– ಬಿಜೆಪಿ ವಿರುದ್ಧ ಮಾಜಿ ಸಿಎಂ ಕಿಡಿ
ಬೆಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾರನ್ನು ಉತ್ತರಪ್ರದೇಶದ ಪೊಲೀಸರು ಗೃಹಬಂಧನದಲ್ಲಿರಿಸಿದ್ದು, ಈ ವರ್ತನೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ.
Advertisement
ಈ ಸಂಬಂಧ ಟ್ವೀಟ್ ಮಾಡಿ ಆಕ್ರೋಶಧ ಹೊರಹಾಕಿರುವ ಸಿದ್ದರಾಮಯ್ಯ, ಇದು ಬಿಜೆಪಿಯ ತಾಲಿಬಾನಿ ಸಂಸ್ಕೃತಿ. ರೈತರ ಪರ ನಿಲ್ಲೋದನ್ನು ತಪ್ಪಿಸುವ ಪರಿ ಇದಾಗಿದ್ದು, ಪ್ರಜಾಪ್ರಭುತ್ವಕ್ಕೆ ಇದು ಕಪ್ಪುಚುಕ್ಕೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಗೆಸ್ಟ್ ಹೌಸ್‌ನಲ್ಲಿ ಕಸ ಗುಡಿಸುತ್ತಿರೋ ಪ್ರಿಯಾಂಕಾ ಗಾಂಧಿ ವೀಡಿಯೋ ವೈರಲ್
Advertisement
Advertisement
ಇದೇ ವೇಳೆ ದೆಹಲಿಯಲ್ಲಿ ಪ್ರತಿಭಟನಾ ನಿರತ ರೈತರ ಮೇಲೆ ಕಾರು ಹತ್ತಿಸಿದ ಪ್ರಕರಣವನ್ನೂ ಖಂಡಿಸಿರುವ ಮಾಜಿ ಸಿಎಂ, ಮುಗ್ಧ ರೈತರ ಅವರ ಹಕ್ಕಿಗಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಮುಗ್ಧ ರೈತರ ಮೇಲೆ ಈ ರೀತಿ ಮಾಡಿದ್ದು ಸರಿಯಲ್ಲ. ಈ ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಹತ್ಯಾಕಾಂಡದ ನಂತರವೂ ಮೌನವಾಗಿರುವವರು ಈಗಾಗಲೇ ಸತ್ತಿದ್ದಾರೆ: ರಾಹುಲ್ ಗಾಂಧಿ
Advertisement
ಅಲ್ಲದೆ ಬಿಜೆಪಿ ಆಡಳಿತವಿರುವ ರಾಜ್ಯಗಳು ಹಾಗೂ ಇಡೀ ದೇಶ ಗೂಂಡಾ ರಾಜ್ಯವಾಗಿ ಬದಲಾಗುತ್ತಿದೆ. ಬಿಜೆಪಿ ತಪ್ಪನ್ನು ಪ್ರಶ್ನೆ ಮಾಡುವಂತಾ ಹಕ್ಕೆ ಇಲ್ಲದಂತಾಗಿದೆ. ಇದು ಮೋದಿ ಆಡಳಿತದ ನಿರಂಕುಶ ಪ್ರಭುತ್ವವೇ ಎಂದು ಮಾಜಿ ಸಿಎಂ ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ನೀವು ಹತ್ಯೆ ಮಾಡಿದ ಜನರಿಗಿಂತ ನಾನು ಮುಖ್ಯ ಅಲ್ಲ: ಪ್ರಿಯಾಂಕಾ ಗಾಂಧಿ