-3 ವಾಹನಗಳು ಸೀಜ್
ರಾಮನಗರ: ರಸ್ತೆಗಳಲ್ಲಿ ವೀಲ್ಹಿಂಗ್ (Wheeling) ಮಾಡಿ ವಾಹನ ಸವಾರರಿಗೆ ತೊಂದರೆ ಕೊಡುವ ಪುಂಡರ ಹಾವಳಿ ಹೆಚ್ಚಾಗಿದ್ದು, ಮಾಗಡಿ-ಬೆಂಗಳೂರು ಹೆದ್ದಾರಿಯಲ್ಲಿ ಬೈಕ್ ವೀಲ್ಹಿಂಗ್ ಮಾಡ್ತಿದ್ದ ನಾಲ್ವರು ಆರೋಪಿಗಳನ್ನ ಮಾಗಡಿ ಪೊಲೀಸರು (Magadi Police) ಬಂಧಿಸಿದ್ದಾರೆ.
ಹೆದ್ದಾರಿಯಲ್ಲಿ ಮೂರು ಬೈಕ್‌ಗಳಲ್ಲಿ ವೀಲ್ಹಿಂಗ್ ಮಾಡುತ್ತಾ ಇತರ ವಾಹನ ಸವಾರರಿಗರ ತೊಂದರೆ ಮಾಡುವುದಲ್ಲದೇ ಅದನ್ನ ವೀಡಿಯೋ ಮಾಡ್ತಿದ್ದ ವಾಹನ ಸವಾರರಿಗೆ ಪುಂಡರು ಬೆದರಿಕೆ ಹಾಕಿದ್ದಾರೆ. ಕೂಡಲೇ ವಾಹನ ಸವಾರರು ಪೊಲೀಸರಿಗೆ ಮಾಹಿತಿ ನೀಡಿದ್ದು, ತಕ್ಷಣ ಸ್ಥಳಕ್ಕೆ ಬಂದ ಮಾಗಡಿ ಪೊಲೀಸರು, ಮೂರು ಬೈಕ್ ಗಳನ್ನ ಸೀಜ್ ಮಾಡಿ, ಓರ್ವ ಯುವಕ ಸೇರಿ ಮೂವರು ಅಪ್ರಾಪ್ತ ಬಾಲಕರನ್ನ ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಪ್ರೇಯಸಿಯ ಒತ್ತಡಕ್ಕೆ ಮಣಿದು ಪತ್ನಿಯನ್ನೇ ಹತ್ಯೆಗೈದ ಬಿಜೆಪಿ ನಾಯಕ
ಭಾರತೀಯ ನ್ಯಾಯ ಸಂಹಿತೆ 281, 128, 177 ಐಎಂವಿ ಕಾಯ್ಡೆಯಡಿ ಪ್ರಕರಣ ದಾಖಲು ಮಾಡಿದ್ದಾರೆ. ಇದನ್ನೂ ಓದಿ: 71 ಜಿಲ್ಲಾಧ್ಯಕ್ಷರ ಪಟ್ಟಿ ಬಿಡುಗಡೆ ಬೆನ್ನಲ್ಲೇ ಭಿನ್ನಮತ ಸ್ಫೋಟ – ʻಕೈʼಗೆ ತಟ್ಟಿದ ಸಾಮೂಹಿಕ ರಾಜೀನಾಮೆ ಬಿಸಿ