ಚಿತ್ರದುರ್ಗ: ಮರಕ್ಕೆ ಬೊಲೆರೊ ಡಿಕ್ಕಿಯಾಗಿ ನಾಲ್ವರು ದುರ್ಮರಣಕ್ಕೀಡಾಗಿರುವ ಘಟನೆ ಚಿತ್ರದುರ್ಗ (Chitradurga) ಜಿಲ್ಲೆ ಹೊಳಲ್ಕೆರೆ ತಾಲೂಕಿನ ಅಂದನೂರು ಗ್ರಾಮದ ಬಳಿ ನಡೆದಿದೆ.
ದಾವಣಗೆರೆ ತಾಲೂಕಿನ ಅಣಜಿ ಗ್ರಾಮದಿಂದ ಕಲ್ಲವ್ವ ನಾಗತಿಹಳ್ಳಿಗೆ ಹಿಂದಿರುಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಬೊಲೆರೊ ಮರಕ್ಕೆ ಡಿಕ್ಕಿಯಾದ ಪರಿಣಾಮ, ಕಲ್ಲವ್ವ ನಾಗತಿಹಳ್ಳಿ ಗ್ರಾಮದ ಗಿರಿರಾಜ್ (46), ಕಿರಣ್ (25) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅರುಣ್ (32) ಹಾಗೂ ಹನುಮಂತ (32) ದಾವಣಗೆರೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ಒಂದೇ ದಿನ ರಾಜ್ಯದ 7 ಜಿಲ್ಲೆಗಳಿಗೆ ಹುಸಿ ಬಾಂಬ್ ಬೆದರಿಕೆ
ಮೃತ ಕಾರ್ಮಿಕರು ಅಡಿಕೆ ಸುರಿಯುವ ಕೆಲಸ ಮುಗಿಸಿ ಹಿಂದಿರುಗುತ್ತಿದ್ದ ವೇಳೆ ಅಪಘಾತ ಸಂಭವಿಸಿದ್ದು, ಇನ್ನುಳಿದ ನಾಲ್ವರಿಗೆ ಗಂಭೀರ ಗಾಯಗಳಾಗಿವೆ. ಅವರಲ್ಲಿ ಇಬ್ಬರ ಸ್ಥಿತಿ ಶೋಚನೀಯವಾಗಿದ್ದು, ಗಾಯಾಳುಗಳನ್ನು ದಾವಣಗೆರೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಪ್ರಕರಣ ಚಿಕ್ಕಜಾಜೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

