– ವುಹಾನ್‌ನಲ್ಲಿ ಸಂಶೋಧನೆ ನಡೆಸಿದ್ದ ಆಂಡ್ರ್ಯೂ ಹಫ್
– ಸಂಶೋಧನೆಗೆ ಅಮೆರಿಕದಿಂದ ಧನ ಸಹಾಯ
ನ್ಯೂಯಾರ್ಕ್: ಕೊರೊನಾ ವೈರಸ್(Corona Virus) ಮಾನವ ಸೃಷ್ಟಿ. ಚೀನಾದ ವುಹಾನ್ ಲ್ಯಾಬ್‌ನಿಂದಲೇ(China Wuhan Lab) ಸೋರಿಕೆಯಾಗಿದೆ ಎಂದು ಅಲ್ಲಿಯೇ ಸಂಶೋಧನೆ ನಡೆಸಿದ್ದ ವಿಜ್ಞಾನಿಯೊಬ್ಬರು ಸ್ಫೋಟಕ ಹೇಳಿಕೆ ನೀಡಿದ್ದಾರೆ.
Advertisement
ವುಹಾನ್ ಲ್ಯಾಬ್‌ನಲ್ಲಿ ಚೀನಾ ನಡೆಸುತ್ತಿದ್ದ ವೈರಸ್ ಸಂಶೋಧನೆಗೆ ಅಮೆರಿಕ(USA) ಧನ ಸಹಾಯ ನೀಡಿತ್ತು ಎಂದು ಸಾಂಕ್ರಾಮಿಕ ರೋಗಶಾಸ್ತ್ರಜ್ಞ ಆಂಡ್ರ್ಯೂ ಹಫ್(Andrew Huff) ಹೇಳಿದ್ದಾರೆ.
Advertisement
ಕೊರೊನಾ ಸಾಂಕ್ರಾಮಿಕ ಸೃಷ್ಟಿಯಾದ ಬಳಿಕ ಹಲವು ವಿಜ್ಞಾನಿಗಳು, ಮಾಧ್ಯಮಗಳು ಈ ವೈರಸ್ ವುಹಾನ್ ಲ್ಯಾಬ್‌ನಿಂದಲೇ ಸೋರಿಕೆಯಾಗಿದೆ ಎಂದು ಹೇಳಿದ್ದರೂ ಚೀನಾ ಎಲ್ಲವನ್ನೂ ತಿರಸ್ಕರಿಸಿತ್ತು. ಆದರೆ ಆಂಡ್ರ್ಯೂ ಹಫ್ ಅವರ ದಿ ಟ್ರೂತ್ ಎಬೌಟ್ ವುಹಾನ್(The Truth About Wuhan) ಪುಸ್ತಕದಲ್ಲಿ ಈ ಬಗ್ಗೆ ವಿವರವಾದ ಮಾಹಿತಿ ನೀಡಿದ್ದು ಸಂಚಲನ ಸೃಷ್ಟಿಸಿದೆ. ಇದನ್ನೂ ಓದಿ: ಚೀನಾ, ಅಮೆರಿಕ ಸಂಶೋಧನೆಯಿಂದ ವುಹಾನ್ ಮಾರುಕಟ್ಟೆಗೆ ಬಂತು ಕೊರೊನಾ
Advertisement
Advertisement
ಸಾಂಕ್ರಾಮಿಕ ರೋಗಗಳನ್ನು (Pandemic) ಅಧ್ಯಯನ ಮಾಡುವ ನ್ಯೂಯಾರ್ಕ್ ಮೂಲದ ಲಾಭರಹಿತ ಸಂಸ್ಥೆಯಾದ ಇಕೋಹೆಲ್ತ್ ಅಲೈಯನ್ಸ್‌ನ ಮಾಜಿ ಉಪಾಧ್ಯಕ್ಷರಾಗಿರುವ ಆಂಡ್ರ್ಯೂ ಹಫ್ ಹೇಳಿಕೆ ಈಗ ಭಾರೀ ಚರ್ಚೆಗೆ ಗ್ರಾಸವಾಗಿದೆ.
