ನಿಧಿಯ ಮಧ್ಯಸ್ಥಿಕೆಗಳ ಬಗ್ಗೆ ಚರ್ಚೆ ಮಾಡಿದರು.
ನಗರಕ್ಕೆ ಕೇಂದ್ರದ ಕೊಡುಗೆ, ವಿಶೇಷವಾಗಿ ಉಪನಗರ ರೈಲ್ವೆ ಯೋಜನೆ, ನಮ್ಮ ಮೆಟ್ರೋ ನಿರ್ಮಾಣ, ಆಯುಷ್ಮಾನ್ ಭಾರತ್ ಯೋಜನೆ ಮತ್ತು ಪ್ರಧಾನ ಮಂತ್ರಿ ಆವಾಸ್ ಯೋಜನೆ (ಪಿಎಂ ವಸತಿ ಯೋಜನೆ) ಕುರಿತು ಚರ್ಚಿಸಿದರು. ಜನೌಷಧಿ ಕೇಂದ್ರಗಳ ಸಂಖ್ಯೆಗೆ ಸಂಬಂಧಿಸಿದಂತೆ ಮತ್ತೊಂದು ಮೈಲಿಗಲ್ಲು ಸಾಧಿಸಲಾಗಿದೆ. 2019 ರಲ್ಲಿ 14 ರಿಂದ, ಬೆಂಗಳೂರು ದಕ್ಷಿಣವು ಈಗ 100 ಕ್ಕೂ ಹೆಚ್ಚು ಜನೌಷಧಿ ಮಳಿಗೆಗಳನ್ನು ಹೊಂದಿದೆ. ಈ ಮಳಿಗೆಗಳು ಜನರಿಗೆ ಸುಮಾರು 50-90% ಕಡಿಮೆ ವೆಚ್ಚದಲ್ಲಿ ಜೆನೆರಿಕ್ ಔಷಧಿಗಳನ್ನು ಒದಗಿಸುತ್ತವೆ. ಅವರ ಮಾಸಿಕ ಬಿಲ್‍ಗಳಲ್ಲಿ ಸಾಕಷ್ಟು ಉಳಿತಾಯಕ್ಕೆ ಕಾರಣವಾಗುತ್ತಿವೆ ಎಂದಿದ್ದಾರೆ.
ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ಜಯನಗರದ ಕೆಎಸ್‍ಆರ್‍ಟಿಸಿ ಆಸ್ಪತ್ರೆಯಲ್ಲಿ ಉಚಿತ ಡಯಾಲಿಸಿಸ್ ಕೇಂದ್ರವನ್ನು ಸ್ಥಾಪಿಸಲಾಗಿದೆ. ಮುಂಬರುವ ವರ್ಷಗಳಲ್ಲಿ ಬೆಂಗಳೂರನ್ನು ವಿಶ್ವ ದರ್ಜೆಯ ಮೂಲಸೌಕರ್ಯಗಳೊಂದಿಗೆ ಜಾಗತಿಕ ನಗರವನ್ನಾಗಿ ಮಾಡುವ ಕುರಿತು ನಾನು ಮಾಜಿ ಪ್ರಧಾನಿಯವರ ಮಾರ್ಗದರ್ಶನವನ್ನು ಕೋರಿದ್ದೇನೆ. ನನ್ನಂತಹ ಯುವಕರನ್ನು ಭೇಟಿ ಮಾಡಲು ಮತ್ತು ಮಾರ್ಗದರ್ಶನ ನೀಡಲು ಸ್ವಲ್ಪ ಸಮಯವನ್ನು ಮೀಸಲಿಟ್ಟಿದ್ದಕ್ಕಾಗಿ ನಾನು ಅವರಿಗೆ ಕೃತಜ್ಞನಾಗಿದ್ದೇನೆ ಎಂದಿದ್ದಾರೆ. ಇದನ್ನೂ ಓದಿ: ಕೇಂದ್ರ ಸರ್ಕಾರ ಎಷ್ಟೇ ಷಡ್ಯಂತ್ರ ಮಾಡಿದರೂ ಅಕ್ಕಿ ಗ್ಯಾರಂಟಿ: ಸಿದ್ದರಾಮಯ್ಯ