ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ (HD Deve Gowda) ಅವರ ಪತ್ನಿ ಆರೋಗ್ಯದಲ್ಲಿ ದಿಢೀರ್ ಏರುಪೇರಾಗಿದೆ. ಅನಾರೋಗ್ಯ ಹಿನ್ನೆಲೆ ಪತ್ನಿ ಚೆನ್ನಮ್ಮ ಅವರನ್ನ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ಹಿನ್ನೆಲೆ ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ (Chenamma) ಅವರನ್ನು ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಬಿಡದಿ ಟೌನ್‌ಶಿಪ್ ಜಟಾಪಟಿ – ತೀವ್ರ ವಿರೋಧದ ಮಧ್ಯೆ 4 ಗ್ರಾಮಗಳ 5,000 ಎಕ್ರೆ ಸ್ವಾಧೀನಕ್ಕೆ ಅಧಿಸೂಚನೆ
ಇಂದು ರಾತ್ರಿ 10 ಗಂಟೆ ಬಳಿಕ ಆರೋಗ್ಯದಲ್ಲಿ ಏರುಪೇರಾಗಿದೆ. ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸದ್ಯಕ್ಕೆ ಯಾವುದೇ ತೊಂದರೆ ಇಲ್ಲ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.