“ಚೀನಾ ಲ್ಯಾಬ್ ಸರಿಯಾದ ನಿಯಂತ್ರಣ ಕ್ರಮಗಳನ್ನು ಹೊಂದಿರಲಿಲ್ಲ. ಸರಿಯಾದ ಜೈವಿಕ ಸುರಕ್ಷತೆ ಮತ್ತು ಅಪಾಯ ನಿರ್ವಹಣೆಯನ್ನು ಖಚಿತಪಡಿಸಿಕೊಳ್ಳದ ಕಾರಣ ಅಂತಿಮವಾಗಿ ವುಹಾನ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿಯಿಂದ ವೈರಸ್ ಸೋರಿಕೆಯಾಯಿತು. ಇದು ದೇಶಿಯವಾಗಿ ರೂಪುಗೊಂಡ ರೋಗದ ತಳಿ ಎನ್ನುವುದು ಚೀನಾಕ್ಕೆ ಮೊದಲ ದಿನದಿಂದಲೇ ತಿಳಿದಿತ್ತು” ಎಂದು ಬರೆದಿದ್ದಾರೆ. ಇದನ್ನೂ ಓದಿ: ವುಹಾನ್ ಮಾರುಕಟ್ಟೆಯ ಸೀಗಡಿ ಮಾರುತ್ತಿದ್ದ ಮಹಿಳೆ ಕೊರೊನಾ ‘ಝೀರೋ ಪೇಶೆಂಟ್’
ಒಂದು ದಶಕಕ್ಕೂ ಹೆಚ್ಚು ಕಾಲ ವುಹಾನ್ ಸಂಸ್ಥೆಯು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಹೆಲ್ತ್‌ನಿಂದ(NIH) ಧನಸಹಾಯದೊಂದಿಗೆ ಬಾವಲಿಗಳಲ್ಲಿನ(Bat) ಹಲವಾರು ಕೊರೊನಾ ವೈರಸ್‌ಗಳನ್ನು ಅಧ್ಯಯನ ಮಾಡುತ್ತಿದೆ. ಎನ್‌ಐಹೆಚ್ ವುಹಾನ್ ಲ್ಯಾಬ್‌ನೊಂದಿಗೆ ನಿಕಟ ಸಂಬಂಧವನ್ನು ಹೊಂದಿದೆ. ಬಯೋಮೆಡಿಕಲ್ ಮತ್ತು ಸಾರ್ವಜನಿಕ ಆರೋಗ್ಯ ಸಂಶೋಧನೆಯ ಜವಾಬ್ದಾರಿ ಹೊಂದಿರುವ ಈ ಎನ್‌ಐಎಚ್ ಅಮೆರಿಕ ಸರ್ಕಾರದ ಪ್ರಾಥಮಿಕ ಸಂಸ್ಥೆಯಾಗಿದೆ ಎಂದು ಉಲ್ಲೇಖಿಸಿದ್ದಾರೆ.
ಕೊರೊನಾ ವೈರಸ್ ವೇಗವಾಗಿ ಹರಡಿದ್ದನ್ನು ಗಮನಿಸಿ ಚೀನಾವೇ ಈ ವೈರಸ್ ಸೃಷ್ಟಿ ಮಾಡಿದೆ. ಅಷ್ಟೇ ಅಲ್ಲದೇ ಈ ಸಂಶೋಧನೆಗೆ ಅಮೆರಿಕವೇ ಧನ ಸಹಾಯ ಮಾಡಿತ್ತು ಎಂದು ಈ ಹಿಂದೇಯೇ ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ಎಲ್ಲ ವರದಿ, ಆರೋಪಗಳನ್ನು ಚೀನಾ ತಿರಸ್ಕರಿಸಿತ್ತು. ಇದನ್ನೂ ಓದಿ: ಕೊರೊನಾ ವೈರಸ್ ಸೃಷ್ಟಿಯಾಗಿದ್ದು ಭಾರತದಲ್ಲಿ – ಚೀನಾದ ಮೊಂಡುವಾದ
ಚೀನಾವೇ ಸೃಷ್ಟಿಸಿದ ವೈರಸ್?
