ಮಡಿಕೇರಿ: ಹುಲಿ ಹಲ್ಲುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಮಾಲು ಸಮೇತ ಬಂಧಿಸುವಲ್ಲಿ ವಿರಾಜಪೇಟೆ ತಾಲೂಕು ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳ ಹಾಗೂ ತಿತಿಮತಿ ಪ್ರಾದೇಶಿಕ ವಲಯ ಅರಣ್ಯ ಘಟಕ ಯಶಸ್ವಿಯಾಗಿದೆ.
ತಾಲೂಕಿನ ಸುಳುಗೋಡು ಗ್ರಾಮದ ಗಣೇಶ್ ವೈ.ಸಿ. (20), ಕೋತೂರು ಗ್ರಾಮದ ಸಂತೋಷ್ ಕೆ.ವಿ (25), ಸುಳುಗೋಡು ಗ್ರಾಮದ ಸಂತೋಷ್ ಕುಮಾರ್ ಹೆಚ್.ಆರ್ (29) ಹಾಗೂ ಚಿಕ್ಕಮಂಡೂರು ಗ್ರಾಮದ ಪೆಮ್ಮಂಡ ಪವನ್ ಪೂವಯ್ಯ ಬಂಧಿತ ಆರೋಪಿಗಳು. ಇದನ್ನೂ ಓದಿ: ಬೊಮ್ಮಾಯಿ ಮಾತಾಡೋದು ನೋಡಿದ್ರೆ ಅನುಮಾನ ಬರ್ತಿದೆ: ಸಿದ್ದರಾಮಯ್ಯ
ಪೊನ್ನಂಪೇಟೆ ತಾಲೂಕಿನ ಗೋಣಿಕೊಪ್ಪದ ಚೆನ್ನಂಗೊಲ್ಲಿ ಬಸ್ ತಂಗುದಾಣದ ಬಳಿ ಅಕ್ರಮವಾಗಿ ಹುಲಿ ಹಲ್ಲುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಬಗ್ಗೆ ದೊರೆತ ಖಚಿತ ಮಾಹಿತಿಯನ್ನಾಧರಿಸಿ ಪೊಲೀಸರು ಹಾಗೂ ಅರಣ್ಯ ಸಿಬ್ಬಂದಿ ದಾಳಿ ನಡೆಸಿದರು. ಇದನ್ನೂ ಓದಿ: ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಪ್ರತಿಕ್ರಿಯೆ ಕೊಡಲ್ಲ: ಬೊಮ್ಮಾಯಿ ಗರಂ
ಬಂಧಿತರಿಂದ ಹುಲಿಯ ಆರು ಹಲ್ಲುಗಳು ಮತ್ತು ಕೃತ್ಯಕ್ಕೆ ಬಳಸಿದ ಎರಡು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ಪೊನ್ನಂಪೇಟೆ ಸಿವಿಲ್ ಜಡ್ಜ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಆರೋಪಿಗಳನ್ನು 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.