ಕೋಲಾರ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ಸಾಮಾನ್ಯರಂತೆ ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದಾರೆ.
ಕೊರೊನಾ ವೈರಸ್‍ನಿಂದಾಗಿ ದೇಶಾದ್ಯಂತ ಲಾಕ್‍ಡೌನ್ ಘೋಷಿಸಲಾಗಿದೆ. ಹೀಗಾಗಿ ಅನೇಕ ರಾಜಕಾರಣಿಗಳು ಮನೆಯಲ್ಲೇ ಕಳೆಯುತ್ತಿದ್ದರೆ, ಕೆಲವರು ಕ್ಷೇತ್ರದಲ್ಲಿ ಪ್ರವಾಸ ಕೈಗೊಂಡು ಜನರ ಸಂಕಷ್ಟಕ್ಕೆ ಸ್ಪಂದಿಸುತ್ತಿದ್ದಾರೆ. ಆದರೆ ರಮೇಶ್ ಕುಮಾರ್ ಅವರು ತಮ್ಮ ತೋಟದಲ್ಲಿ ಕೆಲಸ ಮಾಡುವ ಮೂಲಕ ಲಾಕ್‍ಡೌನ್‍ನಲ್ಲಿ ಕಾಲ ಕಳೆಯುತ್ತಿದ್ದಾರೆ.
Advertisement
Advertisement
ಕಾಂಗ್ರೆಸ್‍ನ ಟಾಸ್ಕ್ ಪೋರ್ಸ್ ಕಮಿಟಿ ಅಧ್ಯಕ್ಷ ರಮೇಶ್ ಕುಮಾರ್ ಅವರು ಶ್ರೀನಿವಾಸಪುರ ತಾಲೂಕಿನ ಅಡ್ಡಗಲ್ ಗ್ರಾಮದಲ್ಲಿರುವ ತೋಟದಲ್ಲಿ ಸಸಿಗಳಿಗೆ ನೀರು ಹಾಯಿಸಲು ಸಿದ್ಧತೆ ನಡೆಸಿದ್ದಾರೆ. ಸ್ವತಃ ಹೆಗಲ ಮೇಲೆ ಪೈಪ್‍ಗಳನ್ನು ಹೊತ್ತು ಸಾಗಿದರು. ಅಷ್ಟೇ ಅಲ್ಲದೆ ಆಪ್ತರೊಂದಿಗೆ ಕುಳಿತು ಅನೇಕ ಕೆಲಸಗಳನ್ನು ನಿರ್ವಹಿಸಿದ್ದಾರೆ.
Advertisement
ರಮೇಶ್ ಕುಮಾರ್ ಅವರು ತಮ್ಮ ಮಾವಿನ ತೋಟಕ್ಕೆ ಡ್ರಿಪ್ ಪೈಪ್ ಲೈನ್ ಅಳವಡಿಸುತ್ತಿರುವ ವಿಡಿಯೋ ಹಾಗೂ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಕೂಲಿ ಕೆಲಸದವರು ಸಿಗದ ಹಿನ್ನೆಲೆಯಲ್ಲಿ ತಮ್ಮ ಆಪ್ತರೊಂದಿಗೆ ತೋಟದ ಕೆಲಸದಲ್ಲಿ ಮಾಜಿ ಸ್ಪೀಕರ್ ಕಾರ್ ಚಾಲಕ ಬಂಗಾರು, ಆಪ್ತ ಸಹಾಯಕ ಶ್ರೀನಿವಾಸ ಜೊತೆಗೂಡಿ ಕೆಲಸ ಮಾಡಿದ್ದಾರೆ.