ನವದೆಹಲಿ: ನಾಲ್ವರು ವಿದ್ಯಾರ್ಥಿಗಳಿಗೆ ಚಾಕುವಿನಿಂದ ಇನ್ನೊಂದು ಶಾಲೆಯ ವಿದ್ಯಾರ್ಥಿಗಳು ಇರಿದಿರುವ ಘಟನೆ ಪೂರ್ವ ದೆಹಲಿಯಲ್ಲಿ ನಡೆದಿದೆ.
ಶುಕ್ರವಾರ ಮಯೂರ್ ವಿಹಾರ್‍ನಲ್ಲಿ 10ನೇ ತರಗತಿಯ ಪರೀಕ್ಷೆ ಬರೆದು ಹೊರಗೆ ವಿದ್ಯಾರ್ಥಿಗಳು ಬರುತ್ತಿದ್ದರು. ಅವರು ಹೊರಬರುವುದನ್ನೇ ಕಾಯುತ್ತಿದ್ದ ಇನ್ನೊಂದು ಶಾಲೆಯ ವಿದ್ಯಾರ್ಥಿಗಳು ನಾಲ್ಕು ವಿದ್ಯಾರ್ಥಿಗಳನ್ನು ಬೆನ್ನಟ್ಟಿದ್ದಾರೆ. ಇದನ್ನು ಅರಿತ ಆ ವಿದ್ಯಾರ್ಥಿಗಳು ತಪ್ಪಿಸಿಕೊಳ್ಳಲು ಮುಂದಾಗಿದ್ದಾರೆ. ಆದರೂ ಅವರನ್ನು ಬಿಡದೇ ಈ ವಿದ್ಯಾರ್ಥಿಗಳು ಅಟ್ಯಾಕ್ ಮಾಡಿ ಚಾಕುವಿನಿಂದ ಇರಿದಿದ್ದಾರೆ. ಇದನ್ನೂ ಓದಿ: ವೈದ್ಯರ ನಿರ್ಲಕ್ಷ್ಯಕ್ಕೆ ಹೆರಿಗೆ ವೇಳೆ ತುಂಬು ಗರ್ಭಿಣಿ ಸಾವು
Advertisement
Advertisement
ಈ ಕುರಿತು ಅಧಿಕಾರಿಗಳು ಮಾತನಾಡಿದ್ದು, ಗಾಯಗೊಂಡ ಮೂವರು ವಿದ್ಯಾರ್ಥಿಗಳು ಎಲ್‍ಬಿಎಸ್ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದ ನಂತರ ಬಿಡುಗಡೆ ಮಾಡಲಾಗಿದೆ. ಇನ್ನೊಬ್ಬ ವಿದ್ಯಾರ್ಥಿ ಏಮ್ಸ್ ಟ್ರಾಮಾ ಸೆಂಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಗಾಯಗೊಂಡ ಎಲ್ಲ ವಿದ್ಯಾರ್ಥಿಗಳು 15 ರಿಂದ 16 ವರ್ಷದೊಳಗಿನವರು ಎಂದು ತಿಳಿಸಿದ್ದಾರೆ.
Advertisement
ಘಟನೆಗೆ ಸಂಬಂಧಿಸಿದಂತೆ ಪಾಂಡವ ನಗರ ಪೊಲೀಸ್ ಠಾಣೆಗೆ ಕರೆಗಳು ಬಂದಿದ್ದು, ಸ್ಥಳಕ್ಕೆ ಬಂದಾಗ ನಾಲ್ವರು ಅಪ್ರಾಪ್ತ ಬಾಲಕರು ತೀವ್ರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ. ಭಾರತೀಯ ದಂಡ ಸಂಹಿತೆಯ(ಐಪಿಸಿ) ಸಂಬಂಧಿತ ಸೆಕ್ಷನ್‍ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಲವ್ ಇದ್ಮೇಲೆ ಜಿಹಾದ್ ಯಾಕೆ ಬರುತ್ತೆ – ಇಬ್ರಾಹಿಂ ತಿರುಗೇಟು
Advertisement
ಸಿಸಿಟಿವಿಯ ದೃಶ್ಯಗಳನ್ನು ಇಟ್ಟುಕೊಂಡು ಪ್ರಸ್ತುತ ಚಾಕು ದಾಳಿಯ ಕುರಿತು ತನಿಖೆ ನಡೆಯುತ್ತಿದ್ದು, ದಾಳಿಕೋರ ವಿದ್ಯಾರ್ಥಿಗಳು ಆರ್.ಎಸ್ ಬಾಲ ವಿದ್ಯಾಲಯದವರು ಎಂದು ತಿಳಿದುಬಂದಿದೆ.