ಶ್ರೀಲಂಕಾ ಮಾಜಿ ಕ್ರಿಕೆಟಿಗನ ಕಾರಿಗೆ ಲಾರಿ ಡಿಕ್ಕಿ – ಆಸ್ಪತ್ರೆಗೆ ದಾಖಲು

Public TV
1 Min Read
Former Sri Lanka Skipper Hospitalised After Horrifying Car Accident

ಕೊಲಂಬೋ: ಶ್ರೀಲಂಕಾ ತಂಡದ ಮಾಜಿ ಕ್ರಿಕೆಟಿಗ (Former Sri Lanka Skipper) ಲಾಹಿರು ತಿರಿಮನ್ನೆ (Lahiru Thirimanne) ಭೀಕರ ಕಾರು ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅವರು ಪ್ರಯಾಣಿಸುತ್ತಿದ್ದ ಕಾರು ಮತ್ತು ಲಾರಿ ಅನುರಾಧಪುರ ಎಂಬಲ್ಲಿ ಮುಖಾಮುಖಿ ಡಿಕ್ಕಿಯಾಗಿದೆ. ಅವರನ್ನು ಅನುರಾಧಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿ ತಿರಿಮನ್ನೆ ಅವರೊಂದಿಗೆ ಮತ್ತೋರ್ವ ಪ್ರಯಾಣಿಕನಿದ್ದು, ಅವರಿಗೂ ಸಹ ಗಾಯಗಳಾಗಿದ್ದು, ಅವರನ್ನೂ ಸಹ ಚಿಕಿತ್ಸೆಗೆ ದಾಖಲಿಸಲಾಗಿದೆ.

ತಿರಿಮನ್ನೆ ಪ್ರಸ್ತುತ ಲೆಜೆಂಡ್ಸ್ ಕ್ರಿಕೆಟ್‍ನಲ್ಲಿ ನ್ಯೂಯಾರ್ಕ್ ಸ್ಟ್ರೈಕರ್ಸ್ ಪರ ಆಡುತ್ತಿದ್ದು, ಘಟನೆಗೆ ಸಂಬಂಧಿಸಿದಂತೆ ಫ್ರಾಂಚೈಸಿ ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಿದೆ.

ತಿರಿಮನ್ನೆ ಮತ್ತು ಅವರ ಕುಟುಂಬ ಧಾರ್ಮಿಕ ಕ್ಷೇತ್ರಕ್ಕೆ ತೆರಳುತ್ತಿದ್ದಾಗ ಈ ಅಪಘಾತ ನಡೆದಿದೆ. ಅಪಘಾತದ  (Car Accident) ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ಜಖಂ ಆಗಿದೆ.

2010 ರಲ್ಲಿ ಶ್ರೀಲಂಕಾ ಪರ ಪಾದಾರ್ಪಣೆ ಮಾಡಿದ್ದ ತಿರಿಮನ್ನೆ ಒಟ್ಟು 197 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ್ದಾರೆ. 2022 ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿರುವ 34 ವರ್ಷ ಎಡಗೈ ದಾಂಡಿಗ ತಿರಿಮನ್ನೆ ವಿವಿಧ ಲೀಗ್​ಗಳಲ್ಲಿ ಕಣಕ್ಕಿಳಿಯುತ್ತಿದ್ದರು. ಇತ್ತೀಚೆಗೆ ನಡೆದ ಲೆಜೆಂಡ್ಸ್ ಕ್ರಿಕೆಟ್ ಟ್ರೋಫಿ ಟೂರ್ನಿಯಲ್ಲೂ ಅವರು ಕಾಣಿಸಿಕೊಂಡಿದ್ದರು.

Share This Article