ಲಕ್ನೋ: ಅತ್ಯಾಚಾರಿಗಳ ವಿರುದ್ಧ ನೀಡಿದ್ದ ದೂರನ್ನು ಹಿಂಪಡೆಯಲು ನಿರಾಕರಿಸಿದ್ದಕ್ಕೆ ಸಂತ್ರಸ್ತೆಯ ಮೇಲೆ ನಾಲ್ವರು ಆರೋಪಿಗಳು ಆ್ಯಸಿಡ್ ಎರಚಿ ವಿಕೃತಿ ಮೆರೆದಿದ್ದಾರೆ.
ಉತ್ತರ ಪ್ರದೇಶದಲ್ಲಿ ದಿನೇ ದಿನೇ ಅತ್ಯಾಚಾರ ಪ್ರಕರಣಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿದ್ದು, ಮುಜಾಫರ್‌ನಗರದಲ್ಲಿ ತನ್ನನ್ನು ಅತ್ಯಾಚಾರಗೈದ ನಾಲ್ವರು ಕಾಮುಕರ ಮೇಲೆ ಕೊಟ್ಟಿದ್ದ ದೂರನ್ನು ವಾಪಾಸ್ ಪಡೆಯಲು ಸಂತ್ರಸ್ತೆ ಒಪ್ಪದಿದ್ದಕ್ಕೆ ಆಕೆಯ ಮೇಲೆ ಆ್ಯಸಿಡ್ ದಾಳಿ ನಡೆಸಲಾಗಿದೆ. 30 ವರ್ಷದ ಮಹಿಳೆ ಮೇಲೆ ನಾಲ್ವರು ದುರುಳರು ಆ್ಯಸಿಡ್ ದಾಳಿ ನಡೆಸಿದ್ದಾರೆ. ಪರಿಣಾಮ ಶೇ. 30ರಷ್ಟು ಸಂತ್ರಸ್ತೆ ದೇಹದ ಭಾಗ ಸುಟ್ಟಿದ್ದು, ಮೀರತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಕಾಮುಕರ ಅಟ್ಟಹಾಸ- ಶಿಕ್ಷಕಿ ಮೇಲೆ ಗ್ಯಾಂಗ್ ರೇಪ್, ಲೈಂಗಿಕ ಕಿರುಕುಳಕ್ಕೆ ಯುವತಿ ಬಲಿ
Advertisement
Advertisement
ಬುಧವಾರ ಸಂತ್ರಸ್ತೆ ಮೇಲೆ ಅತ್ಯಾಚಾರಗೈದು ನಾಲ್ವರು ಕಾಮುಕರು ಅಟ್ಟಹಾಸ ಮೆರೆದಿದ್ದರು. ಈ ಸಂಬಂಧ ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದರು. ಈ ವೇಳೆ ತಮ್ಮ ವಿರುದ್ಧ ನೀಡಿರುವ ದೂರನ್ನು ವಾಪಾಸ್ ತೆಗೆದುಕೊಂಡು ನಿನ್ನ ಪಾಡಿಗೆ ಸುಮ್ಮನಾಗು ಎಂದು ಆರೋಪಿಗಳು ಸಂತ್ರಸ್ತೆಗೆ ಬೆದರಿಕೆ ಹಾಕಿದ್ದರು. ಆದರೆ ಇದ್ಯಾವುದಕ್ಕೂ ಸಂತ್ರಸ್ತೆ ಬಗ್ಗದೆ ದೂರನ್ನು ಹಿಂಪಡೆಯಲು ನಿರಾಕರಿಸಿದಾಗ, ಆರೋಪಿಗಳು ಆಕೆಯ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ದುರುಳರ ಕ್ರೌರ್ಯಕ್ಕೆ ಮತ್ತೊಂದು ಬಲಿ – ಬದುಕಲಿಲ್ಲ ಬೆಂಕಿಯಲ್ಲಿ ಬೆಂದ ಉನ್ನಾವ್ ಸಂತ್ರಸ್ತೆ
Advertisement
Advertisement
ಈ ಬಗ್ಗೆ ಸಂತ್ರಸ್ತೆ ಪೊಲೀಸರಿಗೆ ಸಾಕಷ್ಟು ದೂರು ನೀಡಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಅತ್ಯಾಚಾರವೆಸೆಗಿರುವ ಬಗ್ಗೆ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಪೊಲೀಸರು ಪ್ರಕರಣ ಮುಚ್ಚಿ ಹಾಕಿದ್ದರು. ಆದ್ದರಿಂದ ಸಂತ್ರಸ್ತೆ ನೇರವಾಗಿ ನ್ಯಾಯಾಲಯಕ್ಕೆ ಆರೋಪಿಗಳ ವಿರುದ್ಧ ದೂರು ನೀಡಿದ್ದಾರೆ. ಇದನ್ನೂ ಓದಿ: ಮತ್ತಷ್ಟು ಎನ್‌ಕೌಂಟರ್‌ಗಳನ್ನು ಮಾಡಿ- ತೆಲಂಗಾಣ ಪೊಲೀಸ್ರಿಗೆ ಹೆಚ್ಚಾಯ್ತು ಡಿಮ್ಯಾಂಡ್
ಈ ಬಗ್ಗೆ ಪೊಲೀಸ್ ಅಧಿಕಾರಿಯೊಬ್ಬರು ಮಾತನಾಡಿ, ಸಂತ್ರಸ್ತೆ ಮನೆಗೆ ನುಗ್ಗಿ ನಾಲ್ವರು ಆರೋಪಿಗಳು ಆ್ಯಸಿಡ್ ದಾಳಿ ನಡೆಸಿದ್ದಾರೆ. ಸದ್ಯ ಸಂತ್ರಸ್ತೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇತ್ತ ಘಟನೆ ನಂತರ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಆದಷ್ಟು ಬೇಗ ಆರೋಪಿಗಳನ್ನು ಪತ್ತೆಮಾಡಿ ಕೈಗೆ ಕೋಳ ಹಾಕುತ್ತೇವೆ ಎಂದು ತಿಳಿಸಿದ್ದಾರೆ.