ಚೆನ್ನೈ: ತಮಿಳುನಾಡು (Tamil Nadu) ಮಾಜಿ ಡಿಜಿಪಿ ರಾಜೇಶ್ ದಾಸ್ (Rajesh Das) ಅವರನ್ನು ಅವರ ಪತ್ನಿ ಬೀಲಾ ವೆಂಕಟೇಶನ್ ನೀಡಿದ ದೂರಿನ ಆಧಾರದ ಮೇಲೆ ಅತಿಕ್ರಮ ಪ್ರವೇಶ ಮತ್ತು ಬೆದರಿಕೆ ಆರೋಪದಡಿ ಶುಕ್ರವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೇ 18 ರಂದು ನಗರದ ಹೊರವಲಯದಲ್ಲಿರುವ ತೈಯೂರಿನ ಆಕೆಯ ಮನೆಗೆ ದಾಸ್ ಮತ್ತು ಆತನ ಸಹಚರರು ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಅತಿಕ್ರಮ ಪ್ರವೇಶ ಮಾಡಿದ್ದಾರೆ ಎಂದು ರಾಜ್ಯ ಇಂಧನ ಕಾರ್ಯದರ್ಶಿಯಾಗಿರುವ ವೆಂಕಟೇಶನ್ ಆರೋಪಿಸಿದ್ದಾರೆ. ಇದನ್ನೂ ಓದಿ: ಕೇದಾರನಾಥದಲ್ಲಿ ಗಿರಗಿರನೆ ತಿರುಗಿ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ
Advertisement
Advertisement
ಬೀಲಾ ವೆಂಕಟೇಶನ್ ಅವರು ಸೋಮವಾರ ಸಲ್ಲಿಸಿದ ದೂರಿಗೆ ಸಂಬಂಧಿಸಿದಂತೆ ದಾಸ್ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Advertisement
ಎಐಎಡಿಎಂಕೆ ಆಡಳಿತದಲ್ಲಿ ಡಿಜಿಪಿಯಾಗಿ ಸೇವೆ ಸಲ್ಲಿಸಿದ್ದ ದಾಸ್, ಜೂನಿಯರ್ ಮಹಿಳಾ ಐಪಿಎಸ್ ಅಧಿಕಾರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿದ್ದರು. ಪ್ರಕರಣದಲ್ಲಿ ವಿಲ್ಲುಪುರಂನ ನ್ಯಾಯಾಲಯವು ದೋಷಿ ಎಂದು ತೀರ್ಪು ನೀಡಿತ್ತು. ಇದನ್ನೂ ಓದಿ: ಕಾಂಬೋಡಿಯಾದಲ್ಲಿ ಮೋಸದ ಉದ್ಯೋಗ ಜಾಲಕ್ಕೆ ಸಿಲುಕಿದ್ದ 60 ಮಂದಿ ಭಾರತೀಯರ ರಕ್ಷಣೆ
Advertisement
ಅವರಿಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು. ಇತ್ತೀಚಿಗೆ ಸುಪ್ರೀಂ ಕೋರ್ಟ್ ಅವರನ್ನು ಬಂಧನದಿಂದ ಮುಕ್ತಗೊಳಿಸಿ ತಾತ್ಕಾಲಿಕ ರಿಲೀಫ್ ನೀಡಿತ್ತು.