ಚಿಕ್ಕಮಗಳೂರು: ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ ವ್ಯಕ್ತಿಯೊಬ್ಬರ ಶವ ವರ್ಷದ ಬಳಿಕ ಪತ್ತೆಯಾಗಿದೆ. ಘಟನೆ ಕೊಪ್ಪ ಪಟ್ಟಣದ ಟಿಎಂ ರಸ್ತೆಯ ಬಳಿ ನಡೆದಿದೆ.
ನಗರದ ಪಾಳುಬಿದ್ದ ಮನೆಯೊಂದರಲ್ಲಿ ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದ್ದು, ಈ ಘಟನೆ ವರ್ಷದ ಹಿಂದೆಯೇ ನಡೆದಿದೆ ಎನ್ನಲಾಗಿದೆ. ಮೃತ ವ್ಯಕ್ತಿಯ ಗುರುತನ್ನು ಪತ್ತೆ ಮಾಡಲು ಸಾಧ್ಯವಾಗದ ಸ್ಥಿತಿಗೆ ಶವ ತಲುಪಿದೆ. ಇದನ್ನೂ ಓದಿ: ನಟೋರಿಯಸ್ ಮೋಸ್ಟ್ ವಾಂಟೆಡ್ ರೌಡಿ ಶೀಟರ್ ಅರೆಸ್ಟ್
Advertisement
Advertisement
Advertisement
ಪಾಳು ಬಿದ್ದ ಮನೆಯ ಮಾಲೀಕ ದುರಸ್ಥಿ ಮಾಡಲು ಹೋಗಿದ್ದಾಗ ಪ್ರಕರಣ ಬೆಳಕಿಗೆ ಬಂದಿದೆ. ಘಟನೆಯ ಬಗ್ಗೆ ಕೊಪ್ಪ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಇದನ್ನೂ ಓದಿ: ಅಕ್ರಮ ಬಡ್ಡಿ ವ್ಯವಹಾರ ಶಂಕೆ – ಮಹಿಳೆಯ ಮೇಲೆ ಶೂಟೌಟ್