ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಸಂಪುಟದ ಸಚಿವರಾಗಿ (Cabinet Ministers) ಕರ್ನಾಟಕದ (Karnataka) ನಾಲ್ವರು ಸದಸ್ಯರು ಪ್ರಮಾಣವಚನ ಸ್ವೀಕರಿಸಿದರು.
ಕೇಂದ್ರ ಸಚಿವರಾಗಿ ಹೆಚ್‌ಡಿ ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ, ವಿ ಸೋಮಣ್ಣ ಹಾಗೂ ಶೋಭಾ ಕರಂದ್ಲಾಜೆ ಪ್ರಮಾಣವಚನ ಸ್ವೀಕರಿಸಿದ್ದಾರೆ. ಮೊದಲಿಗೆ ದೇವರ ಹೆಸರಲ್ಲಿ ಹೆಚ್‌ಡಿಕೆ ಕೇಂದ್ರ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಇದನ್ನೂ ಓದಿ: ದೇವರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಪ್ರಲ್ಹಾದ್ ಜೋಶಿ
ಪ್ರಹ್ಲಾದ್ ಜೋಶಿ ಹಾಗೂ ಶೋಭಾ ಕರಂದ್ಲಾಜೆ ಅವರು ಎರಡನೇ ಬಾರಿಗೆ ಮೋದಿ ಸಂಪುಟ ಸಚಿವರಾಗಿದ್ದಾರೆ. ಜೊತೆಗೆ ವಿ ಸೋಮಣ್ಣ ಅವರು ಕೂಡ ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕಾರ ಮಾಡಿದರು. ಇದನ್ನೂ ಓದಿ: 4 ಬಾರಿ ಸಿಎಂ, 6 ಬಾರಿ ಸಂಸದ – ಮಧ್ಯಪ್ರದೇಶದ ಮಾಮಾ ಈಗ ಕೇಂದ್ರ ಸಚಿವ