ವೈರಸ್ ಅಧ್ಯಯನ ಮಾಡಲೆಂದೇ ವುಹಾನ್ ನಗರದಲ್ಲಿ ಚೀನಾ ಸರ್ಕಾರ ಸಂಶೋಧನಾ ಕೇಂದ್ರಗಳನ್ನು ತೆರೆದಿದೆ. ವುಹಾನ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿ ಸಂಸ್ಥೆಯಲ್ಲಿ ಸಾರ್ಸ್ ಸೇರಿದಂತೆ ಹಲವು ವೈರಸ್ ಗಳ ಬಗ್ಗೆ ಅಧ್ಯಯನ ನಡೆಸಲಾಗುತ್ತಿದೆ. ಈಗ ಕೊರೊನಾ ವೈರಸ್ ಸೃಷ್ಟಿಯಾದ ಕೇಂದ್ರ ಸ್ಥಳ ವುಹಾನ್ ಆಗಿದೆ. ವುಹಾನ್ ವಿಶ್ವವಿದ್ಯಾಲಯಲ್ಲಿ ಅಧ್ಯಯನ ನಡೆಸುತ್ತಿರುವ ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಕೊರೊನಾ ಪೀಡಿತರಾಗಿದ್ದರು. ಭಾರತದಲ್ಲಿ ಮೊದಲು ಕೇರಳದ ಮೂರು ಮಂದಿ ವಿದ್ಯಾರ್ಥಿ ಕೊರೊನಾ ವೈರಸ್ ಪತ್ತೆಯಾಗಿತ್ತು. ಈ ಮೂವರು ವುಹಾನ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳೇ ಆಗಿದ್ದರು ಎನ್ನುವುದು ವಿಶೇಷ.
ವೈರಾಲಜಿ ಸಂಸ್ಥೆಯಲ್ಲಿ ಏನು ಪ್ರಯೋಗ ಕೈಗೊಳ್ಳಲಾಗುತ್ತದೆ ಎನ್ನುವುದು ಈಗಲೂ ರಹಸ್ಯವಾಗಿದೆ. ಯುದ್ಧದ ಮೂಲಕ ದೇಶಗಳ ಜೊತೆ ಹೋರಾಡುವುದು ಇಂದು ಬಹಳ ಕಷ್ಟ. ಹೀಗಾಗಿ ಚೀನಾ ಜೈವಿಕ ಅಸ್ತ್ರವನ್ನು ತಯಾರು ಮಾಡುತ್ತದೆ ಎನ್ನುವ ಆರೋಪ ಈ ಹಿಂದಿನಿಂದಲೂ ಕೇಳಿ ಬಂದಿತ್ತು. ಸಾರ್ಸ್ ಆರಂಭದಲ್ಲಿ ಕಂಡು ಬಂದಿದ್ದು ಇದೇ ವುಹಾನ್‌ನಲ್ಲಿ. 