ರಾಯಚೂರು: ಈ ಹಿಂದೆ ರಾಯಚೂರು (Raichuru) ಜಿಲ್ಲಾಧಿಕಾರಿಯಾಗಿದ್ದ ನಿವೃತ್ತ ಐಎಎಸ್ ಅಧಿಕಾರಿ ಐ.ಆರ್.ಪೆರುಮಾಳ್ ಮಹಾ ಕುಂಭಮೇಳದಲ್ಲಿ (Mahakumbha Mela) ಸನ್ಯಾಸಿಯಾಗಿ ಪ್ರತ್ಯಕ್ಷವಾಗಿದ್ದಾರೆ. ನಿವೃತ್ತ ಐಎಎಸ್ ಅಧಿಕಾರಿ ಐ.ಆರ್.ಪೆರುಮಾಳ್ ಫೋಟೋ ಈಗ ಫುಲ್ ವೈರಲ್ ಆಗಿದೆ.ಇದನ್ನೂ ಓದಿ: ರಮೇಶ್ ಜಾರಕಿಹೊಳಿ, ಯತ್ನಾಳ್ ಉಚ್ಚಾಟನೆಗೆ ಮಾಜಿ ಶಾಸಕ ರೇಣುಕಾಚಾರ್ಯ ಆಗ್ರಹ
Advertisement
ಗಂಟು ಕಟ್ಟಿದ ಕೂದಲು ಇರುವ ಫೋಟೋ ವೈರಲ್ ಆಗಿದ್ದು, ಐಎಎಸ್ ಅಧಿಕಾರಿಯ ವೈರಾಗ್ಯ ಜೀವನ ಅಚ್ಚರಿ ಮೂಡಿಸಿದೆ. 1993-94ರಲ್ಲಿ ರಾಯಚೂರು ಜಿಲ್ಲಾಧಿಕಾರಿಯಾಗಿದ್ದ ಅಧಿಕಾರಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದರು. ರಾಜ್ಯದ ನಾನಾ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸಿ 2012ರಲ್ಲಿ ಅವರು ನಿವೃತ್ತರಾಗಿದ್ದರು.
Advertisement
ಬಳಿಕ 2014 ರಲ್ಲಿ ತಮಿಳುನಾಡಿನ (Tamilnadu) ಮದುರೈ ಜಿಲ್ಲೆಯ ಇರಂಜುಮುಡಿ ಶಿವನ ದೇವಾಲಯ ಬಳಿ ಮಠ ಕಟ್ಟಿಕೊಂಡಿದ್ದರು. ಸನ್ಯಾಸತ್ವ ಸ್ವೀಕರಿಸಿ ಶಿವಯೋಗಿ ಪೆರುಮಾಳ್ ಸ್ವಾಮೀಜಿಯಾಗಿದ್ದ ನಿವೃತ್ತ ಅಧಿಕಾರಿ ಮಹಾ ಕುಂಭಮೇಳದಲ್ಲಿ ಕಾಣಿಸಿಕೊಂಡಿದ್ದಾರೆ ಎನ್ನಲಾಗುವ ಫೋಟೋ ಈಗ ವೈರಲ್ ಆಗಿದೆ.ಇದನ್ನೂ ಓದಿ: New Delhi| ಕಾರಿಗೆ ಬೆಂಕಿ – ಮದುವೆಗೆ ಆಮಂತ್ರಣ ಹಂಚಲು ಹೋಗಿದ್ದ ವರ ಸಾವು