ಹೈದರಾಬಾದ್: ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ (K Chandrashekar Rao )ಅವರು ಕಾಲು ಜಾರಿ ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಚಂದ್ರಶೇಖರ್ ರಾವ್ ಅವರಿಂದು (ಡಿ.8) ಮುಂಜಾನೆ 2 ಗಂಟೆ ಸುಮಾರಿಗೆ ಹೈದರಾಬಾದ್‌ನ ತಮ್ಮ ನಿವಾಸದಲ್ಲಿ ಕಾಲು ಜಾರಿ ಬಿದ್ದು, ಸೊಂಟದ ಭಾಗಕ್ಕೆ ತೀವ್ರ ಪೆಟ್ಟಾಗಿದ್ದು, ಹೈದರಾಬಾದ್‌ನ ಯಶೋದಾ ಆಸ್ಪತ್ರೆಗೆ (Hyderabad Hospital) ದಾಖಲಿಸಲಾಗಿದೆ. ಇದನ್ನೂ ಓದಿ: ಶೋಭಾ ಕರಂದ್ಲಾಜೆ ಸೇರಿ ನಾಲ್ವರು ಕೇಂದ್ರ ಸಚಿವರಿಗೆ ಹೆಚ್ಚುವರಿ ಖಾತೆಗಳ ಉಸ್ತುವಾರಿ
ಕೆ. ಚಂದ್ರಶೇಖರ್ ರಾವ್ ಅವರು ಕುಸಿದು ಬಿದ್ದ ನಂತರ ಸೊಂಟ ಮುರಿತಕ್ಕೆ ಒಳಗಾಗಿಗಿರಬಹುದು ಎಂದು ವೈದ್ಯರು (Doctor) ಶಂಕಿಸಿದ್ದಾರೆ. ಆರೋಗ್ಯ ತಪಾಸಣೆ (ಸ್ಕ್ಯಾನಿಂಗ್) ನಡೆಸಿದ ಬಳಿಕ ನಿಜಾಂಶ ತಿಳಿಯಲಿದೆ ಎಂದು ವೈದ್ಯರು ಹೇಳಿದ್ದಾರೆ. ಕೆಸಿಆರ್ (KCR) ಕಳೆದ ಮೂರು ದಿನಗಳಿಂದ ತಮ್ಮ ಮನೆಯಲ್ಲಿ ಜನರನ್ನು ಭೇಟಿಯಾಗುತ್ತಿದ್ದರು ಎಂದು ಹೇಳಲಾಗಿದೆ. ಇದನ್ನೂ ಓದಿ: ಹಮಾಸ್ ಜೊತೆ ಗುಂಡಿನ ಚಕಮಕಿ; ತಿಂಗಳ ಹಿಂದಷ್ಟೇ ನಿಶ್ಚಿತಾರ್ಥವಾಗಿದ್ದ ಭಾರತೀಯ ಮೂಲದ ಇಸ್ರೇಲಿ ಯೋಧ ಸಾವು
ಕೆಸಿಆರ್ 2014 ರಿಂದ 2023ರ ವರೆಗೆ ತೆಲಂಗಾಣ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಆದ್ರೆ ಇತ್ತೀಚೆಗೆ ಮುಕ್ತಾಯಗೊಂಡ ವಿಧಾನಸಭಾ ಚುನಾವಣೆಯಲ್ಲಿ ಕೆಸಿಆರ್ ನೇತೃತ್ವದ ಭಾರತ್ ರಾಷ್ಟ್ರ ಸಮಿತಿ (BRS) ಅನ್ನು ಕಾಂಗ್ರೆಸ್ ಸೋಲಿಸಿತು. ರೇವಂತ್ ರೆಡ್ಡಿ ಅವರು ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ 11 ಸಚಿವರೊಂದಿಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ.