DistrictsKarnatakaKolarLatestLeading NewsMain Post

ಹಿರಿಯ ಕಾಂಗ್ರೆಸ್ಸಿಗ, ಮಾಜಿ ಕೇಂದ್ರ ಮಂತ್ರಿ ಜಾಲಪ್ಪ ನಿಧನ

ಕೋಲಾರ: ರಾಜ್ಯದ ಹಿಂದುಳಿದ ವರ್ಗಗಳ ನೇತಾರ, ಹಿರಿಯ ಕಾಂಗ್ರೆಸ್ಸಿಗ, ಕೇಂದ್ರದ ಮಾಜಿ ಮಂತ್ರಿ ಆರ್ ಎಲ್ ಜಾಲಪ್ಪ(98) ನಿಧನರಾಗಿದ್ದಾರೆ.

ವಯೋಸಹಜ ಅನಾರೋಗ್ಯಗಳ ಕಾರಣದಿಂದ ಜಾಲಪ್ಪ ಅವರು ಕೋಲಾರದ ಜಾಲಪ್ಪ ಆಸ್ಪತ್ರೆಯಲ್ಲಿ ಇಹಲೋಕವನ್ನು ತ್ಯಜಿಸಿದ್ದಾರೆ. ಮೆದುಳು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ  ಜಾಲಪ್ಪ ಅವರಿಗೆ ಆಸ್ಪತ್ರೆಯಲ್ಲಿ ಕಳೆದ 40 ದಿನಗಳಿಂದ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

ಜಾಲಪ್ಪ ಶ್ವಾಸಕೋಶ ಸಮಸ್ಯೆ ಮತ್ತು ಕಿಡ್ನಿ ವೈಫಲ್ಯದಿಂದಲೂ ಬಳಲುತ್ತಿದ್ದರು. ಅವರ ಬಿಪಿ ಮತ್ತು ಪ್ಲೇಟ್‍ಲೆಟ್ಸ್ ಸಂಖ್ಯೆ ಕನಿಷ್ಠ ಮಟ್ಟಕ್ಕೆ ಇಳಿದು, ಆರೋಗ್ಯ ಕ್ಷೀಣಿಸಿತ್ತು. ವೈದ್ಯರು ಅವರನ್ನು ಉಳಿಸಿಕೊಳ್ಳಲು ಹರಸಾಹಸ ಮಾಡಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಂಜೆ 7:30ಕ್ಕೆ ಅವರು ನಿಧನರಾಗಿದ್ದಾರೆ. ಇದನ್ನೂ ಓದಿ: ಬಿಜೆಪಿಯೊಂದಿಗೆ ಮೈತ್ರಿ – ಅಮರೀಂದರ್‌ ಸಿಂಗ್‌ ಅಧಿಕೃತ ಘೋಷಣೆ

1925 ಅಕ್ಟೋಬರ್ 19 ರಂದು ಜನಿಸಿದ್ದ ಇವರ ಪೂರ್ಣ ಹೆಸರು ಅರ್.ಲಕ್ಷ್ಮಿ ನಾರಾಯಣಪ್ಪ ಜಾಲಪ್ಪ. 1996 ರಿಂದ 2009 ರ ವರೆಗೆ ಚಿಕ್ಕಬಳ್ಳಾಪುರ ಲೋಕಸಭೆ ಸದಸ್ಯರಾಗಿ ಆಯ್ಕೆಯಾದ ಇವರು ನಾಲ್ಕು ಬಾರಿ ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದಿಂದ ಚುನಾಯಿತರಾಗಿದ್ದರು. 1996 ರಿಂದ 98ರ ವರೆಗೆ ಕೇಂದ್ರ ಜವಳಿ(ಟೆಕ್ಸ್ ಟೈಲ್) ಖಾತೆ ರಾಜ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಇದನ್ನೂ ಓದಿ: ಪ್ರಧಾನಿ ಮೋದಿಗೆ ಭೂತಾನ್‍ನ ಅತ್ಯುನ್ನತ ನಾಗರಿಕ ಪ್ರಶಸ್ತಿ ಗೌರವ

ದೇವರಾಜ ಅರಸು ಅವರೊಂದಿಗೆ 1980 ರಲ್ಲಿ ಜನತಾ ಪಾರ್ಟಿಗೆ ಸೇರ್ಪಡೆಯಾದ ಬಳಿಕ 1989 ರಲ್ಲಿ ಜನತಾ ದಳಕ್ಕೆ ಸೇರಿದ್ದರು. ಈಡಿಗ ಸಮುದಾಯದವರಾಗಿದ್ದ ಜಾಲಪ್ಪ 1951 ರಲ್ಲಿ ಮೈಸೂರು ಮಹಾರಾಜ ಕಾಲೇಜಿನಲ್ಲಿ ಬಿ.ಎ ಪದವಿ ಪಡೆದಿದ್ದರು. ಪತ್ನಿ ವಿಜಯಲಕ್ಷ್ನೀ ಅವರನ್ನು ಮದುವೆಯಾಗಿದ್ದ ಇವರು ದೊಡ್ಡ ಬಳ್ಳಾಪುರ ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷರಾಗಿದ್ದರು.

 

ರಾಮಕೃಷ್ಣ ಹೆಗಡೆ ಅವರ ಸಚಿವ ಸಂಪುಟದಲ್ಲಿ ಸಹಕಾರ ಹಾಗೂ ಕಂದಾಯ ಸಚಿವರಾಗಿ ಸೇವ ಸಲ್ಲಿಸಿದ್ದ ಇವರು ಕೃಷಿ, ಶಿಕ್ಷಣ ಕ್ಷೇತ್ರದಲ್ಲೂ ಅವರು ಆಸಕ್ತಿ ಹೊಂದಿದ್ದರು. ಶ್ರೀ ದೇವರಾಜ ಅರಸ್ ಮೆಡಿಕಲ್ ಕಾಲೇಜು ಹಾಗೂ ಅರ್.ಎಲ್ ಜಾಲಪ್ಪ ಅಸ್ಪತ್ರೆ ಸಂಶೋಧನಾ ಕೇಂದ್ರದ ಅಧ್ಯಕ್ಷರಾಗಿದ್ದ ಆರ್ ಎಲ್ ಜಾಲಪ್ಪ ಮೂರು ಗಂಡು ಮಕ್ಕಳು ಹಾಗೂ ನಾಲ್ಕು ಜನ ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

Leave a Reply

Your email address will not be published.

Back to top button