ಕಲಬುರಗಿ: ಮಹೀಂದ್ರ ಪಿಕಪ್ ವಾಹನ ಮತ್ತು ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ಜಿಲ್ಲೆಯ ಕಮಲಾಪುರ ತಾಲೂಕಿನ ಮರಗುತ್ತಿ ಕ್ರಾಸ್ ಬಳಿ ನಡೆದಿದೆ.
ಭಾರ್ಗವ್ ಕೃಷ್ಣ (55), ಪತ್ನಿ ಸಂಗೀತಾ (45), ಪುತ್ರ ಉತ್ತಮ್ ರಾಘವನ್ (28) ಹಾಗೂ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
Advertisement
ಮೃತರೆಲ್ಲರೂ ಹೈದರಾಬಾದ್ ನಗರ ನಿವಾಸಿಗಳು. ಹೈದರಾಬಾದ್‌ನಿಂದ ಗಾಣಗಾಪುರ ದತ್ತನ ದೇಗುಲಕ್ಕೆ ಹೋಗುತ್ತಿದ್ದರು. ಈ ವೇಳೆ ಭೀಕರ ಅಪಘಾತ ಸಂಭವಿಸಿದೆ.
Advertisement
ಮೃತದೇಹಗಳನ್ನ ಕಲಬುರಗಿ ಜಿಲ್ಲಾಸ್ಪತ್ರೆ ಶವಗಾರಕ್ಕೆ ರವಾನೆ ಮಾಡಲಾಗಿದೆ. ಈ ಸಂಬಂಧ ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.