2002ರಲ್ಲಿ ಕಾಣಿಸಿಕೊಂಡಾಗ ಚೀನಾ ಈ ವಿಚಾರವನ್ನು ಮುಚ್ಚಿಟ್ಟಿತ್ತು. ಆದರೆ ವಿದೇಶಗಳಿಗೆ ಹರಡಿದಾಗ ಕೊನೆಗೆ ಸತ್ಯವನ್ನು ಒಪ್ಪಿಕೊಂಡಿತ್ತು. ಈಗಲೂ ಕೆಲ ವಿಜ್ಞಾನಿಗಳು ಇದು ಯಾವುದೋ ಪ್ರಾಣಿಯಿಂದ, ಪಕ್ಷಿಯಿಂದ ಕೊರೋನಾ ವೈರಸ್ ಸೃಷ್ಟಿಯಾಗಿಲ್ಲ. ಜೈವಿಕ ಅಸ್ತ್ರವನ್ನು ಪರೀಕ್ಷೆ ಮಾಡುತ್ತಿದ್ದಾಗ ಹೇಗೋ ಸೋರಿಕೆಯಾಗಿ ಈಗ ಜಗತ್ತಿಗೆ ಹರಡುತ್ತಿದೆ ಎಂದು ವಾದವನ್ನು ಮುಂದಿಡುತ್ತಿದ್ದಾರೆ. ಇದನ್ನೂ ಓದಿ: 2 ತಿಂಗಳ ಬಳಿಕ ಸಾರ್ವಜನಿಕವಾಗಿ ಕಾಣಿಸಿಕೊಂಡ ವುಹಾನ್ ಪತ್ರಕರ್ತ
ಟ್ವೀಟ್ ಡಿಲೀಟ್:
ಈ ಹಿಂದೆ ಚೀನಾ ಡೈಲಿ 2018ರಲ್ಲಿ ಮಾಡಿರುವ ಟ್ವೀಟ್ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಏಷ್ಯದ ಅತಿ ದೊಡ್ಡ ವೈರಸ್ ಬ್ಯಾಂಕಿನ ಚಿತ್ರವನ್ನು ವೀಕ್ಷಿಸಿ, ಮಧ್ಯ ಚೀನಾ ಹುಬೆ ಪ್ರಾಂತ್ಯದಲ್ಲಿರುವ ವುಹಾನ್ ಇನ್ಸ್ಟಿಟ್ಯೂಟ್ ಆಫ್ ವೈರಾಲಾಜಿ ಕೇಂದ್ರದಲ್ಲಿ 1,500 ವಿವಿಧ ವೈರಸ್ ಗಳನ್ನು ರಕ್ಷಿಸಲಾಗಿದೆ ಎಂದು ಚೀನಾ ಡೈಲಿ 2018ರ ಮೇ 29 ಬೆಳಗ್ಗೆ 5:45 ಕ್ಕೆ ಟ್ವೀಟ್ ಮಾಡಿತ್ತು. ನಂತರ ಈ ಟ್ವೀಟ್ ಅನ್ನು ಡಿಲೀಟ್ ಮಾಡಿತ್ತು.
ವುಹಾನ್ ವಿಶೇಷತೆ ಏನು?
ಮಧ್ಯ ಚೀನಾದ ದೊಡ್ಡ ನಗರ ವುಹಾನ್ ಆಗಿದ್ದು ಇಲ್ಲಿ ಬಂದರು, ವಿಮಾನ ನಿಲ್ದಾಣಗಳಿವೆ. 35 ಶಿಕ್ಷಣ ಸಂಸ್ಥೆಗಳಿದ್ದು ಚೀನಾದ ಶೈಕ್ಷಣಿಕ ಹಬ್ ಎಂದು ವುಹಾನ್ ನಗರವನ್ನು ಕರೆಯಲಾಗುತ್ತದೆ. ಈ ಕಾರಣಕ್ಕೆ ಹಲವು ರಾಷ್ಟ್ರಗಳ ವಿದ್ಯಾರ್ಥಿಗಳು ಇಲ್ಲಿ ಅಧ್ಯಯನ ನಡೆಸುತ್ತಿದ್ದಾರೆ. ಅಷ್ಟೇ ಅಲ್ಲದೇ ಚೀನಾ ಸರ್ಕಾರವೇ ಇಲ್ಲಿ ಹಲವು ಸಂಶೋಧನಾ ಕೇಂದ್ರಗಳನ್ನು ತೆರೆದಿದೆ. ಒಟ್ಟು ಇಲ್ಲಿ 350 ಸಂಶೋಧನಾ ಕೇಂದ್ರಗಳಿವೆ.