Connect with us

Latest

ಭಾರತೀಯನಾಗಿರುವುದೇ ಅದೃಷ್ಟ, ಭಾರತ ರತ್ನ ಅಭಿಯಾನವನ್ನು ದಯವಿಟ್ಟು ನಿಲ್ಲಿಸಿ – ರತನ್‌ ಟಾಟಾ

Published

on

ಮುಂಬೈ: ನಾನು ಭಾರತೀಯನಾಗಿ ಹುಟ್ಟಿದ್ದಕ್ಕೆ ಅದೃಷ್ಟ ಪಡುತ್ತೇನೆ. ನನ್ನ ಪರವಾಗಿ ಪ್ರಶಸ್ತಿ ನೀಡುವಂತೆ ಅಭಿಯಾನ ನಡೆಸಬೇಡಿ ಎಂದು ಟಾಟಾ ಗ್ರೂಪ್‌ ಮುಖ್ಯಸ್ಥ ರತನ್‌ ಟಾಟಾ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಈ ಬಾರಿಯ ಭಾರತ ರತ್ನ ಗೌರವವನ್ನು ರತನ್‌ ಟಾಟಾ ಅವರಿಗೆ ನೀಡಬೇಕು. ಲಕ್ಷಾಂತರ ಜನರಿಗೆ ಟಾಟಾ ಕಂಪನಿ ಉದ್ಯೋಗ ನೀಡಿದೆ. ಸಾಮಾಜಿಕ ಕಾರ್ಯಕ್ಕೆ ಕೋಟ್ಯಂತರ ರೂ. ಹಣವನ್ನು ಟಾಟಾ ಗ್ರೂಪ್‌ ನೀಡಿದೆ. ಹೀಗಾಗಿ ಭಾರತ ರತ್ನ ಗೌರವಕ್ಕೆ ರತನ್‌ ಟಾಟಾ ಅರ್ಹ ವ್ಯಕ್ತಿ ಎಂದು ಹೇಳಿ #BharatRatnaForRatanTata ಹ್ಯಾಷ್‌ ಟ್ಯಾಗ್‌ ಹಾಕಿ ಅಭಿಯಾನ ನಡೆಸಲಾಗುತ್ತಿದೆ.

ಈ ವಿಚಾರ ತನ್ನ ಗಮನಕ್ಕೆ ಬರುತ್ತಿದ್ದಂತೆ ರತನ್‌ ಟಾಟಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಒಂದು ವರ್ಗ ವ್ಯಕ್ತಪಡಿಸುತ್ತಿರುವ ಭಾವನೆಯನ್ನು ನಾನು ಗೌರವಿಸುತ್ತೇನೆ. ಹೀಗಿದ್ದರೂ ಪ್ರಶಸ್ತಿ ವಿಚಾರವಾಗಿ ನಡೆಸುತ್ತಿರುವ ಅಭಿಯಾನವನ್ನು ನಿಲ್ಲಿಸಬೇಕೆಂದು ನಾನು ವಿನಯಪೂರ್ವಕವಾಗಿ ವಿನಂತಿಸಿಕೊಳ್ಳುತ್ತಿದ್ದೇನೆ. ನಾನು ಭಾರತೀಯನಾಗಿರುವುದು ಅದೃಷ್ಟ ಮತ್ತು ಭಾರತದ ಬೆಳವಣಿಗೆ ಮತ್ತು ಸಮೃದ್ಧಿಗೆ ಕೊಡುಗೆ ನೀಡಲು ಪ್ರಯತ್ನಿಸುತ್ತೇನೆ ಎಂದು ಹೇಳಿದ್ದಾರೆ.

ರತನ್‌ ಟಾಟಾ ಅವರ ಈ ಟ್ವೀಟ್‌ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. 10 ಸಾವಿರಕ್ಕೂ ಹೆಚ್ಚು ಜನ ರೀಟ್ವೀಟ್‌ ಮಾಡಿದ್ದರೆ 69 ಸಾವಿರಕ್ಕೂ ಹೆಚ್ಚು ಜನ ಲೈಕ್‌ ಮಾಡಿದ್ದಾರೆ.

ಯಾರಿಗೋ ಪ್ರಶಸ್ತಿ ಕೊಡುವಾಗ ನಿಮಗೆ ಯಾಕೆ ನೀಡಬಾರದು. ನೀವು ಭಾರತ ರತ್ನಕ್ಕೆ ಅರ್ಹ ವ್ಯಕ್ತಿ. ನಿಮಗೆ ಸಿಗಲೇಬೇಕು ಎಂದು ಜನ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

Click to comment

Leave a Reply

Your email address will not be published. Required fields are marked *