ವಿಜಯಪುರದಲ್ಲಿ ಕಾರು-ಲಾರಿ ಭೀಕರ ಅಪಘಾತ; ಸ್ಥಳದಲ್ಲೇ ನಾಲ್ವರು ಸಾವು

Public TV
0 Min Read
vijayapura car accident

ವಿಜಯಪುರ: ಇಲ್ಲಿನ ಬಬಲೇಶ್ವರ ತಾಲೂಕಿನ ಅರ್ಜುಣಗಿ ಗ್ರಾಮದ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಕಾರು ಹಾಗೂ ಲಾರಿ ಮಧ್ಯೆ ಭೀಕರ ಅಪಘಾತವಾಗಿ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ. ಇಬ್ಬರು ಪುರುಷರು, ಓರ್ವ ಮಹಿಳೆ, ಓರ್ವ ಬಾಲಕ ಸಾವಿಗೀಡಾಗಿದ್ದಾರೆ. ಮೃತರ ಹೆಸರು ಇನ್ನು ತಿಳಿದು ಬಂದಿಲ್ಲ.

ವಿಜಯಪುರದಿಂದ ಜಮಖಂಡಿಗೆ ಕಾರು ಹೊರಟಿತ್ತು. ಜಮಖಂಡಿ ಕಡೆಯಿಂದ ವಿಜಯಪುರಕ್ಕೆ ಲಾರಿ ಬರುವ ವೇಳೆ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಬಬಲೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share This Article