ಬೆಂಗಳೂರು: ವಿಧಾನಸೌಧದ (Vidhan Soudha) ಆವರಣದಲ್ಲಿ ಭುವನೇಶ್ವರಿ ಕಂಚಿನ ಪ್ರತಿಮೆ (Bhuvaneshwari Bronze Statue) ನಿರ್ಮಾಣಕ್ಕೆ ಇಂದು ಗುದ್ದಲಿ ಪೂಜೆ ಮಾಡಲಾಗಿದೆ.
ವಿಧಾನಸೌಧದ ಪಶ್ಚಿಮ ದ್ವಾರದ ಮಧ್ಯ ಭಾಗದಲ್ಲಿ ನಿರ್ಮಾಣ ಆಗಲಿರುವ ಭುವನೇಶ್ವರಿ ಪ್ರತಿಮೆಗೆ ಸಿಎಂ ಸಿದ್ದರಾಮಯ್ಯ (CM Siddaramaiah) ಶಂಕುಸ್ಥಾಪನೆ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ (DCM DK Shivakumar), ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ, ಕನ್ನಡ ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಮೊದಲಾದವರು ಉಪಸ್ಥಿತರಿದ್ದರು.
Advertisement
Advertisement
ವಿಧಾನಸೌಧದ ಶಿಲ್ಪಿ ಕೆ. ಶ್ರೀಧರ್ ಮೂರ್ತಿ ನಿರ್ಮಾಣ ಮಾಡಲಿದ್ದು, ಭುವನೇಶ್ವರಿ ಪ್ರತಿಮೆ 31 ಟನ್ ತೂಕ ಹೊಂದಿದ್ದು, ಅಂದಾಜು 21. 24 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ.
Advertisement
ನವೆಂಬರ್ 1, 2013ಕ್ಕೆ ಕರ್ನಾಟಕ (Karnataka) ಎಂಬ ಹೆಸರು ನಾಮಕರಣವಾಗಿ 50 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಭುವನೇಶ್ವರಿ ಪ್ರತಿಮೆ ಸ್ಥಾಪನೆ ಮಾಡಲು ನಿರ್ಧಾರ ಮಾಡಿದೆ. ಇದನ್ನೂ ಓದಿ: ಮದ್ದೂರು ಶಾಸಕ ಉದಯ್ ಮನೆಯಲ್ಲೇ ಗನ್‌ಮ್ಯಾನ್ ಮೇಲೆ ಹಲ್ಲೆ ನಡೆಸಿತ್ತು ದರ್ಶನ್ ಗ್ಯಾಂಗ್!
Advertisement
4 ತಿಂಗಳ ಒಳಗೆ ಪ್ರತಿಮೆ ನಿರ್ಮಾಣ ಮಾಡಿ ಮುಗಿಸಲು ಡೆಡ್‌ಲೈನ್ ವಿಧಿಸಲಾಗಿದ್ದು, ಈ ವರ್ಷದ ಕನ್ನಡ ರಾಜ್ಯೋತ್ಸವದಂದು ಪ್ರತಿಮೆ ಲೋಕಾರ್ಪಣೆಯಾಗಲಿದೆ.