ವಾಷಿಂಗ್ಟನ್: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮಾರ್ ಎ ಲಾಗೊ ಎಸ್ಟೇಟ್ ಮೇಲೆ ಎಫ್‍ಬಿಐ ದಾಳಿ ಮಾಡಿದೆ.
2020ರಲ್ಲಿ ಚುನಾವಣೆಯ ಸೋಲಿನ ಬಳಿಕ ಟ್ರಂಪ್ ಶ್ವೇತಭವನವನ್ನು ತೊರೆದು, ತಮ್ಮ ಫ್ಲೊರಿಡಾ ನಿವಾಸಕ್ಕೆ ವರ್ಗೀಕೃತ ದಾಖಲೆಗಳನ್ನು ತೆಗೆದುಕೊಂಡು ಹೋಗಿದ್ದಾರೆಯೇ ಎಂಬುದನ್ನು ಅಮೆರಿಕದ ನ್ಯಾಯಾಂಗ ಇಲಾಖೆ ತನಿಖೆ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ದಾಳಿ ನಡೆದಿದೆ ಎಂದು ವರದಿಯಾಗಿದೆ.
Advertisement
Advertisement
ಈ ಬಗ್ಗೆ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತನಾಡಿ, ಇದು ನಮ್ಮ ರಾಷ್ಟ್ರಕ್ಕೆ ಕರಾಳ ಸಮಯವಾಗಿದೆ. ಏಕೆಂದರೆ ಫ್ಲೊರಿಡಾದ ಪಾಮ್ ಬೀಚ್‍ನಲ್ಲಿರುವ ನನ್ನ ಮನೆ ಮೇಲೆ ದಾಳಿ ನಡೆದಿದೆ. ಎಫ್‍ಬಿಐ ಅಧಿಕಾರಿಗಳು ಮನೆಯನ್ನು ಆಕ್ರಮಿಸಿಕೊಂಡಿದ್ದಾರೆ. ಅಮೆರಿಕದ ಅಧ್ಯಕ್ಷ ಹುದ್ದೆಯಲ್ಲಿದ್ದವರಿಗೆ ಈ ಹಿಂದೆ ಇಂತಹ ಪರಿಸ್ಥಿತಿ ಎಂದೂ ಬಂದಿರಲಿಲ್ಲ. ಸರ್ಕಾರಿ ತನಿಖಾ ಏಜೆನ್ಸಿಗಳೊಂದಿಗೆ ಸಹಕರಿಸಿದ ನಂತರವೂ, ನನ್ನ ಮನೆಯ ಮೇಲೆ ಈ ಅಘೋಷಿತ ದಾಳಿ ಅಗತ್ಯವಿರಲಿಲ್ಲ. ಹಾಗೂ ಅದು ಸೂಕ್ತ ಅಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
Advertisement
ಎಫ್‍ಬಿಐ ಅಧಿಕಾರಿಗಳು ತಮ್ಮ ಸುರಕ್ಷಿತ ನೆಲೆಯ ಬಾಗಿಲನ್ನು ಒಡೆದು ತೆರೆದಿದ್ದಾರೆ. ಈ ರೀತಿಯ ದಾಳಿ ತೃತೀಯ ಜಗತ್ತಿನ ದೇಶಗಳಲ್ಲಿ ಮಾತ್ರ ನಡೆಯುತ್ತದೆ ಎಂದ ಅವರು, ತಮ್ಮ ಮನೆಗೆ ಎಫ್‍ಬಿಐ ಮುತ್ತಿಗೆ ಹಾಕಿದೆ ಎಂದು ಕಿಡಿಕಾರಿದರು.
Advertisement
ವಾಟರ್‍ಗೇಟ್ ಪ್ರಕರಣಕ್ಕೂ ಇದಕ್ಕೂ ಏನು ವ್ಯತ್ಯಾಸ? ಇಲ್ಲಿ ಡೆಮೆಕ್ರಾಟಿಕ್‍ಗಳು ಅಮೆರಿಕದ 45ನೇ ಅಧ್ಯಕ್ಷರ ಮನೆಗೆ ನುಗ್ಗಿದ್ದಾರೆ. ನಾನು 2024ರ ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ತಯಾರಿ ನಡೆಸುತ್ತಿದ್ದ ಸಮಯದಲ್ಲಿ ಎಫ್‍ಬಿಐ ದಾಳಿ ನಡೆದಿದೆ ಎಂದು ಟ್ರಂಪ್ ದೂರಿದ್ದಾರೆ. ಇದನ್ನೂ ಓದಿ: 12 ಸಾವಿರಕ್ಕಿಂತ ಕಡಿಮೆ ಬೆಲೆಯ ಚೀನಿ ಫೋನ್ ಬ್ಯಾನ್? – ಭಾರತದಲ್ಲಿ ಯಾವ ಕಂಪನಿಯ ಪಾಲು ಎಷ್ಟಿದೆ?
ಘಟನೆಗೆ ಸಂಬಂಧಿಸಿ ವಾಷಿಂಗ್ಟನ್‍ನಲ್ಲಿರುವ ಎಫ್‍ಬಿಐನ ಪ್ರಧಾನ ಕಚೇರಿ ಮತ್ತು ಮಿಯಾಮಿಯಲ್ಲಿರುವ ಅದರ ಉಪ ಕಚೇರಿ ಪ್ರತಿಕ್ರಿಯೆ ನೀಡಲು ನಿರಾಕರಿಸಿದೆ. ಇದನ್ನೂ ಓದಿ: ಮಲೆಮಹದೇಶ್ವರನ ಭಕ್ತರಿಗೆ ಗುಡ್ ನ್ಯೂಸ್ – ಮಾದಪ್ಪನ ಬೆಟ್ಟಕ್ಕೆ ಮೆಟ್ಟಿಲುಗಳ ನಿರ್ಮಾಣ