ರಾಮನಗರ: ಮಾಗಡಿ ಪಟ್ಟಣದಲ್ಲಿ ಮನೆಯ ಬಾಗಿಲು ಮುರಿದು ಚಿನ್ನಾಭರಣ, ಬೆಳ್ಳಿ ಹಾಗೂ ನಗದು ಕಳ್ಳತನ ಮಾಡಿದ್ದ ಪ್ರಕರಣದ ನಾಲ್ವರು ಆರೋಪಿಗಳನ್ನು ಮಾಗಡಿ ಪೊಲೀಸರು (Magadi Police) ಬಂಧಿಸಿದ್ದಾರೆ.
ಸಾಧಿಕ್, ಖಾಲಿದ್, ಹಂಜಾ ಹಾಗೂ ಚೂರಿಕಟ್ಟೆ ಶಿವ ಬಂಧಿತ ಆರೋಪಿಗಳು. ಬಂಧಿತರಿಂದ 4 ಕೋಟಿ ರೂ. ಮೌಲ್ಯದ 5 ಕೆಜಿ 500 ಗ್ರಾಂ ಚಿನ್ನಾಭರಣ, ನಗದು ಹಾಗೂ 1 ಆಲ್ಟೋ ಕಾರನ್ನು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಹೊಸ ವಿವಾದದಲ್ಲಿ ನಿತ್ಯಾನಂದ – ವರ್ಷಕ್ಕೆ 8.96 ಲಕ್ಷ, ಬೊಲಿವಿಯಾದಲ್ಲಿ ಬೆಂಗಳೂರಿನ 5 ಪಟ್ಟು ಭೂಮಿ ಲೀಸ್‌ಗೆ ಪಡೆದು ವಂಚನೆ
ಆರೋಪಿ ಸಾಧಿಕ್ ತನ್ನ ಸಹಚರರೊಂದಿಗೆ ಸೇರಿ ಕಾರಿನಲ್ಲಿ ಬಂದು, ಬೀಗ ಹಾಕಿದ ಮನೆಗಳನ್ನು ಗುರುತಿಸಿ, ಮನೆಯಲ್ಲಿ ಯಾರೂ ಇಲ್ಲವೆಂದು ಖಚಿತಪಡಿಸಿಕೊಂಡು ಬಳಿಕ ರಾತ್ರಿ ವೇಳೆ ಮನೆಯ ಬಾಗಿಲು ಮುರಿದು ಕಳ್ಳತನ ಮಾಡುತ್ತಿದ್ದರು. ಇದನ್ನೂ ಓದಿ: ರಾಯಚೂರಿನಲ್ಲಿ ಹೆಚ್ಚುತ್ತಿರುವ ಬೆಕ್ಕು ಜ್ವರ – 38 ಬೆಕ್ಕು ಸಾವು
ಈ ನಾಲ್ವರ ಗ್ಯಾಂಗ್ ತರೀಕೆರೆ, ಬೇಲೂರು, ಸಾಗರ ಟೌನ್, ಮೂಡಿಗೆರೆ, ಕೆ.ಆರ್.ಪೇಟೆ ಟೌನ್, ಮಂಡ್ಯ ಗ್ರಾಮಾಂತರ, ಹಳೇಬೀಡು, ಹೊಳೇನರಸಿಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 20ಕ್ಕೂ ಹೆಚ್ಚು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ. ಸದ್ಯ ನಾಲ್ವರು ಆರೋಪಿಗಳನ್ನು ಬಂಧಿಸಿರುವ ಮಾಗಡಿ ಪೊಲೀಸರು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಇದನ್ನೂ ಓದಿ: ರಾಜಣ್ಣಗೆ ಪರಮೇಶ್ವರ್ ನ್ಯಾಯ ಕೊಡಿಸೋ ಕೆಲ್ಸ ಮಾಡ್ತಾರೆ: ಡಿಕೆಶಿ